Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚನೆ*

ಮೇ 29, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 29 : ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಮಾಹಿತಿ ಪಡೆದು ಮಾತನಾಡಿದರು.
ಡೆಂಗಿ, ಚಿಕನ್ ಗುನ್ಯ, ಮಲೇರಿಯ ಮತ್ತಿತರ ಸಾಂಕ್ರಾಮಿಕ ರೋಗ ತಡೆಯುವಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಶಾಲೆಗಳು, ಕಚೇರಿಗಳು, ಇತರೆ ಎಲ್ಲೆಡೆ ನೀರಿನ ಟ್ಯಾಂಕ್‍ನ್ನು ಆರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಕಳೆದ ಮೂರು ತಿಂಗಳಲ್ಲಿ 25 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ ಎಂದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವ ಕಾಪಾಡಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಡಾ. ಶ್ರೀನಿವಾಸ್ ಮಾಹಿತಿ ನೀಡಿದರು.
ರಾಷ್ಟ್ರೀಯ ಅತಿಸಾರ ಭೇಧಿಯ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಚಿಕ್ಕಮಕ್ಕಳಲ್ಲಿ ಅತಿಸಾರ ಭೇಧಿ ನಿಯಂತ್ರಿಸುವುದು ಮತ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕಿದೆ ಎಂದರು.
ಚಿಕ್ಕ ಮಕ್ಕಳಲ್ಲಿ ಪದೇ ಪದೇ ಭೇಧಿ ಕಂಡು ಬರುತ್ತದೆ. ಆದ್ದರಿಂದ ಓಆರ್‍ಎಸ್ ಮತ್ತು ಜಿಂಕ್‍ನ್ನು ಉಪಯೋಗಿಸಬೇಕಿದೆ. ಸ್ವಚ್ಛತೆಗೆ ಗಮನಹರಿಸಬೇಕಿದೆ. ಕೈತೊಳೆಯುವ ವೈಜ್ಞಾನಿಕ ವಿಧಾನವನ್ನು ಮಕ್ಕಳಲ್ಲಿ ಅರಿವು ಮೂಡಿಸುವುದು, ನಗರ ಪ್ರದೇಶಗಳಲ್ಲಿ ಸಂಚಾರಿ ಆರೋಗ್ಯ ತಂಡಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದರು.
ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು ಕೈತೊಳೆಯುವ ವೈಜ್ಞಾನಿಕ ವಿಧಾನ ತಿಳಿಸುವ ಪೋಸ್ಟರ್ ಮತ್ತು ಗೋಡೆ ಬರಹಗಳನ್ನು ಶಾಲೆಯಲ್ಲಿ ಅಳವಡಿಸುವುದು, ಕೈ ತೊಳೆಯುವ ಮಹತ್ವ ಮತ್ತು ಅದರ ಲಾಭಗಳ ಬಗ್ಗೆ ಮಾಹಿತಿ ನೀಡಿದರು.
ಶಿಶುಗಳಿಗೆ 6 ತಿಂಗಳವರೆಗೆ ಎದೆಹಾಲು ಕೊಡುವುದು ಕಡ್ಡಾಯ. 6 ತಿಂಗಳಿಂದ 2 ವರ್ಷದವರೆಗೆ ಎದೆ ಹಾಲಿನ ಜೊತೆಗೆ ಪೂರಕ ಆಹಾರ ಕೊಡುವುದು, ಅತಿಸಾರ ಭೇಧಿ ತಡೆಗಟ್ಟುವಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವುದು, ಸಾಬೂನಿನಿಂದ ಕೈತೊಳೆಯುವುದು, ಅತಿಸಾರ ಭೇಧಿಯಿಂದ ದೇಹದಲ್ಲಿ ಪೋಷಕಾಂಶದಲ್ಲಿ ಕೊರತೆ, ಆರೋಗ್ಯದಲ್ಲಿ ಕ್ಷೀಣತೆ, ಅಪೌಷ್ಠಿಕತೆ, ರೋಗ ನಿರೋಧಕ ಶಕ್ತಿ ಕುಂದುವಿಕೆ ಹೆಚ್ಚಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಶಿಶು ಮರಣ ತಡೆಯುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆರೋಗ್ಯದ ಕಡೆ ಹೆಚ್ಚಿನ ಮಹತ್ವ ನೀಡುವಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಎಲ್ಲಾ ಕಚೇರಿಗಳಲ್ಲಿ ತಂಬಾಕು ಮುಕ್ತ ವಲಯ ಎಂದು ನಾಮಫಲಕ ಅಳವಡಿಸಲಾಗಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.
ತಂಬಾಕು ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ 6ಬಿ ಕಾಯ್ಡೆಯ ಅನುಷ್ಠಾನ ಕುರಿತು ಅರಿವು ಮೂಡಿಸಬೇಕು. ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ತಂಬಾಕು ಮುಕ್ತ ಕಾಲೇಜು ಎಂದು ಮಾಡುವಲ್ಲಿ ಶ್ರಮಿಸಬೇಕು ಎಂದರು.
ತಹಶೀಲ್ದಾರರ ನೇತೃತ್ವದಲ್ಲಿ ತಾಲ್ಲೂಕು ಸಮನ್ವಯ ಸಮಿತಿ ಸಭೆ ನಡೆಸಬೇಕು. ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಪ್ಟಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಕೋಪ್ಟಾ ಕಾಯ್ದೆ ಜಾರಿಗೊಳಿಸುವ ನಿಟ್ಟಿನಲ್ಲಿ ಸೆಕ್ಷನ್ 5 ಮತ್ತು 7 ನ್ನು ಅನುಷ್ಠಾನಗೊಳಿಸುವುದು. ವಿಶ್ವ ತಂಬಾಕು ರೈತ ದಿನಾಚರಣೆ ಬಗ್ಗೆ ಪುನಿತಾ ರಾಣಿ ಮಾಹಿತಿ ನೀಡಿದರು.
ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಅವರು ಕೋಪ್ಟಾ ಕಾಯ್ದೆ ನಿಯಂತ್ರಣ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸೇರಿಸಿಕೊಂಡು ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ಮಾಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜ್, ಡಾ.ಚೇತನ್, ಡಾ.ಅನಿಲ್ ಧವನ್, ಡಾ.ಸೋಮಶೇಖರ್ ಮತ್ತು ಡಾ.ಕುಸ್ವಂತ್ ಕೋಳಿಬೈಲು ಇತರರು ಹಲವು ಮಾಹಿತಿ ನೀಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.