Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ರಾಜ್ಯ ದೇಶಕ್ಕೇ ಮಾದರಿಯಾಗಿದೆ : ಗುಜರಾತ್, ಯುಪಿ ಮಾಡಲ್ ನ ಅಗತ್ಯವಿಲ್ಲ : ಬಿ.ಕೆ.ಹರಿಪ್ರಸಾದ್ ಅಸಮಾಧಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಕರ್ನಾಟಕ ರಾಜ್ಯ ದೇಶಕ್ಕೇ ಮಾದರಿಯಾಗಿದೆ : ಗುಜರಾತ್, ಯುಪಿ ಮಾಡಲ್ ನ ಅಗತ್ಯವಿಲ್ಲ : ಬಿ.ಕೆ.ಹರಿಪ್ರಸಾದ್ ಅಸಮಾಧಾನ

ಮೇ 2, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 2 : ಪ್ರಗತಿಯಲ್ಲ್ಲಿ ಕರ್ನಾಟಕ ದೇಶಕ್ಕೇ ಮಾದರಿಯಾಗಿದ್ದು, ಗುಜರಾತ್ ಮತ್ತು ಉತ್ತರಪ್ರದೇಶದ ಮಾಡೆಲ್ ಇಲ್ಲಿಗೆ ಅಗತ್ಯವಿಲ್ಲವೆಂದು ವಿದಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಪ್ರಗತಿಯಲ್ಲಿ ಉತ್ತರ ಪ್ರದೇಶಕ್ಕಿಂತ 200 ವರ್ಷ ಮತ್ತು ಗುಜರಾತ್ ಗಿಂತ 50 ವರ್ಷ ಮುಂದಿದೆ. ಆದರೂ ಕರ್ನಾಟಕಕ್ಕೆ ಎರಡು ರಾಜ್ಯಗಳ ಮಾಡಲ್ ನ್ನು ಅಳವಡಿಸುವ ಬಿಜೆಪಿ ಹೇಳಿಕೆ ಸರಿಯಲ್ಲವೆಂದು ಹೇಳಿದರು.
ಶಾಸಕರ ಖರೀದಿಯ ಮೂಲಕ ರಚನೆಯಾಗಿರುವ ಬಿಜೆಪಿ ಸರ್ಕಾರ ಜನಮನ್ನಣೆಯನ್ನು ಕಳೆದುಕೊಂಡಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವ ಸಮೂಹಕ್ಕಾಗಿ ಯಾವುದೇ ಕಾಳಜಿಯ ಕಾರ್ಯಕ್ರಮಗಳು ಜಾರಿಯಾಗಿಲ್ಲ. ಸರ್ಕಾರ ರಚಿಸುವಾಗ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಇದು ಡಬಲ್ ಎಂಜಿನ್ ಸರ್ಕಾರವಲ್ಲ, ಡಬಲ್ ದೋಖಾ ಸರ್ಕಾರ ಎಂದು ಟೀಕಿಸಿದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗ ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಇವರ ಭರವಸೆಯ ಪ್ರಕಾರ ಕಳೆದ 9 ವರ್ಷಗಳಲ್ಲಿ 18 ಲಕ್ಷ ಮಂದಿಗೆ ಉದ್ಯೋಗ ಸಿಗಬೇಕಾಗಿತ್ತು. ಆದರೆ ಇಂದಿಗೂ ಕೇಂದ್ರ ಸರ್ಕಾರದ 40 ಲಕ್ಷ ಮತ್ತು ರಾಜ್ಯದಲ್ಲಿ ಎರಡೂವರೆ ಲಕ್ಷ ಉದ್ಯೋಗಗಳು ಭರ್ತಿಯಾಗದೆ ಖಾಲಿ ಉಳಿದಿವೆ ಎಂದು ಆರೋಪಿಸಿದರು.
ಕಾಂಗ್ರೆಸ್ ನ ಉಚಿತ ಭಾಗ್ಯಗಳನ್ನು ಟೀಕಿಸುತ್ತಲೇ ಬರುತ್ತಿದ್ದ ವಿಶ್ವ ಗುರು, ಇತ್ತೀಚೆಗೆ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿದ್ದ ಉಚಿತ ಭಾಗ್ಯಗಳನ್ನು ಯಾಕೆ ಗಮನಿಸಲಿಲ್ಲ ಎಂದು ಪ್ರಶ್ನಿಸಿದ ಹರಿಪ್ರಸಾದ್, ಬಿಜೆಪಿ ಸರ್ಕಾರ ಈ ಹಿಂದೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳ ಹೆಸರುಗಳನ್ನು ಬದಲಾಯಿಸಿ ತನ್ನದೆಂದು ಹೇಳಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೊಟ್ಟೆ ಕದ್ದವರು ಇದೀಗ ಪ್ರತಿದಿನ ಹಾಲು ನೀಡುತ್ತೇವೆ ಎಂದು ಘೋಷಣೆ ಮಾಡುವ ಮೂಲಕ ಮೂಗಿನ ಮೇಲೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚಾಮರಾಜನಗರಕ್ಕೆ ಹುಲಿ ನೋಡಲು ಬಂದ ವಿಶ್ವಗುರು ಆಮ್ಲಜನಕದ ಕೊರತೆಯಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ ಹೇಳುವ ಸೌಜನ್ಯವನ್ನು ತೋರಿಲ್ಲ. ತನ್ನನ್ನು ಎಲ್ಲಿ ಮಾರಾಟ ಮಾಡಿ ಬಿಡುತ್ತಾರೆ ಎನ್ನುವ ಆತಂಕದಲ್ಲಿ ಹುಲಿ ಕೂಡ ಕಣ್ಣಿಗೆ ಬಿದ್ದಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೆ ಜೇಮ್ಸ್ ಬಾಂಡ್ ನಂತೆ ಬಂದು ಹೋಗಿದ್ದಾರೆ ಎಂದು ಹರಿಪ್ರಸಾದ್ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ನಗರಾಧ್ಯಕ್ಷ ಬಿ.ವೈ.ರಾಜೇಶ್ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK : ಮಡಿಕೇರಿ ಜನೋತ್ಸವ ದಸರಾ ಪ್ರಯುಕ್ತ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಅಕ್ಟೋಬರ್ 16…

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026

ಎಸ್.ಐ.ಆರ್. ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 15, 2026

ಸುಂಟಿಕೊಪ್ಪ ಮಲಯಾಳಿ ಸಮಾಜದ 19ನೇ ವರ್ಷದ ಓಣಂ ಆಚರಣೆ; ಸಮಾಜದ ಒಗ್ಗಟ್ಟು ಮತ್ತು ಸಂಘಟನೆ ಎಲ್ಲರಿಗೂ ಮಾದರಿ: ಶಾಸಕ ಡಾ. ಮಂತರ್ ಗೌಡ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.