Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕುರಿತು ಸಭೆ : ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕುರಿತು ಸಭೆ : ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

ಮೇ 26, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 26 : ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಜನಪ್ರತಿನಿಧಿಗಳು ಜನರ ನಿರೀಕ್ಷೆಗೆ ತಕ್ಕಂತೆ ಹೆಚ್ಚು ಕೆಲಸ ಮಾಡಲು ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬoಧಿಸಿದoತೆ ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರಿಗೆ ಸ್ಪಂದಿಸಬೇಕಾದ ಕೆಲಸಗಳ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಭರವಸೆಯ ಪ್ರಣಾಳಿಕೆಯನ್ನು ಈಡೇರಿಸಲು ಸಂಬoಧಪಟ್ಟ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಣಾಳಿಕೆಯಲ್ಲಿ ಜನಪರ ಕಾರ್ಯಕ್ರಮಗಳು ಇದ್ದು, ಅವುಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಹಂತದ ಅಧಿಕಾರಿಗಳು ಕೈಜೋಡಿಸಬೇಕು ಎಂದು ನೂತನ ಶಾಸಕರು ತಿಳಿಸಿದರು.
ಸರ್ಕಾರದ ವಿವಿಧ ಕಾಮಗಾರಿಗಳಿಗೆ ಸಂಬoಧಿಸಿದoತೆ ಇತ್ತೀಚೆಗೆ ಹೊಸ ಆದೇಶ ಹೊರಡಿಸಿದ್ದು, ಈಗಾಗಲೇ ಪೂರ್ಣವಾಗಿರುವ ಕಾಮಗಾರಿಗಳಿಗೆ ಹಣ ಬಿಡುಗಡೆಗೆ ಬಾಕಿ ಇದ್ದಲ್ಲಿ, ಪಟ್ಟಿಯನ್ನು ಒದಗಿಸಬೇಕು. ಸರ್ಕಾರದ ಆದೇಶವನ್ನು ಪಾಲಿಸಬೇಕೆಂದರು.
ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಮಾಡುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಕಾವೇರಿ ನೀರಾವರಿ ನಿಗಮದ ಎಇಇ ನವೀನ್ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳು ಇದ್ದಲ್ಲಿ ಮುಕ್ತವಾಗಿ ಹಂಚಿಕೊಳ್ಳಬೇಕು. ಯಾವುದೇ ಮುಜುಗರ ಅಥವಾ ಹಿಂಜರಿಯಬಾರದು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.
ಕೊಯನಾಡು ಬಳಿ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗುತ್ತಿದ್ದು, ಇದರಿಂದ ಪ್ರವಾಹ ಉಂಟಾಗಿ ಅಲ್ಲಿನ ಕುಟುಂಬಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಸ್ಥಳೀಯರಿಗೆ ತೊಂದರೆಯಾಗದoತೆ ಗಮನಹರಿಸಬೇಕು ಎಂದು ಅವರು ಹೇಳಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಯನಾಡು ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಹೆಚ್ಚಿನ ಮಳೆ ಸಂದರ್ಭದಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗಿ ಅಲ್ಲಿನ ಕುಟುಂಬಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಜಲಜೀವನ್ ಮಿಷನ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ದೇವನಗೇರಿ ಕಾಲೋನಿ ಹಾಗೂ ಟಿ.ಶೆಟ್ಟಿಗೇರಿ ಸೇರಿದಂತೆ ಹಲವು ಕಡೆಗಳಲ್ಲಿ ಕುಡಿಯುವ ನೀರು ಸಂಪರ್ಕ ಕಲ್ಪಿಸುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಎ.ಎಸ್.ಪೊನ್ನಣ್ಣ ಸೂಚಿಸಿದರು.
ಹಾಡಿಗಳಲ್ಲಿ ವಾಸಿಸುವ ಜನರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಾಗ ಗುರುತಿಸುವಂತಾಗಬೇಕು ಎಂದು ಶಾಸಕರು ಹೇಳಿದರು.
ವಿರಾಜಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ಶೌಚಾಲಯ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಕಳೆದ ಎರಡು ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿದ್ದು, ತುರ್ತು ಕ್ರಮವಹಿಸುವಂತೆ ಸಂಬoಧಪಟ್ಟ ಎಂಜಿನಿಯರ್‌ಗೆ ಶಾಸಕರು ಸೂಚಿಸಿದರು.
ನದಿ ದಡದಲ್ಲಿ ವಾಸಿಸುವ ಜನರನ್ನು ಸ್ಥಳಾಂತರಕ್ಕೆ ಕ್ರಮವಹಿಸುವಂತೆ ಶಾಸಕರು ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಗುಹ್ಯ, ಸಿದ್ದಾಪುರ, ಕರಡಿಗೋಡಿನಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಬೇಕಿದೆ. ಅಲ್ಲಿನ ಜನರು 5-6 ಕಿ,ಮೀ. ದೂರದಲ್ಲಿದ್ದರೆ ತೆರಳುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಗ್ರಾ.ಪಂ.ನಲ್ಲಿ ನಿರ್ಧಾರ ಮಾಡಿ, ಹತ್ತಿರದಲ್ಲಿ ನಿವೇಶನ ಕಲ್ಪಿಸಬೇಕಿದೆ ಎಂದರು.
ಪೊನ್ನoಪೇಟೆ ಕ್ರೀಡಾ ವಸತಿ ಶಾಲೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಉಳಿಸಿಕೊಂಡು ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಮಾಡಬೇಕು. ಆದ್ದರಿಂದ ಈ ಹಿಂದೆ ಇದ್ದಂತೆ ಸ್ಥಳೀಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು ಎಂದು ಅಧಿಕಾರಿಗೆ ಸೂಚಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ದೂರುಗಳು ಕೇಳಿ ಬರದಂತೆ ಎಚ್ಚರ ವಹಿಸಬೇಕು ಎಂದು ಶಾಸಕರು ಹೇಳಿದರು.
ಸಿದ್ದಾಪುರ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಲ್ಲಿನ ತಾ.ಪಂ.ಇಒಗೆ ಸೂಚಿಸಿದರು.
ನಾಪೋಕ್ಲು, ಶ್ರೀಮಂಗಲ ಮತ್ತಿತರ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಬಗ್ಗೆ ದೂರುಗಳು ಕೇಳಿಬರುತ್ತಿದೆ. ಆದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದoತೆ ಗಮನಹರಿಸಬೇಕು ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಇಒ ಹುದ್ದೆಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಈಗಾಗಲೇ ಪೊನ್ನಂಪೇಟೆಯಲ್ಲಿ ತಾ.ಪಂ ಕಚೇರಿ ಇರುವುದರಿಂದ ವಿರಾಜಪೇಟೆಯಲ್ಲಿ ತಾ.ಪಂ.ಕಚೇರಿ ತೆರೆಯಬೇಕಿದೆ. ಈಗಾಗಲೇ ಹೊಸ ತಾಲ್ಲೂಕಿಗೆ ಹುದ್ದೆಗಳು ಮಂಜೂರಾಗಿದ್ದು, ಪೊನ್ನಂಪೇಟೆ ಮತ್ತು ವಿರಾಜಪೇಟೆಯಲ್ಲಿ ಪ್ರಭಾರದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ. ನಂತರದಲ್ಲಿ ಹಂತ ಹಂತವಾಗಿ ಹುದ್ದೆಗಳು ಭರ್ತಿಯಾಗಲಿವೆ ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು ಈಗಾಗಲೇ 95 ಬಸ್‌ಗಳು ಸಂಚರಿಸುತ್ತಿವೆ. ನಿರ್ವಾಹಕರು ಮತ್ತು ಚಾಲಕರ ಕೊರತೆ ಇದೆ. ಹಾಗೆಯೇ ವಿರಾಜಪೇಟೆಯಲ್ಲಿ ಕೆಎಸ್‌ಆರ್‌ಟಿಸಿ ಘಟಕ ನಿರ್ಮಾಣಕ್ಕೆ ಹತ್ತಿರದಲ್ಲಿ ಜಾಗ ಬೇಕಿದೆ ಎಂದರು.
ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೆಗೌಡ ಅವರು ಲೈನ್‌ಮನೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕಿದೆ ಎಂದು ಶಾಸಕರ ಗಮನಕ್ಕೆ ತಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ ಕುಮಾರ್ ಅವರು ಜಿಲ್ಲೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಇದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ, ಜಿ.ಪಂ.ಎoಜಿನಿಯರ್ ನಾಗೇಂದ್ರಪ್ಪ, ಪಿಎಂಜಿಎಸ್‌ವೈ ಎಂಜಿನಿಯರ್ ಪ್ರಭು, ಡಿಯುಡಿಸಿ ಅಧಿಕಾರಿ ಬಸಪ್ಪ, ಹೆದ್ದಾರಿ ವಿಭಾಗದ ಎಂಜಿನಿಯರ್ ನಾಗರಾಜು, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕುಮಾರಸ್ವಾಮಿ, ಕೆಪಿಟಿಸಿಎಲ್ ಎಂಜಿನಿಯರ್ ಮಾದೇಶ, ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ಇತರರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.