Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನಣ್ಣ ಅವರಿಗೆ ಕೈತಪ್ಪಿರುವುದು ನೋವುಂಟಾಗಿದೆ : ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಣ್ಣ ಅವರಿಗೆ ಕೈತಪ್ಪಿರುವುದು ನೋವುಂಟಾಗಿದೆ : ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ

ಜೂನ್ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.3 :   ಕೊಡಗಿನ ಮೂಲಭೂತ ಸಮಸ್ಯೆಗಳ ಬಗೆಹರಿಕೆಗೆ ಅಗತ್ಯವಾದ ‘ಸಚಿವ’ ಸ್ಥಾನ ಜಿಲ್ಲೆಯ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಕೈತಪ್ಪಿರುವುದು ಜಿಲ್ಲೆಯ ಕಾಂಗ್ರೆಸ್ ಪ್ರಮುಖರು ಮತ್ತು ಕಾರ್ಯಕರ್ತರಿಗೆ ಅತೀವ ನೋವನ್ನು ಉಂಟುಮಾಡಿದೆಯೆಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡು ಕ್ಷೇತ್ರಗಳ ಚುನಾವಣೆಯ ಹಂತದಲ್ಲಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವ ಕುಮಾರ್ ಅವರು, ಕೊಡಗಿನಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಪಡೆದುಕೊಂಡಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇಂದು ಅವರ ಭರವಸೆ ಈಡೇರಿಲ್ಲವೆಂದು ಬೇಸರ  ವ್ಯಕ್ತಪಡಿಸಿದರು.

ಪ್ರಸ್ತುತ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ನಿಯುಕ್ತಿಗೊಳಿಸಿ, ಕ್ಯಾಬಿನೆಟ್ ಸಚಿವ ಸ್ಥಾನದ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಇದು ಸಂತಸವನ್ನು ಉಂಟುಮಾಡಿದೆಯಾದರು, ಕೊಡಗಿನ ಮೂಲಭೂತ ಸಮಸ್ಯೆಗಳನ್ನು ಸಚಿವ ಸಂಪುಟದ ಮುಂದಿಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಸಚಿವ ಸ್ಥಾನದ ಅಗತ್ಯವಿದೆಯೆಂದು ಒತ್ತಿ ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಡಗು ಭೌಗೋಳಿಕವಾಗಿ ಮತ್ತು ಸಾಂಸ್ಕøತಿಕವಾಗಿ ಇತರೆ ಎಲ್ಲಾ ಜಿಲ್ಲೆಗಳಿಗಿಂತ ವಿಭಿನ್ನವಾಗಿದೆ ಮತ್ತು ಹತ್ತು ಹಲ ಸಮಸ್ಯೆಗಳನ್ನು ಒಳಗೊಂಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಶಾಸಕರಾದವರಿಗೆ ಸಚಿವ ಸ್ಥಾನ ನೀಡದಿರುವ ಮಾನದಂಡ ಸಮರ್ಪಕವಲ್ಲ. ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು, ಎರಡು ಸರ್ಕಾರಗಳಲ್ಲಿ ಅಡಿಷನಲ್ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿದವರು ಮಾತ್ರವಲ್ಲದೆ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರು. ಇವರು ಯಾವುದೇ ಖಾತೆಯನ್ನು ನಿರ್ವಹಿಸುವ ಎಲ್ಲಾ ಸಾಮಥ್ರ್ಯ ಹೊಂದಿದವರಾಗಿದ್ದಾರೆ. ಈ ಹಿನ್ನೆಲೆ ಮುಖ್ಯ ಮಂತ್ರಿಗಳು ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವತ್ತ ಚಿಂತನೆ ಹರಿಸಬೇಕೆಂದು ಮನವಿ ಮಾಡಿದರು.

ಅನ್ಯಾಯ ಸರಿಪಡಿಸಿ- ಕೊಡಗಿನ ಕೊಡವ ಮತ್ತು ಅರೆ ಭಾಷಿಕ ಸಮುದಾಯ ಅತ್ಯಂತ ಸೂಕ್ಷ್ಮ ಅಲ್ಪಸಂಖ್ಯಾತ ಸಮೂಹಕ್ಕೆ ಒಳಪಡುವ ಜನಾಂಗಗಳಾಗಿದ್ದು, ಸೇನಾ ಕ್ಷೇತ್ರ, ಕ್ರೀಡಾಕ್ಷೇತ್ರಗಳಿಗೆ ಇವರು ನೀಡಿರುವ ಅನುಪಮ ಕೊಡುಗೆ, ವಾರ್ಷಿಕವಾಗಿ ಕಾಫಿ ಕೃಷಿಯಿಂದ ಸರ್ಕಾರಕ್ಕೆ ದೊರಕುವ ಆದಾಯ ಮೊದಲಾದವುಗಳನ್ನು ಪರಿಗಣಿಸಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನಿಡಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದರಿಂದ ಜಿಲ್ಲೆಯ ಶಾಸಕರಿಗೆ ಆಗಿರುವ ಅನ್ಯಾಯವನ್ನು ಮುಖ್ಯಮಂತ್ರಿಗಳು ಅರಿತು ಇನ್ನಾದರು ಸರಿಪಡಿಸಬೇಕೆಂದು ಒತ್ತಾಯಿಸಿದರು.

ಕೊಡಗಿನ ಸಮಸ್ಯೆಗಳ ಬಗೆಹರಿಕೆಗೆ ಒತ್ತು ನೀಡಿ- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದ ಪುನರ್ ರಚನೆಯ ಸಂದರ್ಭ ಪೊನ್ನಣ್ಣ ಅವರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಆದರೆ, ಅಲ್ಲಿಯವರೆಗೆ ಜಿಲ್ಲೆಯ ಮೂಲಭೂತ ಸಮಸ್ಯೆಗಳ ಬಗೆಹರಿಕೆಯೊಂದಿಗೆ, ವಿರಾಜಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂದರ್ಭ ಹೊರತರಲಾಗಿರುವ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಪೂರೈಸಲು ಒತ್ತು ನೀಡಬೇಕೆಂದರು.

ಶಾಸಕ ಪೊನ್ನಣ್ಣ ಅವರು ತಮ್ಮ ಕ್ಷೇತ್ರದ ಪ್ರಣಾಳಿಕೆಯಲ್ಲಿ ತೋರಿಸಲಾಗಿರುವ ಭ್ರಷ್ಟಾಚಾರ ನಿರ್ಮೂಲನೆಯ ಮೂಲಕ ವಿರಾಜಪೇಟೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸುವುದು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕ್ಷೇತ್ರದ ವ್ಯಾಪ್ತಿಗೆ ಬರುವ ವಿರಾಜಪೇಟೆ , ಪೊನ್ನಪೇಟೆ ಮತ್ತು ಮಡಿಕೇರಿ ತಾಲ್ಲೂಕಿನ ಕೆಲ ಭಾಗಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾದ ಮೂರು ಸರ್ವೇ ಕಛೇರಿ ತೆರೆಯುವುದು, ಕ್ರೀಡಾ ಚಟುವಟಿಕೆಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದು, ಹಾಡಿಯ ಜನರಿಗೆ ಮೂಲ ಸೌಲಭ್ಯ, ಆನೆ–ಮಾನವ ಸಂಘರ್ಷ ಪರಿಹಾರಕ್ಕೆ ತಮ್ಮ ಅಧಿಕಾರದ ಅವಧಿಯಲ್ಲಿ ಕಟಿಬದ್ಧರಾಗಿ ಶ್ರಮಿಸಲಿದ್ದಾರೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮುಂದಿನ ಎಂಪಿ ಚುನಾವಣೆಗೆ ದಿಕ್ಸೂಚಿ- ವಿಧಾನ ಸಭಾ ಚುನಾವಣೆಯಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ಮುಂಬರುವ ಜಿಲ್ಲಾ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ಆ ಚುನಾವಣೆಗಳಲ್ಲೂ ಕಾಂಗ್ರೆಸ್‍ನ್ನು ಜನತೆ ಆಶೀರ್ವದಿಸಲಿದ್ದಾರೆಂದು ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದರು,

ಜಿಲ್ಲೆಯಲ್ಲಿ ಸುದೀರ್ಘ ಆಡಳಿತ ನಡೆಸಿದ ಬಿಜೆಪಿ ಶಾಸಕರು, ಜಿಲ್ಲೆಯನ್ನು ಪ್ರತಿನಿಧಿಸಿದ ಸಂಸದರು ಸ್ಥಳೀಯ ಮೂಲ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ. ಇದರಿಂದ ಬಿಜೆಪಿಯ ಸಾಂಪ್ರದಾಯಿಕ ಮತದಾರರು ಭ್ರಮನಿರಸನಗೊಂಡು ಬದಲಾವಣೆ ಬಯಸಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಮುಂಬರುವ ಚುನಾವಣೆಗಳಲ್ಲು ಕಾಂಗ್ರೆಸ್ ಯಶಸ್ಸನ್ನು ಪಡೆಯುತ್ತದೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.29 NEWS DESK : ಮಹರ್ಷಿ ವಾಲ್ಮೀಕಿಯವರು ರಚಿಸಿದ ’ರಾಮಾಯಣ’ ಕೇವಲ ಒಂದು ಧಾರ್ಮಿಕ ಗ್ರಂಥ ಮಾತ್ರವಲ್ಲ, ಅದು…

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.