Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜನರ ಹಾದಿ ತಪ್ಪಿಸುವ ಬಿಜೆಪಿ ಪ್ರಯತ್ನ ವಿಫಲವಾಗಿದೆ : ಕಾಂಗ್ರೆಸ್ ಟೀಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜನರ ಹಾದಿ ತಪ್ಪಿಸುವ ಬಿಜೆಪಿ ಪ್ರಯತ್ನ ವಿಫಲವಾಗಿದೆ : ಕಾಂಗ್ರೆಸ್ ಟೀಕೆ

ಮೇ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮೇ 17 : ಅಭಿವೃದ್ಧಿ ಶೂನ್ಯ ವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಜನರ ಹಾದಿ ತಪ್ಪಿಸುವುದಕ್ಕಾಗಿ ಬಿಜೆಪಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದು, ಜನರು ಪರಿವರ್ತನೆ ಬಯಸಿದ ಪರಿಣಾಮ ಕಾಂಗ್ರೆಸ್ ಭರ್ಜರಿ ಗೆಲುವನ್ನು ಸಾಧಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಗೆಲ್ಲಲು ಸಾಧ್ಯವಾಗದಿದ್ದ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮಡಿಕೇರಿ ಕ್ಷೇತ್ರದ ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರು ಉತ್ಸಾಹಿ ಶಾಸಕರುಗಳಾಗಿದ್ದಾರೆ. ಈ ಗೆಲುವು ನನ್ನ ಒಬ್ಬನಿಂದ ಸಾಧ್ಯವಾಗಿಲ್ಲ, ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಪ್ರತಿಯೊಬ್ಬ ಪದಾಧಿಕಾರಿ ಹಾಗೂ ಮೇಲ್ಮಟ್ಟದ ನಾಯಕರಿಗೂ ಯಶಸ್ಸಿನ ಕೀರ್ತಿ ಸಲ್ಲಬೇಕು ಎಂದರು.
ಬಿಜೆಪಿ ಸ್ಟಾರ್ ಪ್ರಚಾರಕನ್ನು ಕರೆತಂದರೂ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಜಿಲ್ಲೆಯ ಇಬ್ಬರು ನೂತನ ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಿದ್ದಾರೆ. ಚುನಾವಣೆ ಪೂರ್ವದಲ್ಲೇ ಮಂತರ್ ಗೌಡ ಹಾಗೂ ಪೊನ್ನಣ್ಣ ಅವರುಗಳು ಸಮಸ್ಯೆಗಳಿಗೆ ಸ್ಪಂದಿಸುತ್ತಾ ಜನರ ಮನಸನ್ನು ಗೆದ್ದಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿರುವ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲಿದ್ದೇವೆ. ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯನ್ನು ಮುಂದಿನ ಐದು ವರ್ಷಗಳಲ್ಲಿ ಪೂರ್ಣಗೊಳಿಸಲಿದ್ದೇವೆ ಎಂದು ಭರವಸೆ ನೀಡಿದರು.
ಗೋಣಿಕೊಪ್ಪಲಿನಲ್ಲಿ ನೆನಗುದಿಗೆ ಬಿದ್ದಿರುವ ಹೈಟೆಕ್ ಬಸ್ ನಿಲ್ದಾಣದ ಕನಸನ್ನು ನನಸು ಮಾಡಲಿದ್ದೇವೆ ಮತ್ತು ಭಾಗಮಂಡಲದ ಮೇಲು ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲಿದ್ದೇವೆ ಎಂದು ತಿಳಿಸಿದರು.
::: ಅದೃಷ್ಟದ ಅಧ್ಯಕ್ಷ :::
ನಾನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭ ಪಕ್ಷ ತೀವ್ರ ಹಿನ್ನಡೆಯಲ್ಲಿತ್ತು. ಆದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಬೆಂಬಲದಿಂದ ಹಲವು ಘಟ್ಟಗಳಲ್ಲಿ ನಾನು ಯಶಸ್ಸನ್ನು ಸಾಧಿಸಲು ಸಾಧ್ಯವಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ನನ್ನ ಮೇಲೆ ವಿಶ್ವಾಸವಿಟ್ಟು, ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವಂತೆ ತಿಳಿಸಿದ್ದರು. ಅಲ್ಲದೆ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಉತ್ತಮ ಸ್ಥಾನಮಾನ ಕೊಡಿಸುವ ಭರವಸೆ ನೀಡಿದ್ದರು. ಆದರೆ ಅವರು ಇಂದು ನಮ್ಮೊಂದಿಗೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಎರಡು ವರ್ಷಗಳಲ್ಲಿ 13 ಬಾರಿ ಜಿಲ್ಲೆಗೆ ಬಂದಿದ್ದ ಧ್ರುವನಾರಾಯಣ್ ಪಕ್ಷ ಸಂಘಟನೆಗಾಗಿ ಸಂಪೂರ್ಣ ಸಹಕಾರ ನೀಡಿದ್ದರು. ಜಿಲ್ಲಾ ಕಾಂಗ್ರೆಸ್‍ನ ಎಲ್ಲಾ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬೆಂಬಲದಿಂದ ಯಶಸ್ಸು ಸಾಧಿಸುವ ಮೂಲಕ ಇಂದು ಜಿಲ್ಲಾಧ್ಯಕ್ಷನಾಗಿ ನಾನು ಅದೃಷ್ಟವಂತ ಎನಿಸಿಕೊಂಡಿದ್ದೇನೆ ಎಂದು ಧರ್ಮಜ ಉತ್ತಪ್ಪ ಹರ್ಷ ವ್ಯಕ್ತಪಡಿಸಿದರು.
ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಾವು ಐತಿಹಾಸಿಕ ಗೆಲುವನ್ನು ಸಾಧಿಸಿದ್ದೇವೆ. ಯಾವ ಪ್ರದೇಶಗಳಲ್ಲಿ ಕಾಂಗ್ರೆಸ್‍ಗೆ ಕಡಿಮೆ ಮತಗಳು ಬಿದ್ದಿವೆಯೋ ಅಲ್ಲಿ ಪಕ್ಷ ಸಂಘಟನೆಯನ್ನು ತೀವ್ರಗೊಳಿಸಲಾಗುವುದು. ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುವುದೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟುಮೊಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಡಿಸಿಸಿ ಉಪಾಧ್ಯಕ್ಷ ಸಲಾಂ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ…

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.