Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಮತ ನೀಡಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಮತ ನೀಡಿ

ಮೇ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 5 : ಕೇಂದ್ರ ಹಾಗೂ ರಾಜ್ಯ ಸರ್ಕಾರ ದುಡಿಯುವ ವರ್ಗವನ್ನು ನಿರ್ಲಕ್ಷ್ಯಿಸುತ್ತಲೇ ಬರುತ್ತಿರುವುದರಿಂದ ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನನಗೆ ಜನರು ಮತ ನೀಡಿ ಗೆಲುವು ತಂದುಕೊಡಬೇಕೆಂದು ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರದಲ್ಲಿ 11ನೇ ಸಂಖ್ಯೆಯಲ್ಲಿರುವ ಕುಡುಗೋಲು, ತೆನೆ ಗುರುತಿಗೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕೆಂದು ಕೋರಿದರು.
ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಿಪಿಐ ಮತ್ತು ಎಐಟಿಯುಸಿ ಸಂಘಟನೆ ಜಂಟಿಯಾಗಿ ದುಡಿಯುವ ವರ್ಗದ ಪರ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಕಾರ್ಮಿಕ ವರ್ಗ ನಿತ್ಯ ಅನುಭವಿಸುತ್ತಿರುವ ಸಂಕಷ್ಟ, ರೈತರ ಸಮಸ್ಯೆಗಳು, ವನ್ಯ ಜೀವಿ ದಾಳಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದೆ.
ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕಾಗಿ “ಸೂರಿಗಾಗಿ ಸಮರ” ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟವನ್ನು ನಡೆಸಲಾಗಿತ್ತು. ಆದರೆ ಆಡಳಿತ ನಡೆಸುವವರಿಂದ ಕೇವಲ ಭರವಸೆ ಮಾತ್ರ ದೊರೆಯಿತೇ ಹೊರತು ಇಲ್ಲಿಯವರೆಗೆ ನಿವೇಶನ ರಹಿತರಿಗೆ ಸೂರು ಸಿಕ್ಕಿಲ್ಲ್ಲ ಎಂದು ಟೀಕಿಸಿದರು.
ಆಡಳಿತ ವ್ಯವಸ್ಥೆ ಯಾವುದೇ ಹೋರಾಟಕ್ಕೆ ಸ್ಪಂದನೆ ನೀಡದೆ ಇರುವುದರಿಂದ ಅನಿವಾರ್ಯವಾಗಿ ಸಿಪಿಐ ಪಕ್ಷ ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಬೇಕಾಗಿದೆ. ಹಣ ಇರುವ ಪಕ್ಷಗಳು ಹಣ ನೀಡಿ ಶಕ್ತಿ ಪ್ರದರ್ಶನ ಮಾಡುತ್ತಿವೆ. ಆದರೆ, ದುಡಿಯುವ ವರ್ಗದ ಪಕ್ಷವಾಗಿರುವ ಸಿಪಿಐ ಹಣ ನೀಡಿ ರಾಜಕೀಯ ಮಾಡಲು ಸಾಧ್ಯವಿಲ್ಲ. ಬಡವರೇ ಈ ಪಕ್ಷದ ಬೆನ್ನೆಲುಬಾಗಿದ್ದು, ಎಲ್ಲರೂ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೈತರು,
ತೋಟದ ಕಾರ್ಮಿಕರು, ತಲೆಹೊರೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಸ್ಪತ್ರೆಗಳ ಸ್ಪಚ್ಛತಾ ಸಿಬ್ಬಂದಿಗಳು, ಗ್ರಾ.ಪಂ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಕೆಎಸ್‍ಆರ್‍ಟಿಸಿ ಸಿಬ್ಬಂದಿಗಳು ನನಗೆ ಮತ ನೀಡಿ ಗೆಲ್ಲಿಸಬೇಕೆಂದು ಸೋಮಪ್ಪ ಮನವಿ ಮಾಡಿದರು.
::: ಭರವಸೆ ಈಡೇರಿಲ್ಲ :::
ಒಂಭತ್ತು ವರ್ಷಗಳ ಹಿಂದೆ ಪ್ರಧಾನಮಂತ್ರಿಗಳು ಎರಡು ಕೋಟಿ ಉದ್ಯೋಗ ಮತ್ತು ಪ್ರತೀ ಕುಟುಂಬದ ಖಾತೆಗೆ ವಶಪಡಿಸಿಕೊಳ್ಳಲಾದ ಕಪ್ಪು ಹಣದಲ್ಲಿ ತಲಾ 15 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಈ ಭರವಸೆಗಳು ಈಡೇರಿಲ್ಲ. ಆದ್ದರಿಂದ ಈ ದೇಶ ಮತ್ತು ರಾಜ್ಯಕ್ಕೆ ಪರ್ಯಾಯ ಶಕ್ತಿಯ ಅಗತ್ಯವಿದೆ. ಉತ್ತಮ ಆಡಳಿತ ನೀಡುವ ಚಿಂತನೆಯೊಂದಿಗೆ ಕಣಕ್ಕಿಳಿದಿರುವ ನನಗೆ ಮತದಾನ ಮಾಡಿ ಸಹಕರಿಸಬೇಕೆಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ ಕಾರ್ಯದರ್ಶಿ ಹೆಚ್.ಎಂ.ಶಬಾನ ಹಾಗೂ ಎಐಟಿಯುಸಿ ಕಾರ್ಯದರ್ಶಿ ಪಿ.ಟಿ.ಸುಂದರ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ…

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.