*ಜೂ.2 ರಂದು ಪರಿಸರ ಕುರಿತು ಚಿತ್ರ ಹಾಗೂ ಪ್ರಬಂಧ ಸ್ಪರ್ಧೆ*

31/05/2023

ಮಡಿಕೇರಿ ಮೇ 31 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ವಿಶ್ವ ಪರಿಸರ ದಿನಾಚರಣೆ-2023 ರ ಅಂಗವಾಗಿ ಶಾಲಾ ಮಕ್ಕಳಿಗೆ ಜೂ.2 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಶಾಲೆಯಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ `ಪರಿಸರ ಕುರಿತು ಸ್ಥಳದಲ್ಲೇ ಚಿತ್ರ ಬರೆಯುವ ಹಾಗೂ ಪ್ರಬಂಧ ಸ್ಪರ್ಧೆ’ ನಡೆಯಲಿದೆ.
ಈ ವರ್ಷದ ಘೋಷ ವಾಕ್ಯವು `ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು(ಸೊಲ್ಯೂಷನ್ಸ್ ಟು ಪ್ಲಾಸ್ಟಿಕ್ ಪೊಲ್ಯೂಷನ್)(ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರ ಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು).
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಎಸ್.ಪ್ರದೀಪ್, ಮಮದಾಪುರ, ಉಪ ಪರಿಸರ ಅಧಿಕಾರಿಗಳು 7348983888, ಕೆ.ಎ.ಆಸ್ಟಿನ್, ಯೋಜನಾ ಸಹಾಯಕರು 9986729289(ಕಚೇರಿ 08272-221855) ಹಾಗೂ ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.