Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮೇಳೈಸಿದ ಕೊಡವ ಯುವಮೇಳ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮೇಳೈಸಿದ ಕೊಡವ ಯುವಮೇಳ*

ಮೇ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 :  ಕೊಡಗಿನ ವೈಶಿಷ್ಟ್ಯಪರ್ಣ ಭಾಷಾ ಸಂಸ್ಕೃತಿ, ಆಚಾರ ವಿಚಾರಗಳ ಕುರಿತು ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ‘ಕೊಡವ ಯುವ ಮೇಳ’ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ, ಅತ್ಯಾಕರ್ಷಕ ಮೆರವಣಿಗೆ, ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈವಿಧ್ಯಮಯವಾಗಿ ನಡೆಯಿತು.

ಕೊಡವ ಸಂಸ್ಕೃತಿಯ ಸಂರಕ್ಷಣೆ ಯುವ ಸಮೂಹದಿಂದ ಮಾತ್ರ ಸಾಧ್ಯವಾಗಬಲ್ಲುದು, ಈ ಹಿನ್ನೆಲೆ ಜಿಲ್ಲೆ ಹಾಗೂ ಕಾರ್ಯ ನಿಮಿತ್ತ ಹೊರ ಜಿಲ್ಲೆಗಳಲ್ಲಿರುವ ಯುವ ಸಮೂಹಕ್ಕೆ ಇಲ್ಲಿನ ಸಂಪದ್ಭರಿತ ಸಂಸ್ಕೃತಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್‍ನಿಂದ ದಿನಪೂರ್ತಿ ಕೊಡವ ಭಾಷಾ ಸಂಸ್ಕೃತಿಯ ಚೌಕಟ್ಟಿನಲ್ಲಿ ಅತ್ಯಾಕರ್ಷಕ ಕಾರ್ಯಕ್ರಮಗಳು ನಡೆದವು.

ಆಕರ್ಷಕ ಮೆರವಣಿಗೆ- ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಟ್ರಸ್ಟ್‍ನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಪದಾಧಿಕಾರಿಗಳಾದ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಸದಸ್ಯರಾದ ಮಲ್ಲಮಾಡ ಪ್ರಭು ಪೂಣಚ್ಚ, ಪಾಲೇಂಗಡ ಅಮಿತ್ ಭೀಮಯ್ಯ, ಅಪ್ಪಂಡೇರಂಡ ಯಶವಂತ್ ಕಾಳಪ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಉಪಸ್ಥಿತಿಯಲ್ಲಿ ಶನಿವಾರ ಬೆಳಗ್ಗೆ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕೊಡವ ಜನಾಂಗದ ಸಾಧಕರ ಭಾವಚಿತ್ರಗಳೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪು ಧರಿಸಿದ ಯುವಕರು, ಯುವತಿಯರು, ಕೊಡವ ಪರಂಪರೆಯ ಸಂಕೇತವಾದ ಕೋವಿಯನ್ನು ಹಿಡಿದು ಗತ್ತಿನಿಂದ ಮೆರವಣಿಗೆಯಲ್ಲಿ ಗತ್ತಿನಿಂದ ಹೆಜ್ಜೆ ಹಾಕಿದ ಪುರುಷರು ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿದರು.

ಮೆರವಣಿಗೆಯಲ್ಲಿ ಹಲವಾರು ಮಂದಿ ಬೈಕ್ ಜಾಥ ನಡೆಸಿ ಕುತೂಹಲ ಮೂಡಿಸಿದರೆ, ದುಡಿಕೊಟ್ಟ್ ಪಾಟ್, ಕೊಂಬು ಕೊಟ್ಟ್ ವಾಲಗಕ್ಕೆ ತಕ್ಕಂತೆ ಹೆಜ್ಜೆ ಹಾಕಿದ ಹಲವರು ಮೆರವಣಿಗೆಯ ಕಳೆ ಹೆಚ್ಚಿಸಿದರೆ, ಸಾಂಪ್ರದಾಯಿಕ ಒಡಿಕತ್ತಿ ಹಿಡಿದು ಶಿಸ್ತಿನಿಂದ ಹೆಜ್ಜೆ ಹಾಕಿದ ಮಂದಿ ಕೊಡವ ಸಂಸ್ಕೃತಿಯ ಶ್ರೀಮಂತಿಕೆಯನ್ನು ಪಸರಿಸಿದರು.

ತೆರೆದ ವಾಹನದಲ್ಲಿ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಸಾಧಕರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮೆರವಣಿಗೆಯುದ್ದಕ್ಕೂ ಕೊಡವ ವಾಲಗಕ್ಕೆ ಯುವ ಸಮುದಾಯ ಕುಣಿದು ಕುಪ್ಪಳಿಸಿತು.

ಮಾಲಾರ್ಪಣೆ- ಇಂದಿರಾಗಾಂಧಿ ವೃತ್ತ ಹಾಗೂ ಹಳೇ ಖಾಸಗಿ ಬಸ್‍ನಿಲ್ದಾಣದ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಮೆರವಣಿಗೆಯು ಆಗಮಿಸಿದ ಸಂದರ್ಭ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಮೆರವಣಿಗೆ ಸಂದರ್ಭ ಸ್ವಾಡ್ರನ್‍ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆಗೆ, ಮಂಗೇರಿರ ಮತ್ತಣ್ಣ ಪ್ರತಿಮೆ, ಜನರಲ್ ತಿಮ್ಮಯ್ಯ ಪ್ರತಿಮೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ನಗರದ ಮುಖ್ಯ ರಸ್ತೆಯಲ್ಲಿ ಸಾಗಿದ ಮೆರವಣಿಗೆ ಕ್ರಿಸ್ಟಲ್ ಕೋರ್ಟ್‍ವರೆಗೆ ಸಾಗಿಬಂತು.

ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಅಲ್ಲದೇ ಬೆಂಗಳೂರು, ಮೈಸೂರು, ಮಂಗಳೂರು ಮತ್ತಿತರರ ಕಡೆಗಳಿಂದಲೂ ಕೊಡವ ಜನಾಂಗದವರು ಪಾಲ್ಗೊಂಡದ್ದು ವಿಶೇಷ.

ಕೊಡವ ಸಂಸ್ಕೃತಿಯನ್ನು ಮರೆಯದಿರಿ- ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಅವರು ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಮಾತನಾಡಿ, ಕೊಡಗಿನ ಸಂಸ್ಕೃತಿ, ಪರಂಪರೆಗಳನ್ನು ಯುವ ಸಮೂಹ ಎಂದಿಗೂ ಮರೆಯಕೂಡದು. ಅದೇ ಕೊಡವ ಸಮುದಾಯದ ತಾಯಿಬೇರು ಎಂದು ಈ ನೆಲದ ಸಂಸ್ಕೃತಿಯ ಮಹತ್ವವನ್ನು ತಿಳಿಸಿದರು

ಸನ್ಮಾನ- ಮಧ್ಯಾಹ್ನ ಕ್ರಿಸ್ಟಲ್ ಕೊರ್ಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರು ಕೊಡವ ಸಂಸ್ಕೃತಿಯ ಬಗ್ಗೆ ಮಾತನಾಡಿದರೆ, ವಿವಿಧ ತಂಡಗಳು ಕೊಡಗಿನ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿ ಮೆಚ್ಚುಗೆಗೆ ಪಾತ್ರರಾದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.