ಮೈಸೂರು ಮೇ 29 : ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ 10 ಮಂದಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯ ಪಿಂಜರ ಪೋಲ್ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದು, ಈ ಪೈಕಿ ಕೆಲವರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ಹೋಗಿದ್ದರು ಎನ್ನಲಾಗಿದೆ.

































