Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಲು ಅವಕಾಶವಿಲ್ಲ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಲು ಅವಕಾಶವಿಲ್ಲ

ಜೂನ್ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.1 : ಕೊಡಗಿನ ಪ್ರವಾಸಿ ತಾಣಗಳಾದ ಮಾಂದಲ ಪಟ್ಟಿ, ಅಬ್ಬಿಫಾಲ್ಸ್ ಮೊದಲಾದೆಡೆಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲು ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳನ್ನು ಬಾಡಿಗೆಗೆ ಬಳಸಲು ಅವಕಾಶವಿಲ್ಲವೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಎಸ್.ಎನ್. ತಿಳಿಸಿದ್ದಾರೆ.
ಜಿಲ್ಲೆ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಪ್ರತಿನಿತ್ಯ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಜಿಲ್ಲೆಗಾಗಮಿಸುವುದಲ್ಲದೆ, ಮಡಿಕೇರಿ ಸಮೀಪದ ಅಬ್ಬಿಫಾಲ್ಸ್, ಮಾಂದಲಪಟ್ಟಿ ಪ್ರದೇಶಗಳಿಗೆ ತೆರಳುತ್ತಾರೆ. ಇದನ್ನು ಬಳಸಿಕೊಂಡು ಹಲ ಖಾಸಗಿ ಜೀಪ್‍ಗಳನ್ನು ಪ್ರವಾಸಿಗರನ್ನು ಪ್ರವಾಸಿ ತಾಣಗಳಿಗೆ ಕರೆದೊಯ್ಯುವ ಪ್ರಮಾಣ ಹೆಚ್ಚಾಗುತ್ತಾ ಸಾಗಿತ್ತು.
ಇತ್ತೀಚೆಗೆ ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ತೆರಳಿದ್ದ ಪ್ರವಾಸಿಗರ ಮೇಲೆ ಬಾಡಿಗೆ ಜೀಪ್ ಓಡಿಸುತ್ತಿದ್ದ ಮಂದಿ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮತ್ತು ಸಾರಿಗೆ ಪ್ರಾಧಿಕಾರಕ್ಕೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ತಮ್ಮ ಕಛೇರಿಯಲ್ಲಿ ಮಾಂದಲಪಟ್ಟಿ, ಅಬ್ಬಿಫಾಲ್ಸ್ ಪ್ರವಾಸಿ ತಾಣಗಳು ಬರುವ ಕೆ.ನಿಡುಗಣೆ ಪಮಚಾಯ್ತಿಯ ಅಧ್ಯಕ್ಷರು ಮತ್ತು ಖಾಸಗಿ ಜೀಪ್ ಮಾಲೀಕರುಗಳೊಂದಿಗೆ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಖಾಸಗಿ ವಾಹನಗಳನ್ನು ಬಾಡಿಗೆ ವಾಹನಗಳನ್ನಾಗಿ ಪ್ರವಾಸಿತಾಣಗಳಲ್ಲಿ ಓಡಿಸಕೂಡದು. ಹಾಗೊಮ್ಮೆ ನಿಯಮ ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆಂದು ಸಷ್ಟಪಡಿಸಿದರು.
ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ಖಾಸಗಿ ಜೀಪ್‍ಗಳನ್ನು ಬಾಡಿಗೆಗೆ ಓಡಿಸಲು ಅವಕಾಶವಿಲ್ಲದೇ ಇರುವುದನ್ನು ವಾಹನ ಮಾಲೀಕರಿಗೆ ಮನದಟ್ಟು ಮಾಡಿದ ಮಧುರ ಅವರು, ಖಾಸಗಿ ಜೀಪ್‍ಗಳನ್ನು `ಸಾರಿಗೆ ವಾಹನ’ಗಳನ್ನಾಗಿ ಪರಿವರ್ತಿಸಿಕೊಂಡು ನಿಯಮಾನುಸಾರ ಉಪಯೋಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಖಾಸಗಿ ವಾಹನಗಳನ್ನು ಬಾಡಿಗೆ ವಾಹನಗಳನ್ನಾಗಿ ಪರಿವರ್ತನೆ ಮಾಡಲು ಅನುಸರಿಸಬೇಕಾದ ವಿಧಾನದ ಬಗ್ಗೆ ಮತ್ತು ಪಾವತಿಸಬೇಕಾಗುವ ಶುಲ್ಕ ಮತ್ತು ತೆರಿಗೆಯ ಬಗ್ಗೆಯೂ ಪೂರ್ಣ ಮಾಹಿತಿಯನ್ನು ಅವರು ಇದೇ ಸಂದರ್ಭ ಒದಗಿಸಿದರು.
ಅಗತ್ಯ ಸಹಕಾರ : ಖಾಸಗಿ ವಾಹನಗಳನ್ನು ಸಾರಿಗೆ ವಾಹನಗಳನ್ನಾಗಿ ಪರಿವರ್ತಿಸಲು, ಸುಗಮವಾಗಿ, ಶೀಘ್ರವಾಗಿ, ನಿಯಮಾನುಸಾರ ಈ ಪ್ರದೇಶಿಕ ಸಾರಿಗೆ ಕಛೇರಿಯಿಂದ ಎಲ್ಲಾ ರೀತಿಯಲ್ಲಿ ಸಹಕರಿಸಲಾಗುತ್ತದೆ. ವಾಹನಗಳ ಪರಿವರ್ತನೆಗೆ ಅರ್ಜಿಗಳನ್ನು ಸಲ್ಲಿಸುವವರಿಗೆ ಪ್ರಥಮ ಆದ್ಯತೆ ನೀಡಿ, ಅವರ ವಾಹನಗಳನ್ನು ಬಾಡಿಗೆ ವಾಹನಗಳನ್ನಾಗಿ ಮಾಡಿಕೊಡಲಾಗುವುದು. ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಕಾನೂನಿನಡಿ ಕ್ರಮ ಜರುಗಿಸಲಾಗುವುದೆಂದು ಮಧುರ ಅವರು ಸ್ಪಷ್ಟಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.20: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನವೆಂಬರ್ 24ರಂದು ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ…

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026

ನ.21ರಂದು ವಿಶೇಷ ಅಂಚೆ ಚೀಟಿ, ಪ್ರಾಚೀನ ನಾಣ್ಯಗಳು ಮತ್ತು ನೋಟುಗಳ ಪ್ರದರ್ಶನ

ನವೆಂಬರ್ 21, 2026

ನ.21ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ನವೆಂಬರ್ 21, 2026

ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ, ಪಕ್ಷ ಸಂಘಟನೆ ಬಲಪಡಿಸಿ: ಶಾಸಕ ಎ.ಎಸ್. ಪೊನ್ನಣ್ಣ ಕರೆ; ನಾಪೋಕ್ಲು ಬ್ಲಾಕ್ ಹಾಗೂ ವಿರಾಜಪೇಟೆ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆ

ನವೆಂಬರ್ 21, 2026

ನ.22ರಂದು ಭಾಗಮಂಡಲದಲ್ಲಿ ತುಳಸಿ ಪೂಜೆ

ನವೆಂಬರ್ 21, 2026

ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಕಾರ್ಯಾರಂಭಕ್ಕೆ ವೇಗ; ಅಧಿಕಾರಿಗಳೊಂದಿಗೆ ಶಾಸಕ ಡಾ. ಮಂತರ್ ಗೌಡ ಸಭೆ

ನವೆಂಬರ್ 21, 2026

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದಲ್ಲಿ ಶಾರದಾ ಪೂಜೆ

ನವೆಂಬರ್ 21, 2026

‘ಆರ್ಟಿಕ್ಯುಲೇಟ್’ ಚರ್ಚಾ ಸ್ಪರ್ಧೆ: ಕೊಡಗು ವಿದ್ಯಾಲಯದ ವಿದ್ಯಾರ್ಥಿನಿಯರು ಚಾಂಪಿಯನ್

ನವೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.