Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳು*

ಮೇ 23, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು:- ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ Indian Meteorlogical Department (ಐಎಂಡಿ) ನಿಂದ ನೀಡುವ ಗುಡುಗು-ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (ಸಿಎಪಿ) ನ ಮೂಲಕ ಪ್ರಸಾರ ಮಾಡುವುದು ಹಾಗೂ ಈ ಕುರಿತು ಅರಿವು ಮೂಡಿಸುವುದು. ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.
ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.
ಗುಡುಗು ಸಿಡಿಲು ಸಂಧರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆ. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting Protocol (ಸಿಎಪಿ) ಮುಖಾಂತರ ಬರುವ ಮೆಸೇಜ್‍ಗಳನ್ನು ಮೊಬೈಲ್‍ನಲ್ಲಿ ಗಮನಿಸುವುದು. ಪ್ರತಿಕೂಲ ಹವಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು ಸಿಡಿಲನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಲ್ಲಿ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ ದೂರವಾಣಿ ಸಂಪರ್ಕ ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿ ಆಶ್ರಯ ಪಡೆಯುವುದು.
ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.
ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.
ಮಕ್ಕಳು ವಯೋವೃದ್ದರೂ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು. ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದು ಹಾಕುವುದು. ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಬಟ್ಟೆ, ಪಾತ್ರೆಗಳನ್ನು ತೊಳೆಯಬಾರದು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.
ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷತೆ ಪಡೆಯುವುದು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು. ಅರಣ್ಯ ಪ್ರದೇಶದಿಂದ ಗಿಡ-ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇದೆ ಎಂದು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ  ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.