Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯಲ್ಲಿ ಶೇ.74.74 ರಷ್ಟು ಮತದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯಲ್ಲಿ ಶೇ.74.74 ರಷ್ಟು ಮತದಾನ*

ಮೇ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 10 : ವಿಧಾನಸಭಾ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ.74.74 ರಷ್ಟು ಮತದಾನವಾಗಿದೆ. ಒಟ್ಟು 4,56,313 ಮತದಾರರಲ್ಲಿ 3,41,046 ಮತದಾರರು ಮತದಾನ ಮಾಡಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,32,148 ಮತದಾರರಲ್ಲಿ 1,75,009 ಮತದಾರರು ಮತ ಚಲಾಯಿಸಿದ್ದು, ಶೇ.75.39 ರಷ್ಟು ಮತದಾನವಾಗಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಒಟ್ಟು 2,24,165 ಮತದಾರರಿದ್ದು, 1,66,037 ಮತದಾರರು ಮತ ಚಲಾಯಿಸಿದ್ದು, ಶೇ.74.07 ರಷ್ಟು ಮತದಾನವಾಗಿದೆ.
ಜಿಲ್ಲೆಯಲ್ಲಿ 9 ಗಂಟೆ ವೇಳೆಗೆ ಶೇ.11.74 ರಷ್ಟು, 11 ಗಂಟೆ ವೇಳೆಗೆ ಶೇ.26.52 ರಷ್ಟು, ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.45.64 ರಷ್ಟು, ಮಧ್ಯಾಹ್ನ 3 ಗಂಟೆ ವೇಳೆಗೆ 58.24 ರಷ್ಟು ಮತದಾನವಾಗಿತ್ತು.
ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಒಟ್ಟು 543 ಮತಗಟ್ಟೆಗಳಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಬೆಳಗ್ಗಿನ ವೇಳೆಯಲ್ಲಿ ಮತಗಟ್ಟೆ ಕೇಂದ್ರಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದ್ದು ಕಂಡು ಬಂದಿತು.
ಮತದಾರರು ಮತಹಕ್ಕು ಚಲಾಯಿಸಿ ಮತಗಟ್ಟೆಯಿಂದ ಹೊರಬರುತ್ತಿದ್ದ ದೃಶ್ಯವು ಮತದಾನದ ಹುಮ್ಮಸ್ಸನ್ನು ಹೆಚ್ಚಿಸಿತು. ಪ್ರಥಮ ಬಾರಿಗೆ ಮತಹಕ್ಕು ಚಲಾಯಿಸಿದ ಯುವ ಮತದಾರರು ಸಂತಸದಿoದ ಮತದಾನದ ಹಬ್ಬದಲ್ಲಿ ಪಾಲ್ಗೊಂಡು ಮತಹಕ್ಕು ಚಲಾಯಿಸಿದರು.
ತಿತಿಮತಿ ಗ್ರಾಮದ ಯುವ ಮತದಾರರೊಬ್ಬರು ಮಾತನಾಡಿ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಮತ ಚಲಾಯಿಸಿದ್ದೇನೆ. ಪ್ರಥಮ ಬಾರಿಗೆ ಮತದಾನ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು.
ನಕ್ಸಲ್ ಪೀಡಿತ ಪ್ರದೇಶವೆಂದು ಗುರುತಿಸಲಾಗಿರುವ ವಣಚಲು ಗ್ರಾಮದ ಮತಗಟ್ಟೆಯಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಮತದಾನ ನಡೆಯಿತು. ಅಲ್ಲಿನ ಮತದಾರರು ಉತ್ಸಾಹದಿಂದ ಮತಹಕ್ಕು ಚಲಾಯಿಸಿದ್ದು ಕಂಡು ಬoದಿತು.
ಇಲ್ಲಿನ ಸ್ಥಳೀಯರಾದ ಸರೋಜ ಅವರು ಮಾತನಾಡಿ ಗ್ರಾಮದ ಸುತ್ತಮುತ್ತಲಿನ ಜನರು ಮತದಾನ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ಇಲ್ಲಿನ ಜನರು ಹೊರ ಜಿಲ್ಲೆ, ಹೊರ ರಾಜ್ಯದಲ್ಲಿ ಕೆಲಸದಲ್ಲಿ ಇರುವವರು ಸಹ ಗ್ರಾಮಕ್ಕೆ ಬಂದು ಮತದಾನ ಮಾಡಿದ್ದಾರೆ ಎಂದು ಅವರು ವಿವರಿಸಿದರು.
ಗಾಳಿಬೀಡು ಗ್ರಾಮದ ಮತಗಟ್ಟೆಯಲ್ಲಿ 12 ಗಂಟೆ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಸರದಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದರು.
ಮದೆನಾಡು, ಸುಂಟಿಕೊಪ್ಪ, ಸಿದ್ದಾಪುರ, ಗೋಣಿಕೊಪ್ಪ, ಪೊನ್ನಂಪೇಟೆ, ಹುದಿಕೇರಿ, ಬಾಳೆಲೆ, ಮೂರ್ನಾಡು, ನಾಪೋಕ್ಲು, ಸೋಮವಾರಪೇಟೆ, ಕುಶಾಲನಗರ, ಶನಿವಾರಸಂತೆ, ಕೊಡ್ಲಿಪೇಟೆ, ಮಾದಾಪುರ, ಹೆಬ್ಬಾಲೆ ಮತಗಟ್ಟೆಗಳಲ್ಲಿ ಮತದಾರರು ಮಧ್ಯಾಹ್ನದ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನದಲ್ಲಿ ಪಾಲ್ಗೊಂಡಿದ್ದು ಕಂಡುಬoದಿತು.
ಸುಮಾರು 70 ವರ್ಷ ಮೇಲ್ಪಟ್ಟ ಒಬ್ಬರು ಗಾಲಿ ಕುರ್ಚಿಯಲ್ಲಿ ಕುಟುಂಬರ ಸದಸ್ಯರೊಂದಿಗೆ ಆಗಮಿಸಿ ಮತಹಕ್ಕು ಚಲಾಯಿಸಿದರು. ಮಾದರಿ ಮತಗಟ್ಟೆಯಾಗಿ ಸ್ಥಾಪಿಸಲಾಗಿದ್ದ ನಗರದ ಹಿಲ್ ರಸ್ತೆಯಲ್ಲಿರುವ ಮತಗಟ್ಟೆಯಲ್ಲಿ ಮತದಾರರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಲಾಗಿತ್ತು, ಹಾಗೆಯೇ ಕುಡಿಯುವ ನೀರು ಕಲ್ಪಿಸಲಾಗಿತ್ತು.
ಜಿಲ್ಲೆಯ ವಿವಿಧ ಕಡೆ ಸ್ಥಾಪಿಸಲಾಗಿದ್ದ ಸಖಿ ಮತಗಟ್ಟೆ, ವಿಶೇಷಚೇತನರ ಸ್ನೇಹಿ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಾಂಪ್ರದಾಯಿಕ ಮತಗಟ್ಟೆ, ಥೀಮ್ ಬೇಸ್‌ಡ್(ಕಾಫಿ, ಅರಣ್ಯ) ಮತಗಟ್ಟೆ ಇತರ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಮತಗಟ್ಟೆಗಳು ಮತದಾರರ ಗಮನ ಸೆಳೆದವು.
ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದ, ನಾಗರಹೊಳೆ ಬಳಿಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆ, ಹಾಗೆಯೇ ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆದಿವಾಸಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತಹಕ್ಕು ಚಲಾಯಿಸಿ, ಸಂಭ್ರಮಿಸಿದರು. ವಿಶೇಷ ಚೇತನರ ಸ್ನೇಹಿ ಮತಗಟ್ಟೆಗಳಾದ ನಗರದ ಸಂತ ಮೈಕಲರ ಶಾಲೆ ಮತ್ತು ವಿರಾಜಪೇಟೆಯ ಸೇಂಟ್ ಆನ್ಸ್ ಪ್ರೌಢ ಶಾಲೆಯ ಮತಗಟ್ಟೆ ಮತದಾರರ ಗಮನ ಸೆಳೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತು ರೂಪಾಶ್ರೀ ಸತೀಶ ಅವರು ನಗರದ ತಾಲ್ಲೂಕು ಪಂಚಾಯಿತಿ ಮತಗಟ್ಟೆಗೆ ತೆರಳಿ ಮತದಾನ ಮಾಡಿ, ಮತದಾನದ ಮಹತ್ವ ಸಾರಿದರು.
‘ವಿಧಾನಸಭೆ ಚುನಾವಣೆಯು ಮತದಾರರದಲ್ಲಿ ಸಂಭ್ರಮ ಮತ್ತು ಹೊಣೆಗಾರಿಕೆ ಹೆಚ್ಚಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮತದಾರರ ಹಬ್ಬವೆಂದು ಪರಿಗಣಿಸಲಾಗಿದೆ. ಪ್ರಜಾಪ್ರಭುತ್ವದ ಆಶಯ ಸಕಾರವಾಗುವಲ್ಲಿ ಚುನಾವಣೆಯ ಪಾತ್ರ ಬಹುದೊಡ್ಡದು ಎಂದು ಹಿರಿಯ ಮತದಾರರೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯ ವಿವಿಧ ಮತಗಟ್ಟೆಗಳಲ್ಲಿ ಕುಟುಂಬದವರ ಜೊತೆ ಆಗಮಿಸಿ ಸೆಲ್ಫಿ ಫೋಟೋ ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬoದಿತು. ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಉತ್ಸಾಹದಿಂದ ಮತದಾನದಲ್ಲಿ ಮತದಾರರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.