ಸೋಮವಾರಪೇಟೆ ಮೇ 20 : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು ಸಂಭ್ರಮಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ನಗರ ಘಟಕದ ಅಧ್ಯಕ್ಷ ಎಚ್.ಎ. ನಾಗರಾಜು, ಪಕ್ಷದ ಪ್ರಮುಖರಾದ ಈಶ್ವರಚಂದ್ರ ವಿದ್ಯಾಸಾಗರ್, ಎಚ್.ಸಿ. ನಾಗೇಶ್, ಮಂಜುನಾಥ್, ಇಂದ್ರೇಶ್, ಕೆ.ಎ.ಪ್ರಕಾಶ್, ಕುಸುಬೂರು ಉಲ್ಲಾಸ್, ಶಶಿಕಲಾ ಚೌಟ, ಮೀನಾ ಕುಮಾರಿ, ಆನಂದ, ಸಂದ್ಯಾ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.







