Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೈಯುಕ್ತಿಕ ತೇಜೋವಧೆ ಮಾಡುವುದನ್ನು ತಕ್ಷಣ ನಿಲ್ಲಿಸಿ : ಕಾಂಗ್ರೆಸ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೈಯುಕ್ತಿಕ ತೇಜೋವಧೆ ಮಾಡುವುದನ್ನು ತಕ್ಷಣ ನಿಲ್ಲಿಸಿ : ಕಾಂಗ್ರೆಸ್ ಒತ್ತಾಯ*

ಮೇ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 5 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರ ವಿರುದ್ಧ ಬಿಜೆಪಿ ಮಂದಿ ವೈಯುಕ್ತಿಕ ತೇಜೋವಧೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಕ್ಷೇತ್ರದ ಕಾಂಗ್ರೆಸ್ ವಕ್ತಾರ ಬಿ.ಎಸ್.ತಮ್ಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ವಿರಾಜಪೇಟೆ ಕ್ಷೇತ್ರಕ್ಕೆ ಒಬ್ಬ ಉತ್ತಮ ವ್ಯಕ್ತಿತ್ವದ, ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಯುವಕನನ್ನು ಕಣಕ್ಕಿಳಿಸಿದೆ. ಇವರಿಗೆ ದೊರೆಯುತ್ತಿರುವ ಜನ ಬೆಂಬಲದಿಂದ ಭಯಗೊಂಡಿರುವ ಬಿಜೆಪಿಯ ಮನು ಮುತ್ತಪ್ಪ ಹಾಗೂ ಅಡ್ಡಂಡ ಕಾರ್ಯಪ್ಪ ಅವರು, ಪೊನ್ನಣ್ಣ ಅವರ ತೇಜೋವಧೆಯಲ್ಲಿ ತೊಡಗಿದ್ದಾರೆ. ವೃತ್ತಿಪರವಾದ ವಕಾಲತ್ತುಗಳನ್ನು ಆಧರಿಸಿ ಅಪಪ್ರಾಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮಂದಿ ಎಷ್ಟೇ ತೇಜೋವಧೆಯಲ್ಲಿ ತೊಡಗಿದರೂ ಪೊನ್ನಣ್ಣ ಅವರು ಅದಕ್ಕೆ ಪ್ರತಿಕ್ರಿಯೆ ನೀಡದೆ ಅಭಿವೃದ್ಧಿಪರ ಚಿಂತನೆಯೊಂದಿಗೆ ಮತಯಾಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ, ಭ್ರಷ್ಟಚಾರ ರಹಿತ ಆಡಳಿತ ಮತ್ತು ಸಾಮರಸ್ಯ ಜೀವನದ ನೆಲೆಗಟ್ಟಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಉದ್ದೇಶದಿಂದ ನಾವು ವೈಯುಕ್ತಿಕ ಟೀಕೆ ಮತ್ತು ಅಪಪ್ರಚಾರ ಮಾಡುವುದಿಲ್ಲ. ಜಿಲ್ಲೆಯ ಬಿಜೆಪಿ ನಾಯಕರ ಹಾಗೂ ಅವರ ಹಿಂಬಾಲಕರ ಸೋಗಲಾಡಿತನವನ್ನು ಬಯಲು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಮನು ಮುತ್ತಪ್ಪ ಹಾಗೂ ಅಡ್ಡಂಡ ಕಾರ್ಯಪ್ಪ ಅವರು ಮಾಡುತ್ತಿರುವ ಆಧಾರ ರಹಿತ ಟೀಕೆಗಳಿಗೆ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರ ಸಹಮತ ಇದೆಯೇ ಎಂದು ಪ್ರಶ್ನಿಸಿದ ತಮ್ಮಯ್ಯ, ಡಾ.ಮಾಧವ ಗಾಡ್ಗೀಳ್ ವರದಿ ಮತ್ತು ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಎ.ಕೆ.ಸುಬ್ಬಯ್ಯ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ನಡೆದ ಹೋರಾಟದಲ್ಲಿ ಕೆ.ಜಿ.ಬೋಪಯ್ಯ ಅವರು ಸಕ್ರಿಯ ಪಾತ್ರವಹಿಸಿದ್ದರು. ಇದೀಗ ಚುನಾವಣೆಯ ಸೋಲಿನ ಭಯದಲ್ಲಿ ಸುಬ್ಬಯ್ಯ ಅವರು ಅಪಥ್ಯರಾದರೇ ಎಂದು ತಮ್ಮಯ್ಯ ಕೇಳಿದರು.
ಇತ್ತೀಚೆಗೆ ನಡೆದ ಅಪ್ಪಚ್ಚ್ಚೆಟ್ಟೋಳಂಡ ಹಾಕಿ ನಮ್ಮೆಗೆ ಮನುಮುತ್ತಪ್ಪ ಅವರು ಸ್ವತಃ ಪೊನ್ನಣ್ಣ ಅವರ ಮನೆಗೆ ತೆರಳಿ ವಂತಿಗೆ ಪಡೆದಿದ್ದಾರೆ. ಹಾಕಿ ನಮ್ಮೆಯ ಅಂತಿಮ ಪಂದ್ಯಾವಳಿಯ ಸಂದರ್ಭ ಪೊನ್ನಣ್ಣ ಅವರ ಕುಟುಂಬ ಪಾಲ್ಗೊಂಡಿತ್ತು. ವಂತಿಗೆ ಸಂಗ್ರಹಿಸುವಾಗ ಇಲ್ಲದ ಮಡಿವಂತಿಕೆ ಚುನಾವಣೆಯ ಸಂದರ್ಭದಲ್ಲಿ ಕಾಣಿಸಿಕೊಂಡಿದೆ ಎಂದು ಆರೋಪಿಸಿದರು.
ತೀರ್ಥ ಕ್ಷೇತ್ರಗಳಲ್ಲಿ ಅನ್ನದಾನ ಮಾಡುವುದಕ್ಕೆ ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಮಹತ್ವದ ಪಾತ್ರವಿದೆ. ಆದರೆ, ತಲಕಾವೇರಿಯಲ್ಲಿ ಕೊಡವ ಏಕೀಕರಣ ರಂಗ, ಕೈಲಾಸ ಆಶ್ರಮ ಮತ್ತು ಹಿಂದೂ ಜಾಗರಣ ವೇದಿಕೆ ನಡೆಸುತ್ತಿದ್ದ ಅನ್ನದಾನವನ್ನು ನಿಲ್ಲಿಸಲು ಮನುಮುತ್ತಪ್ಪ ಅವರು ಕಾರಣಕರ್ತರಾಗಿದ್ದಾರೆ. ಆದ್ದರಿಂದ ಇವರು ಜೀವಮಾನವಿಡೀ ತಲಕಾವೇರಿ ಕ್ಷೇತ್ರದ ವಿಚಾರದಲ್ಲಿ ಮಾತನಾಡುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.
ಕಳೆದ 20 ವರ್ಷಗಳಿಂದ ಶಾಸಕರಾದವರಿಗೆ ಸ್ಪರ್ಧಿಸಲು ಅವಕಾಶ ನೀಡುವ ಬದಲು ಅಡ್ಡಂಡ ಕಾರ್ಯಪ್ಪ ಹಾಗೂ ಮನು ಮುತ್ತಪ್ಪ ಅವರು ಟಿಕೆಟ್ ಪಡೆದುಕೊಂಡು ಬರಬಹುದಿತ್ತಲ್ಲ ಎಂದು ತಮ್ಮಯ್ಯ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಅವರದೇ ಸರ್ಕಾರವಿದ್ದರೂ, ವಿಧಾನಸಭೆಯಲ್ಲಿ ಹುಲಿಮದುವೆ ಮಾಡುವ ವಿಷಯ ಪ್ರಸ್ತಾಪ ಮಾಡಿರುವ ಶಾಸಕರು, ಇಲ್ಲಿಯವರೆಗೆ ಎಷ್ಟು ಹುಲಿ ಮದುವೆ ಮಾಡಿದ್ದಾರೆ. ಕೆ.ಜಿ.ಬೋಪಯ್ಯ ಅವರು ಈ ಹಿಂದೆ ಎ.ಎಸ್.ಪೊನ್ನಣ್ಣ ಅವರ ಕಚೇರಿಗೆ ತೆರಳಿ ಕಾನೂನು ಸಲಹೆಗಳನ್ನು ಪಡೆದಿದ್ದಾರೆ. ಆದರೆ ಇಂದು ವೈಯುಕ್ತಿಕ ತೇಜೋವಧೆ ಮಾಡುವವರ ಬಗ್ಗೆ ಯಾಕೆ ಮೌನವಾಗಿದ್ದಾರೆ. ಕೊಡಗನ್ನು ಜಮ್ಮಾ ಸಮಸ್ಯೆ ಅತಿಯಾಗಿ ಕಾಡಿದಾಗ ಎ.ಕೆ.ಸುಬ್ಬಯ್ಯ ಅವರು, ಹೋರಾಟ ನಡೆಸಿದ ಪರಿಣಾಮ ಜಿಲ್ಲೆಯ ಬೆಳೆಗಾರರು ಇಂದು ನೆಮ್ಮದಿಯಿಂದ ಇದ್ದಾರೆ. ಇದನ್ನು ಬಿಜೆಪಿ ಮಂದಿ ಯಾಕೆ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ಅಡ್ಡಂಡ ಕಾರ್ಯಪ್ಪ ಅವರು ಜನತಾದಳದಲ್ಲಿ ಇದ್ದಾಗ ಪ್ರಚಾರಕ್ಕಾಗಿ ಎ.ಕೆ.ಸುಬ್ಬಯ್ಯ ಅವರ ನೆರವು ಪಡೆದುಕೊಂಡು ಜಯಶಾಲಿಯಾಗಿದ್ದರು. ಅಲ್ಲದೆ ಇದೇ ಸಂದರ್ಭ ಕೆ.ಜಿ.ಬೋಪಯ್ಯ ಸೇರಿದಂತೆ ಇತರ ನಾಯಕರನ್ನು ಟೀಕಿಸಿದ್ದರು. ಕಾರ್ಯಪ್ಪ ಅವರು ತಮ್ಮ ನಿಷ್ಠೆಯನ್ನು ಬದಲಿಸಿರುವುದನ್ನು ದಕ್ಷಿಣ ಕೊಡಗಿನ ಜನ ಇನ್ನೂ ಮರೆತ್ತಿಲ್ಲ.
ಗಾಳಿ ಬಂದೆಡೆ ತೂರಿಕೊಳ್ಳುವ ಮನು ಮುತ್ತಪ್ಪ ಹಾಗೂ ಅಡ್ಡಂಡ ಕಾರ್ಯಪ್ಪ ಅವರನ್ನು ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿರುವ ಕೆ.ಜಿ.ಬೋಪಯ್ಯ ಅವರಿಗೆ ಕ್ಷೇತ್ರದ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿ.ಎಸ್.ತಮ್ಮಯ್ಯ ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಕೇಟೋಳಿರ ಉತ್ತಪ್ಪ, ಕಲಿಯಂಡ ಕೌಶಿ ಕುಶಾಲಪ್ಪ, ಬಿದ್ದಂಡ ತೇಜ ಕುಮಾರ್ ಹಾಗೂ ಪುತ್ತರೀರ ಪಪ್ಪು ತಿಮ್ಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.