ಮಡಿಕೇರಿ ಮೇ 16 : ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನಗರದ ಸರ್ಕಾರಿ ವಸ್ತುಸಂಗ್ರಹಾಲಯದಲ್ಲಿ ಮೇ, 18 ರಂದು ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ‘ವಸ್ತುಸಂಗ್ರಹಾಲಯಗಳು, ಸುಸ್ಥಿರತೆ ಮತ್ತು ಯೋಗಕ್ಷೇಮ’ ಎಂಬ ಘೋಷವಾಕ್ಯದಡಿಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಮಧು ಸೋಮಣ್ಣ, ಡಾ.ಎಂ.ಜಿ.ಪಾಟ್ಕರ್ ಮತ್ತು ಹುಣಸೂರು ಪಿ.ಕೆ.ಕೇಶವಮೂರ್ತಿ ಅವರು ಸಂಗ್ರಹಿಸಿಟ್ಟು ಕೊಂಡಿರುವ ಕೊಡಗಿನ ಸಾಂಪ್ರದಾಯಿಕ ಪರಿಕರಗಳ ಪ್ರದರ್ಶವನ್ನು ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಮೇ, 18 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಲಿದ್ದಾರೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ ಅವರು ತಿಳಿಸಿದ್ದಾರೆ.







