Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶನಿವಾರಸಂತೆ : ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಅಗತ್ಯವಿಲ್ಲ : ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮಾ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಶನಿವಾರಸಂತೆ : ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಅಗತ್ಯವಿಲ್ಲ : ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮಾ*

ಮೇ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ ಮೇ 6 : ಭಾರತದಲ್ಲಿ ಮುಂದುವರೆದ ರಾಜ್ಯಗಳಲ್ಲಿ ಒಂದಾದ ಕರ್ನಾಟಕದ ಜನತೆಗೆ ಕಾಂಗ್ರೆಸ್‌ನ ಉಚಿತ ಗ್ಯಾರಂಟಿಗಳ ಅಗತ್ಯವಿಲ್ಲವೆಂದು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ನಡೆದ ಬಿಜೆಪಿ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ‘ಕೊಡಗಿನ ಜನತೆಗೆ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಡಾ. ಹಿಮಂತ್ ಬಿಸ್ವಾಸ್ ಶರ್ಮಾ, ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಅಪ್ಪಚ್ಚು ರಂಜನ್ ಅವರನ್ನು ಸ್ಪಷ್ಟಬಹುಮತದೊಂದಿಗೆ ಗೆಲ್ಲಿಸುವಂತೆ ಮನವಿ ಮಾಡಿದರು.

ಸ್ಪಷ್ಟ ಬಹುಮತ- ಈ ಹಿಂದೆ ಬಿಜೆಪಿ 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗುತ್ತಿದ್ದರೂ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ‘ಬಜರಂಗದಳದ ನಿಷೇಧ’ ಪ್ರಸ್ತಾಪದಿಂದಾಗಿ ಬಿಜೆಪಿ 150 ಸ್ಥಾನಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ಹೇಳಿದರು.

ಓಲೈಕೆ ರಾಜಕಾರಣ-ಧರ್ಮದ ಆಧಾರದ ಮೀಸಲಾತಿಯನ್ನು ರದ್ದುಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಅಭಿನಂದನಾರ್ಹ ಕಾರ್ಯಮಾಡಿದೆ. ಆದರೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಕೇವಲ ಒಂದು ಧರ್ಮವನ್ನು ಓಲೈಕೆ ಮಾಡುವ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿದ್ದು, ಕಾಂಗ್ರೆಸ್ ಪಕ್ಷ ಟಿಪ್ಪು ಸುಲ್ತಾನ್ ಪಾರ್ಟಿಯಾಗಿದೆ. ಗ್ಯಾರಂಟಿಯೇ ಇಲ್ಲದ ಕಾಂಗ್ರೆಸ್ ಸರಕಾರ ಉಚಿತ ಭರವಸೆಗಳ ಗ್ಯಾರಂಟಿಗಳನ್ನು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಾತಿವಾದಿಗಳ ಅಖಾಡ ಅಲ್ಲ- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕೊಡಗಿನ ನೆಲ ಜಾತಿವಾದಿಗಳ ಅಖಾಡ ಅಲ್ಲ. ಇದು, ಹಿಂದುತ್ವವಾದಿಗಳ ಭದ್ರಕೋಟೆ ಎಂಬುದನ್ನು ಕ್ಷೇತ್ರದ ಜನತೆ ಮತ್ತೊಮ್ಮೆ ಸಾಬೀತುಪಡಿಸಬೇಕಿದೆ.

ಶಾದಿಭಾಗ್ಯ, ಶಾಲಾ ವಿದ್ಯಾರ್ಥಿಗಳಿಗೆ ಪ್ರವಾಸದ ಹೆಸರಿನಲ್ಲಿ ಶಾಲಾ ವಿದ್ಯಾರ್ಥಿಗಳ ಮನಸ್ಸಿನಲ್ಲೂ ಜಾತಿಯ ವಿಷಬೀಜ ಬಿತ್ತುವುದು ಕಾಂಗ್ರೆಸ್ ನೀತಿಯಾಗಿದ್ದರೆ, ಜನ್‌ಧನ್, ಗ್ಯಾಸ್, ಕರೆಂಟ್, ಪ್ರಧಾನ ಮಂತ್ರಿಗಳ ಅವಾಸ್ ಯೋಜನೆ, ಉಚಿತ ರೇಷನ್, ಕೋವಿಡ್ ಇಂಜೆಕ್ಷನ್ ನೀಡುವಾಗ ಬಿಜೆಪಿ ಪಕ್ಷ ಜನರ ಜಾತಿ ಕೇಳಲಿಲ್ಲ ಇದು ಬಿಜೆಪಿ ನೀತಿಯಾಗಿದೆ. ಕಾಂಗ್ರೆಸ್ ಪಕ್ಷ ಇದ್ದಿದ್ದರೇ ಕೋವಿಡ್ ಇಂಜೆಕ್ಷನ್ ನೀಡುವಾಗಲೂ ಜಾತಿ ಕೇಳುತ್ತಿದ್ದರು ಎಂದು ಟೀಕಿಸಿದರು.

ಸ್ವತಂತ್ರ ಬಸವಲಿಂಗ ಸ್ವಾಮೀಜಿ ಆಶೀರ್ವನ ನೀಡಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಈ ಹಿಂದೆ ಅರಕಲಗೋಡುವಿನಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಅವಧಿಯಲ್ಲಿ ಏನೂ ಅಭಿವೃದ್ದಿ ಕಾರ್ಯ ಮಾಡದೇ, ಇದೀಗ ಕೊಡಗನ್ನು ಅಭಿವೃದ್ಧಿ ಮಾಡುತ್ತೇನೆಂದು ಹೇಳುತ್ತಿದ್ದಾರೆಂದು ಟೀಕಿಸಿದರಲ್ಲದೇ, ಹಿಂದುತ್ವದ ಆಧಾರದಲ್ಲಿ ಸರಕಾರ ರಚನೆ ಮಾಡುವ ಪಕ್ಷ ಅಂತ ಇದ್ದರೇ ಅದು ಭಾರತೀಯ ಜನತಾ ಪಾರ್ಟಿ ಮಾತ್ರ ಎಂದರು.

ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಮೋದಿ ಅವರ ಹತ್ತು ಹಲ ಜನಪರ ಕಾರ್ಯಕ್ರಮಗಳು ಜನರಿಗೆ ತಲುಪಿಸಿದ್ದಾರೆ. ಇಂದು ಕಾಂಗ್ರೆಸ್ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯ ನಿಷೇಧದ ವಿಚಾರವನ್ನು ಪ್ರಸ್ತಾಪಿಸಿದ್ದು, ಇದಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ.ಚುನಾವಣೆಯಲ್ಲಿ ಬಿಜೆಪಿಯನ್ನು ಆಶೀರ್ವದಿಸುವಂತೆ ಮನವಿ ಮಾಡಿದರು.

ಪಕ್ಷಕ್ಕೆ ಸೇರ್ಪಡೆ-ಇದೇ ಸಂದರ್ಭ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ಬಿ.ಎಸ್.ಅನಂತ್‌ಕುಮಾರ್ ಅವರು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾ. ಹಿಮಂತ್ ಬಿಸ್ವಾಸ್ ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ.ಭಾರತೀಶ್, ಮಾಜಿ ಎಂಎಲ್‌ಸಿ, ಎಸ್.ಜಿ.ಮೇದಪ್ಪ ಮುಖಂಡರಾದ ಮಾದಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.