Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಡಿ.ಸಿ.ಭೇಟಿ : ಉಚಿತ ಪುಸ್ತಕ, ಬಟ್ಟೆ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಗೆ ಡಿ.ಸಿ.ಭೇಟಿ : ಉಚಿತ ಪುಸ್ತಕ, ಬಟ್ಟೆ ವಿತರಣೆ*

ಮೇ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 31 : ಜಿಲ್ಲಾಡಳಿತ, ಜಿ.ಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸಹಯೋಗದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಮತ್ತು ಶಾಲಾ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಕಲಿಕೆಯೊಂದಿಗೆ ಪೋಷಕರಿಗೆ ಗೌರವ ಸಲ್ಲಿಸಬೇಕು. ಮಕ್ಕಳು ಆಟ- ಪಾಠದೊಂದಿಗೆ ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಕಲಿಕೆಗೆ
ಶಾಲಾ ಪ್ರಾರಂಭದಲ್ಲೇ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಿ ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.

ಬಿಇಓ ಕೆ.ವಿ.ಸುರೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ. ಪ್ರತಿ ಮಗು ಕೂಡ ಶಿಕ್ಷಣದಿಂದ ವಂಚಿತವಾಗದಂತೆ ಸರ್ಕಾರ ಕಾಳಜಿ ವಹಿಸುತ್ತಿದೆ ಎಂದರು.

ಈ ಪ್ರೌಢಶಾಲೆಯಲ್ಲಿ ಉತ್ತಮ ಶಿಕ್ಷಕರ ತಂಡವಿದ್ದು, ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವುದಕ್ಕೆ ಶ್ಲಾಘಿಸಿದರು.
ಶಾಲಾ ಆರಂಭೋತ್ಸವದ ಮಹತ್ವ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾ.ಪಂ.ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್.ಎಂ.ಎಸ್.ಎ.) ಯೋಜನೆಯ ಉಪ ಯೋಜನಾ ಸಮನ್ವಯಾಧಿಕಾರಿ ಸೌಮ್ಯ, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್.ಪಲ್ಲೇದ್, ಸಿಆರ್‍ಪಿ ಕೆ.ಶಾಂತಕುಮಾರ್, ಎಸ್‍ಡಿಎಂಸಿ ಸದಸ್ಯರಾದ ಜವರಯ್ಯ, ನಾಗರಾಜ್, ರವಿಕುಮಾರ್, ಮಂಡಲ ಪಂಚಾಯ್ತಿ ಮಾಜಿ ಪ್ರಧಾನ ಕೆ.ಎಸ್.ರಾಜಾಚಾರಿ, ತಹಶೀಲ್ದಾರ್ ಟಿ.ಎಂ.ಪ್ರಕಾಶ್, ಉಪ ತಹಶೀಲ್ದಾರ್ ಮಧುಸೂದನ್, ಪಿಡಿಓ ಎಂ.ಆರ್.ಸಂತೋಷ್, ಡಿ.ಆರ್ ಎಫ್ ಓ ಭವ್ಯ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಎತ್ತಿನ ಗಾಡಿಯಲ್ಲಿ ಮೆರವಣಿಗೆ : ಶಾಲಾ ಪ್ರಾರಂಭೋತ್ಸವಕ್ಕೆ ಮುನ್ನ ಕೂಡ್ಲೂರು ಗ್ರಾಮದ ಮುಖ್ಯ ರಸ್ತೆಯಿಂದ ಗ್ರಾಮದ ಬೀದಿ ಮೂಲಕ
ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್, ಮಕ್ಕಳೊಂದಿಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿದರು.

ಬಿಸಿಯೂಟ ಆರಂಭ: ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ ಮಧ್ಯಾಹ್ನ ಮಕ್ಕಳಿಗೆ ಪಾಯಸದೊಂದಿಗೆ ಬಿಸಿಯೂಟ ವಿತರಿಸಲಾಯಿತು.

ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಸಂವಾದ : ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್, ಶಾಲಾ ಮಕ್ಕಳೊಂದಿಗೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ಮೆಲುಕು ಹಾಕುತ್ತಾ, ಮಕ್ಕಳು ಆಟ – ಪಾಠದೊಂದಿಗೆ ಸಂತಸದ ಕಲಿಕೆಯಲ್ಲಿ ತೊಡಗುವ ಮೂಲಕ ಚೆನ್ನಾಗಿ ಓದಿ ತಂದೆ – ತಾಯಿಗೆ ಉತ್ತಮ ಹೆಸರು ತರಬೇಕು ಎಂದರು.

ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ ಸತೀಶ್ , ಭವಿಷ್ಯದಲ್ಲಿ ಏನು ಆಗಬೇಕು ಎಂದು ಕೇಳಿದಾಗ, ಕೆಲವು ಮಕ್ಕಳು ಸೈನಿಕರು, ಎಂಜಿನಿಯರ್, ಇತ್ಯಾದಿ ಆಗಬೇಕು ಎಂದರು.

ಆಗ ಡಿ.ಸಿ.ಯವರು ಪ್ರತಿಕ್ರಿಯಿಸಿ, ಮಕ್ಕಳು ಉತ್ತಮ ಹಾಗೂ ಉನ್ನತ ವಿದ್ಯಾಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉತ್ತಮ ಹುದ್ದೆ ಅಲಂಕರಿಸಬಹುದು. ಇಂತಹ ಹುದ್ದೆ ಪಡೆಯಲು ಉತ್ತಮ ಶಿಕ್ಷಣ ಹೊಂದಬೇಕು ಎಂದರು.
ಮಕ್ಕಳು ಆಟಕ್ಕೆ ನೀಡುವ ಸಮಯವನ್ನು ಕಲಿಕೆಗೂ ನೀಡಬೇಕು ಎಂದು ಡಿ.ಸಿ.ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.