Advertisement
11:38 PM Saturday 2-December 2023

*ಮೀನುಗಾರಿಕೆ ಇಲಾಖೆಯ ಯೋಜನೆಗಳ ಮಾಹಿತಿ*

31/05/2023

ಮಡಿಕೇರಿ ಮೇ 31 : ಪ್ರಸಕ್ತ (2023-24) ಸಾಲಿನಲ್ಲಿ ಮೀನುಗಾರಿಗೆ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯ ಯೋಜನೆಗಳ ಅಡಿಯಲ್ಲಿ ಅನುದಾನ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಜಿಲ್ಲಾ ಪಂಚಾಯತ್ ಯೋಜನೆಗಳಡಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ, ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂದಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕು. ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮೀನುಗಾರಿಕೆಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು.
ರಾಜ್ಯವಲಯ/ ಕೇಂದ್ರ ಯೋಜನೆಗಳಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ, ಮೀನುಗಾರಿಕೆಗೆ ಅಗತ್ಯವಿರುವ ಸಲಕರಣೆಗಳನ್ನು ಉಚಿತ ವಿತರಣೆ ಮಾಡಲಾಗುವುದು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನು ಕೃಷಿ ಕೊಳ ನಿರ್ಮಾಣ, ಐಸ್ ಪೆಟ್ಟಿಗೆಯೊಂದಿಗೆ ಸೈಕಲ್ ದ್ವಿಚಕ್ರ, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ ಹಾಗೂ ಇತರೆ ಯೋಜನೆಗಳ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ತಾಲ್ಲೂಕು ಕಚೇರಿಗಳಿಗೆ ಕಚೇರಿ ಸಮಯದಲ್ಲಿ ಹಾಗೂ ಮಡಿಕೇರಿ ತಾಲ್ಲೂಕು 9769070850, ಸೋಮವಾರಪೇಟೆ ತಾಲ್ಲೂಕು 9448918782 ಹಾಗೂ ಪೊನ್ನಂಪೇಟೆ- 9731363143 ನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.