Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿ ಪ್ರಣಾಳಿಕೆ ಹಾಸ್ಯಾಸ್ಪದ : ಕೊಡಗು ಕಾಂಗ್ರೆಸ್ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿ ಪ್ರಣಾಳಿಕೆ ಹಾಸ್ಯಾಸ್ಪದ : ಕೊಡಗು ಕಾಂಗ್ರೆಸ್ ಟೀಕೆ*

ಮೇ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 6 : ಕಳೆದ ಎರಡೂವರೆ ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಬಿಜೆಪಿಯ ‘ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್’ ಒಳಗೊಂಡ ಪ್ರಣಾಳಿಕೆ ಹಾಸ್ಯಾಸ್ಪದವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೇವಡಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಸುದೀರ್ಘ ಆಡಳಿತದಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಜಿಲ್ಲೆಯ 2 ಕ್ಷೇತ್ರಗಳ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಪ್ರವಾಸೋದ್ಯಮದ ಅಭಿವೃದ್ಧಿ ಸೇರಿದಂತೆ ದೂರದೃಷ್ಟಿಯ ಕಾಂಗ್ರೆಸ್ ಪ್ರಣಾಳಿಕೆ ಕಾರ್ಯಗತಗೊಳ್ಳಲಿದೆ ಎಂದರು.
ಜಿಲ್ಲಾಡಳಿತ ಭವನದ ಕಳಪೆ ತಡೆಗೋಡೆ, ಗಡಿ ಅಭಿವೃದ್ಧಿಯ ಅನುದಾನ ಸೇರಿದಂತೆ 9.50 ಕೋಟಿ ವೆÉಚ್ಚದ ಸುವರ್ಣ ಸಮುಚ್ಛಯ ಭವನವಿನ್ನೂ ಪೂರ್ಣಗೊಳ್ಳದೆ ಪಾಳು ಬಂಗಲೆಯಂತೆ ನಿಂತಿರುವುದು, 4 ಕೋಟಿ ವೆಚ್ಚದ ಕೊಡಗು ಹೆರಿಟೇಜ್ ಅಪೂರ್ಣವಾಗಿ ಪಳೆಯುಳಿಕೆಯಂತೆ ತೋರುತ್ತಿರುವುದು, ಸರ್ವಋತು ರಸ್ತೆಗಳು ಗಬ್ಬೆದ್ದು ಅವುಗಳಿಗೆ ತೇಪೆ ಹಾಕುತ್ತಿರುವುದು ಬಿಜೆಪಿ ಜನಪ್ರತಿನಿಧಿಗಳ ಸಾಧನೆಯಾಗಿದೆ ಎಂದು ಟೀಕಿಸಿದರು.
ಶಾಸಕರುಗಳ ವೈಫಲ್ಯವನ್ನು ಅರಿತಿರುವ ಜಿಲ್ಲೆಯ ಮತದಾರ ಕಾಂಗ್ರೆಸ್ ಅಭ್ಯರ್ಥಿಗಳಾದ ಮಂತರ್ ಹಾಗೂ ಪೊನ್ನಣ್ಣ ಅವರ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಲಿದ್ದಾರೆ ಎಂದರು.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 45 ಕೋಟಿ ವೆಚ್ಚದಲ್ಲಿ ಜಾರಿಗೆ ಬಂದ ಒಳಚರಂಡಿ ಯೋಜನೆ (ಯುಜಿಡಿ)ಯಲ್ಲಿ ಇಲ್ಲಿಯವರೆಗೆ ಒಂದು ಬಕೆಟ್ ಕೊಳಚೆ ನೀರು ಹರಿದಿದೆಯೇ ಎಂದು ಪ್ರಶ್ನಿಸಿದ ಅವರು, ಅಭಿವೃದ್ಧಿಯ ಚಿಂತನೆ ಇಲ್ಲದೆ ಅಧಿಕಾರ ನಡೆಸಿದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರನ್ನು ಜನರು ತಿರಸ್ಕರಿಸುತ್ತಿದ್ದಾರೆ. ಇದನ್ನು ಅರಿತ ಬಿಜೆಪಿ ಮಂದಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ವೃತ್ತಿಪರ ಘಟಕದ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ಪ್ರವಾಸಿ ಕೇಂದ್ರವಾದ ಮಡಿಕೇರಿಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ, ಪ್ರವಾಸಿಗರು ತಂಗುವುದಕ್ಕೆ ಸ್ಥಳಾವಕಾಶ ಮತ್ತು ಮೂಲಭೂತ ಸೌಲಭ್ಯಗಳಿಲ್ಲದ ಪರಿಸ್ಥಿತಿ ಇದೆ. ಈ ಎಲ್ಲಾ ಮೂಲ ಸಮಸ್ಯೆಗಳಿಗೆ ಅಗತ್ಯ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಸಾಂಸ್ಕೃತಿಕ, ಕೃಷಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ, ದೂರದೃಷ್ಟಿಯ ಚಿಂತನೆಯುಳ್ಳ ಕಾಂಗ್ರೆಸ್ ಅಭ್ಯರ್ಥಿ ಮಂತರ್ ಗೌಡ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಮಾತನಾಡಿ, ಕಳೆದ 2022-23 ನೇ ಸಾಲಿನಲ್ಲಿ ಶಾಸಕರ ನಿಧಿಯಿಂದ ಮಡಿಕೇರಿ ನಗರಸಭೆಗೆ ಚಿಕ್ಕಾಸು ಬಂದಿಲ್ಲ. ಕುಂಡಾಮೇಸ್ತ್ರಿ ಯೋಜನೆ ಜಾರಿಯಾಗಿದ್ದರು ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಚುನಾವಣೆ ಸಮೀಪಿಸುತ್ತಿರುವ ಹಂತದಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ರೀತಿ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆಯ ಮಾಜಿ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ ಹಾಗೂ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸದಾ ಮುದ್ದಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.