Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
  • *ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಣ್ಣ, ಮಂತರ್ ಗೆ ಗೆಲುವು : ಸೋಲಿಲ್ಲದ ಸರದಾರರಿಗೆ ಸೋಲು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಣ್ಣ, ಮಂತರ್ ಗೆ ಗೆಲುವು : ಸೋಲಿಲ್ಲದ ಸರದಾರರಿಗೆ ಸೋಲು*

ಮೇ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 13 : ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳ ಹಿಡಿತದಲ್ಲಿದ್ದ ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಕೈವಶವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಳೆದ 25 ವರ್ಷಗಳ ಬಳಿಕ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು 4,402 ಮತಗಳಿಂದ ಪರಾಭವಗೊಳಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎ.ಸ್.ಪೊನ್ನಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರನ್ನು 4,291ಮತಗಳಿಂದ ಸೋಲಿಸಿದ್ದಾರೆ.
ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಾ ಬಂದಿದ್ದು, ಇದೀಗ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು 84,879 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಅಪ್ಪಚ್ಚುರಂಜನ್ ಅವರು 80,477 ಮತಗಳನ್ನು ಪಡೆದರು. ಜೆಡಿಎಸ್ ನ ನಾಪಂಡ ಮುತ್ತಪ್ಪ ಕೇವಲ 6,233ಮತಗಳನ್ನಷ್ಟೇ ಪಡೆಯಲು ಶಕ್ತರಾದರು.
ಒಟ್ಟು 20 ಸುತ್ತುಗಳಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ 8ನೇ ಸುತ್ತಿನ ವರೆಗೂ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಮುನ್ನಡೆ ಸಾಧಿಸುತ್ತಲೇ ಬಂದರು. ನಂತರ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವಿನತ್ತ ಸಾಗಿದರು.
ಮಡಿಕೇರಿ ಕ್ಷೇತ್ರದಲ್ಲಿ ಡಾ.ಮಂತರ್ ಗೌಡ ಅವರು ಆರಂಭದಿಂದ ಕೊನೆಯವರೆಗೂ ಮೊದಲಿಗರಾಗಿಯೇ ಉಳಿದದ್ದು ವಿಶೇಷ.
ಉಳಿದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‍ಡಿಪಿಐನ ಅಮಿನ್ ಮೊಹಿಸಿನ್ 1436, ಸಿಪಿಐನ ಎಚ್.ಎಂ.ಸೋಮಪ್ಪ, 513, ಬಹುಜನ ಸಮಾಜ ಪಾರ್ಟಿಯ ಎ.ಎ.ದಿವಿಲ್ ಕುಮಾರ್ 636, ಇಂಡಿಯನ್ ಮೂವ್‍ಮೆಂಟ್ ಪಾರ್ಟಿ ರಶೀದಾಬೇಗಂ, 84, ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ ಬಿ.ಕೆ.ಶ್ರೀನಿವಾಸ ರೈ 116, ಆಮ್ ಆದ್ಮಿ ಪಾರ್ಟಿಯ ಕೆ.ಪಿ.ಬೋಪಣ್ಣ 407, ಕರ್ನಾಟಕ ರಾಷ್ಟ್ರ ಸಮಿತಿಯ ಸಜೀರ್ ಮಜೀದ್ ನೆಲಾಟ್ 155, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಕೆ.ಬಿ.ರಾಜು 116, ಪಕ್ಷೇತರರಾದ ಎಂ.ಖಲೀಲ್ 249, ಶೃತಿ ಕೆ.ಪಿ 222, ಹರೀಶ್ ಜಿ.ಆಚಾರ್ಯ 124, ಜಿ.ಜಿ.ಹೇಮಂತ್ ಕುಮಾರ್ 253, ಮತಗಳನ್ನು ಪಡೆದರು.
::: ವಿರಾಜಪೇಟೆ ಕ್ಷೇತ್ರ :::
ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ 83,791ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿಯ ಕೆ.ಜಿ.ಬೋಪಯ್ಯ 79,500 ಮತಗಳನ್ನು ಪಡೆದು ಪರಾಭವಗೊಂಡರು. ಜೆಡಿಎಸ್ ನ ಎಂ.ಎ.ಮನ್ಸೂರ್ ಅಲಿ 1121, ಸರ್ವೋದಯ ಕರ್ನಾಟಕ ಪಕ್ಷದ ಕೆ.ಎಸ್.ಮನು ಸೋಮಯ್ಯ 682, ಆಮ್ ಆದ್ಮಿ ಪಕ್ಷದ ಚಿಮ್ಮಣಮಾಡ ಎಸ್.ರವೀಂದ್ರ 254, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮಸೂದ್ ಫೌಜ್ದಾರ್ 121, ಕರ್ನಾಟಕ ರಾಷ್ಟ್ರ ಸಮಿತಿಯ ವಿ.ಎ.ಸಜು 123, ಪಕ್ಷೇತರರಾದ ಪೊನ್ನೇಟ್ಟಿ ಕೆ.ದರ್ಶನ್ 414, ಅಬ್ದುಲ್ ನಾಸಿರ್ ಮಕ್ಕಿ 346 ಮತಗಳನ್ನು ಪಡೆದರು.
::: ನೋಟಾಕ್ಕೆ ಮತ :::
ಕೊಡಗಿನ ವಿಧಾನಸಭಾ ಕ್ಷೇತ್ರಗಳಲ್ಲಿ ನೋಟಾಕ್ಕೆ ಅಧಿಕ ಮತಗಳು ಚಲಾವಣೆಯಾಗಿದೆ. ವೀರಾಜಪೇಟೆ ಕ್ಷೇತ್ರದಲ್ಲಿ 1636 ಮಂದಿ ನೋಟಾಕ್ಕೆ ಮತ ಚಲಾಯಿಸುವ ಮೂಲಕ ಮೂರನೇ ಸ್ಥಾನ ಮತ್ತು ಮಡಿಕೇರಿ ಕ್ಷೇತ್ರದಲ್ಲಿ 1516 ಮಂದಿ ನೋಟಾಕ್ಕೆ ಮತಹಾಕಿ ನಾಲ್ಕನೇ ಸ್ಥಾನ ನೀಡಿದ್ದಾರೆ.
ಕಳೆದ ಬಾರಿಯು ಮಡಿಕೇರಿ ಕ್ಷೇತ್ರದಲ್ಲಿ 1615 ಮತ ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ 1733 ಮತಗಳು ನೋಟಾಕ್ಕೆ ಚಲಾವಣೆಯಾಗಿದ್ದವು.
::: ಬಿಗಿ ಭದ್ರತೆಯಲ್ಲಿ ಮತ ಎಣಿಕೆ :::
ನಗರದ ಸಂತ ಜೋಸೆಫರ ಶಾಲೆಯ ಮತ ಎಣಿಕಾ ಕೇಂದ್ರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಉಸ್ತುವಾರಿಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಂಡಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಎರಡೂ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬಿದ್ದಿತು. ಜಿಲ್ಲಾ ಪೊಲೀಸ್, ಕೈಗಾರಿಕಾ ಭದ್ರತಾ ಪಡೆ ಪೊಲೀಸರ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.
::: ವಿಜಯೋತ್ಸವ :::
ಮತ ಎಣಿಕೆಯ ಅಂತಿಮ ಫಲಿತಾಂಶ ಹೊರಬೀಳುವ ಮುನ್ನವೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಘೋಷಣೆ, ಮೆರವಣಿಗೆ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.17 NEWS DESK : ಅಡಿಗೆ ಅನಿಲ ವ್ಯತ್ಯಯದ ಹಿನ್ನಲೆಯಲ್ಲಿ ಪಟ್ಟಣದ ಹೋಟೆಲ್ ಹಾಗೂ ಬೇಕರಿಗಳ ಮೇಲೆ ಆಹಾರ…

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.