*ವಿಶ್ವ ಬೈಸಿಕಲ್ ದಿನ : ಜೂ.3 ರಂದು ಮಡಿಕೇರಿಯಲ್ಲಿ ಸೈಕ್ಲೋಥಾನ್ ಜಾಥ*
02/06/2023

ಮಡಿಕೇರಿ ಜೂ.2 : ವಿಶ್ವ ಬೈಸಿಕಲ್ ದಿನ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜೂ.3 ರಂದು ಬೆಳಗ್ಗೆ 8 ಗಂಟೆಗೆ ಸೈಕ್ಲೋಥಾನ್ ಜಾಥ ಕಾರ್ಯಕ್ರಮ ನಡೆಯಲಿದೆ.
ಸೈಕ್ಲೋಥಾನ್ ಜಾಥವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭವಾಗಿ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಜಿಲ್ಲಾ ಸರ್ವೇಕ್ಷಣಾ ಘಟಕದ ಮುಂಭಾಗದವರೆಗೆ ಸಾಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ.
