ಮಡಿಕೇರಿ ಮೇ 23 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಮೇ 24 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕುಶಾಲನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.







