Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ : ಕೊಡಗಿನಲ್ಲಿ ಮೀನು ಕೃಷಿಗೆ ವಿಫುಲ ಅವಕಾಶ : ಸಹಾಯಕ ನಿರ್ದೇಶಕ ಸಚಿನ್ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ : ಕೊಡಗಿನಲ್ಲಿ ಮೀನು ಕೃಷಿಗೆ ವಿಫುಲ ಅವಕಾಶ : ಸಹಾಯಕ ನಿರ್ದೇಶಕ ಸಚಿನ್ ಮಾಹಿತಿ*

ಮೇ 31, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 31 :  ಕೊಡಗು ಜಿಲ್ಲೆಯಲ್ಲಿ ಮೀನು ಕೃಷಿಗೆ ವಿಪುಲ ಅವಕಾಶಗಳಿದ್ದು, ಜಿಲ್ಲೆಯ ರೈತರು ಆಧುನಿಕ ತಂತ್ರಜ್ಞಾನದ ಮೂಲಕ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದ ಸಹಾಯಕ ನಿರ್ದೇಶಕ ಎಂ.ಎಸ್. ಸಚಿನ್ ಅಭಿಪ್ರಾಯಪಟ್ಟರು.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಬುಧವಾರ ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದ ಹಾಗೂ ಮೀನು ಮರಿ ಉತ್ಪಾದನೆ, ಪಾಲನಾ ಕೇಂದ್ರಕ್ಕೆ ಭೇಟಿಯ ಸಂದರ್ಭ ಮಾತನಾಡಿದ ಅವರು, ನಾವು ಭೂಮಿಯ ಮೇಲಿನ ಬೆಳೆಗಳ ಬಗ್ಗೆ ಮಾತ್ರ ಹೆಚ್ಚು ಒತ್ತು ನೀಡುತ್ತಿದ್ದೇವೆ. ಆದರೆ ನೀರಿನ ಒಳಗಿನ ಕೃಷಿಯ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಆದರೆ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ಅನ್ನವೇ ಚಿನ್ನವಾಗುವ ದಿನ ದೂರವಿಲ್ಲ ಎಂದು ನುಡಿದರು.
ಕೊಡಗು ಸೇರಿದಂತೆ ಭಾರತದಲ್ಲಿ ಮೀನು ಕೃಷಿಗೆ ಉತ್ತಮ ಅವಕಾಶವಿದ್ದು, ರೈತರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವುದರ ಜೊತೆಗೆ ಮುಂದೊಂದು ದಿನ ಭಾರತ ಮೀನು ಕೃಷಿಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯಲ್ಲಿ ಮೀನುಗಾರಿಕಾ ಇಲಾಖೆಯಡಿ 9 ಕೆರೆಗಳಿದ್ದು, ಹಾರಂಗಿ, ಹಾಗೂ ಚಿಕ್ಲಿಹೊಳೆ ಎರಡು ಜಲಾಶಯಗಳು ಹಾಗೂ 9 ನದಿ ಭಾಗದ ಮೀನುಗಾರಿಕಾ ಪ್ರದೇಶಗಳಿದ್ದು, ಇವುಗಳನ್ನು ಇಲಾಖೆಯಿಂದ ಟೆಂಡರ್ ಮೂಲಕ ನೀಡಲಾಗುತ್ತಿದೆ. ಕೊಡಗಿನಲ್ಲಿ ಪ್ರತಿಯೊಬ್ಬ ಕೃಷಿಕರಲ್ಲೂ ಕೆರಗಳಿದ್ದು, ಇವುಗಳನ್ನು ಮೀನು ಕೃಷಿಗೆ ಬಳಸಿಕೊಂಡಲ್ಲಿ ಅವರ ಆದಾಯವನ್ನು ದ್ವಿಗುಣ ಮಾಡಿಕೊಳ್ಳಬಹುದು ಎಂದ ಸಚಿನ್ ಅವರು, ಮೀನು ಕೃಷಿಗೆ ಅಗತ್ಯವಿರುವ ಮಾಹಿತಿಯ ಜೊತೆಗೆ ಮೀನು ಮರಿಗಳನ್ನು ಸರ್ಕಾರದ ದರದಲ್ಲಿ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ದಕ್ಷಿಣ ಭಾರತದ ಪ್ರಮುಖ ಮಹಶೀರ್ ಮೀನು ಸಂವರ್ಧನ ಕೇಂದ್ರವಾಗಿ ಇದು ರೂಪುಗೊಂಡಿದ್ದು, ಸುಮಾರು 7.5 ಹೆಕ್ಟೇರ್ ಪ್ರದೇಶದ 80 ಕೊಳಗಳಲ್ಲಿ ವಾರ್ಷಿಕವಾಗಿ ಮಹಶೀರ್ ಮಾತ್ರವಲ್ಲದೆ ಇಂಜಿಯನ್ ಮೇಜ್ ಕಾರ್ಪ್ ಎಂದೇ ಕರೆಯಲಾಗುವ ಕಾಟ್ಲ, ರೋಹು, ಸಾಮಾನ್ಯ ಗೆಂಡೆ, ಮೃಗಾಲ್ ಸೇರಿದಂತೆ ವಿವಿಧ ತಳಿಯ ಅಂದಾಜು 2 ಕೋಟಿ ಮೀನು ಮರಿಗಳನ್ನು ಉತ್ಪಾದಿಸಿ ಆಸಕ್ತ ಮೀನು ಕೃಷಿಕರಿಗೆ ವಿತರಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಮೀನುಗಾರಿಕಾ ಇಲಾಖೆ, ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರದಿಂದಾಗಿ ಇದೀಗ ಕೊಡಗಿನಲ್ಲಿ ಡೆಕ್ಕನ್ ಮಹಶೀರ್ ಮೀನಿನ ತಳಿ ಕನಿಷ್ಟ ಕಾಳಜಿ ಮಟ್ಟಕ್ಕೆ ತಲುಪಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು, ಅವೈಜ್ಞಾನಿಕವಾದ ಮೀನು ಹಿಡಿಯುವುದರಿಂದಾಗಿ ಮೀನಿನ ಸಂತತಿ ನಾಶವಾಗುತ್ತಿದೆ ಎಂದು ವಿಷದವನ್ನೂ ವ್ಯಕ್ತಪಡಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಿ ಮಾತನಾಡಿ ಕೊಡಗಿನಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಮೀನು ಕೃಷಿಕರಿದ್ದಾರೆ. ಮೀನು ಸಾಕಾಣಿಕೆ ಮಾಡುವುದು ಹಾಗೂ ಅದರ ನಿರ್ವಹಣೆ ತಿಳಿಸಿಕೊಡುವ ನಿಟ್ಟಿನಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಸಂಘದಿಂದ ಮತ್ತಷ್ಟು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಕೃಷಿ ಹೊಂಡಗಳಿರುವುದರಿಂದ ಬಹುತೇಕರು ಮೀನು ಕೃಷಿಯಲ್ಲಿ ತೊಡಗಿದ್ದಾರೆ. ಆದರೆ ಎಲ್ಲರಿಗೂ ಮೀನು ಕೃಷಿಯ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಆದ್ದರಿಂದ ಇಲಾಖೆಯ ಮೂಲಕ ರೈತರಿಗೆ ಮತ್ತಷ್ಟು ಮಾಹಿತಿ ತಿಳಿಸಿ ರೈತರ ಆದಾಯವನ್ನು ಹೆಚ್ಚಿಸುವಂತೆ ಮಾಡಬೇಕೆಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಸಮಿತಿ ಅಧ್ಯಕ್ಷ ಹರೀಶ್ ಹಾಜರಿದ್ದರು.
ಸಂವಾದ ಬಳಿಕ ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದಲ್ಲಿ ಅಳವಿನಂಚಿನಲ್ಲಿರುವ ಮಹಶೀರ್ ಮೀನುಗಳ ನಿರ್ವಹಣೆ, ಮೀನು ಮರಿಗಳ ಉತ್ಪಾದನೆ, ಇತರೆ ಅಲಂಕಾರಿಕಾ ಮೀನುಗಳು ಸೇರಿದಂತೆ ಕೇಂದ್ರದ ಮಾಹಿತಿಯನ್ನು ಅಧಿಕಾರಿ ಸಚಿನ್ ನೀಡಿದರು. ಜಿಲ್ಲೆಯ ನಾನಾ ಭಾಗದ ಸುಮಾರು 20ಕ್ಕೂ ಅಧಿಕ ಮಂದಿ ಪತ್ರಕರ್ತರು ಪಾಲ್ಗೊಂಡಿದ್ದರು.

ಜುಲೈ ತಿಂಗಳಿನಲ್ಲಿ ಮೀನು ಮರಿ ವಿತರಣೆ :  ಹಾರಂಗಿ ಮೀನು ಮರಿ ಉತ್ಪಾದನಾ ಕೇಂದ್ರದಲ್ಲಿ ಉತ್ಪಾದಿಸುವ ವಿವಿಧ ತಳಿಯ ಮೀನು ಮರಿಗಳನ್ನು ಜಿಲ್ಲೆಯ ರೈತರಿಗೆ ಜುಲೈ ತಿಂಗಳಿನಲ್ಲಿ ಸರ್ಕಾರದ ದರದಲ್ಲಿ ವಿತರಿಸಲಾಗುತ್ತಿದ್ದು, ಆಸಕ್ತ ಮೀನು ಕೃಷಿಕರು ತಮ್ಮ ಹೆಸರು, ಊರು, ತಾಲೂಕು ದೂರವಾಣಿ ಸಂಖ್ಯೆಗಳೊಂದಿಗೆ ವಾಟ್ಸ್ ಆಪ್ ಸಂಖ್ಯೆ 9886717626( ಸಚಿನ್) ಅಥವಾ ಕ್ಷೇತ್ರ ಪಾಲಕರ ಸಂಖ್ಯೆ 9448918782 (ನಿರ್ವಾಣಿ)ಗೆ ಮಾಹಿತಿ ಕಳುಹಿಸಿ ಮೀನು ಮರಿಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನುಡಿದರು.

ಅಳಿವಿನಂಚಿನ ಮಹಶೀರ್ ಮೀನು ಸಂರಕ್ಷಣೆ :  ಹಾರಂಗಿ ಮೀನು ಮರಿ ಉತ್ಪದನಾ ಹಾಗೂ ಪಾಲನಾ ಕೇಂದ್ರವನ್ನು 1985-86ನೇ ಸಾಲಿನ ಪಂಚವಾರ್ಷಿಕ ಯೋಜನೆಯಲ್ಲಿ ಪಶ್ಚಿಮಘಟ್ಟ ಅಭಿವೃದ್ಧಿ ಯೋಜನೆಯಡಿ ಆರಂಭಿಸಲಾಗಿದ್ದು, ಪ್ರಮುಖವಾಗಿ ಅಳಿವಿನಂಚಿನಲ್ಲಿರುವ, ದೇವರ ಮೀನು ಎಂದೇ ಕರೆಯಲಾಗುವ ಮಹಶೀರ್ ಮೀನುಗಳ ಸಂತತಿಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಕೇಂದ್ರದಲ್ಲಿ ಸುಮಾರು 800ಕ್ಕೂ ಅಧಿಕ ತಾಯಿ ಮೀನುಗಳಿದ್ದು, ಮರಿಗಳನ್ನು ಉತ್ಪಾದಿಸಿ ಕಾವೇರಿ ನದಿಗೆ ಬಿಡುವ ಮೂಲಕ ಅಳಿವಿನಂಚಿನಲ್ಲಿರುವ ಮಹಶೀರ್ ಮೀನಿನ ಸಂತತಿಯನ್ನು ಹೆಚ್ಚಿಸಲಾಗುತ್ತಿದೆ ಎಂದು ಸಚಿನ್ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.