Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ : ಆಧುನೀಕರಣ ಪ್ರಕ್ರಿಯೆಯತ್ತ ಕೊಡಗು ಕೃಷಿ ಇಲಾಖೆ : ಶಬಾನ ಎಂ. ಶೇಖ್ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ : ಆಧುನೀಕರಣ ಪ್ರಕ್ರಿಯೆಯತ್ತ ಕೊಡಗು ಕೃಷಿ ಇಲಾಖೆ : ಶಬಾನ ಎಂ. ಶೇಖ್ ಮಾಹಿತಿ*

ಜೂನ್ 6, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 : ಆಧುನೀಕರಣ ಪ್ರಕ್ರಿಯೆಯತ್ತ ಕೊಡಗು ಜಿಲ್ಲಾ ಕೃಷಿ ಇಲಾಖೆ ದಾಪುಗಾಲಿಟ್ಟಿದ್ದು, ಜಿಲ್ಲೆಯ ರೈತ ಸಮುದಾಯ ಇದರ ಸದುಪಯೋಗ ಪಡೆಯುವುದರೊಂದಿಗೆ ಯಾಂತ್ರೀಕೃತ ಕೃಷಿಯತ್ತ ಹೆಚ್ಚಿನ ಒಲವು ತೋರಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ. ಶೇಖ್ ಕರೆ ನೀಡಿದ್ದಾರೆ.
ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕುಶಾಲನಗರ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲ ರೀತಿಯ ಬೆಳೆಗಳನ್ನು ಲಾಭದಾಯಕವಾಗಿ ಬೆಳೆಯಲು ಸಾಧ್ಯವಿಲ್ಲ. ಭತ್ತದ ಕೃಷಿಯು ಲಾಭದಾಯಕವಲ್ಲ. ವನ್ಯ ಪ್ರಾಣಿಗಳ ಉಪಟಳ, ಕಾರ್ಮಿಕರ ಸಮಸ್ಯೆಯಿಂದಾಗಿ ಭತ್ತದ ಕೃಷಿ ಕೊಡಗಿನಲ್ಲಿ ಹಿನ್ನೆಡೆ ಕಂಡಿದೆ ಎಂದು ಅವರು ವಿಷಾದಿಸಿದರು.
ಒಂದು ಕಾಲದಲ್ಲಿ ಜಿಲ್ಲೆಯಲ್ಲಿ 40 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ಪ್ರಸ್ತುತ 28 ಸಾವಿರ ಹೆಕ್ಟೇರ್ ಕಡಿಮೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಬರುವಂತಹ ತಳಿಗಳನ್ನು ಉಪಯೋಗಿಸಿ ಅದರೊಂದಿಗೆ ಶೇ.90ರಷ್ಟು ಯಂತ್ರೋಪಕರಣಗಳನ್ನು ಬಳಸುವ ಮೂಲಕ ಭತ್ತದ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಸಾಧ್ಯವಿದೆ ಎಂದು ಅವರು ಖಚಿತವಾಗಿ ನುಡಿದರು.
ಸೋಮವಾರಪೇಟೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಯಾದವ್ ಬಾಬು ಮಾತನಾಡಿ ಕೃಷಿ ಇಲಾಖೆಯು ಹೆಚ್ಚು ಆಧುನೀಕರಣದತ್ತ ಸಾಗಿದ್ದು ಇಲಾಖೆಯಲ್ಲಿ ಎಲ್ಲವೂ ಆನ್ಲೈನ್ ಪ್ರಕ್ರಿಯೆ ಮತ್ತು ಕ್ಯೂಆರ್ ಕೋಡ್ ಬಳಸಿ ವ್ಯವಹಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಮೋಸ ಹಾಗೂ ಕಳಪೆ ಗುಣಮಟ್ಟದ ಸೇವೆಗಳನ್ನು, ವಸ್ತು ಪರಿಕರಗಳನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ಓರ್ವ ರೈತನಿಗೆ ಒಂದು ಬಾರಿ ನೀಡಲಾದ ಸಬ್ಸಿಡಿ ಮತ್ತು ಇತರೆ ರಿಯಾಯಿತಿಗಳು ಷರತ್ತಿಗೆ ಒಳಪಟ್ಟಿರುವುದರಿಂದ ಕೆಲವೊಮ್ಮೆ ಗೊತ್ತಿದ್ದು, ಗೊತ್ತಿಲ್ಲದೆ ಕೃಷಿ ಇಲಾಖೆ ಮೇಲೆ ಅಪವಾಧ ಹೊರಿಸಲಾಗುತ್ತಿದೆ ಎಂದು ಸ್ಪಷ್ಟೀಕರಣ ನೀಡಿದರು.
ಭತ್ತದ ಕೃಷಿಗೆ ಎಕರೆಯೊಂದಕ್ಕೆ ರು.10 ಸಾವಿರ ಬೆಂಬಲ ಬೆಲೆ ಸಾಕಷ್ಟು ಸಮಯದಿಂದ ನೆನೆಗುದಿಗೆ ಬಿದ್ದಿದ್ದು, ಈ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಪ್ರಕ್ರಿಯೆ ಆಗಿದ್ದು, ಭತ್ತದ ಕೃಷಿಯಲ್ಲಿ ಕೆಲವು ತಳಿಗಳಿಗೆ ಅಪಾರ ಬೇಡಿಕೆ ಇದ್ದು, ಅದರಲ್ಲಿ ರಾಜಮುಡಿ ತಳಿಯು ಅಗ್ರಗಣ್ಯವಾಗಿದೆ. ಯಾವುದೇ ಬೆಳೆಯನ್ನು ಬೆಳೆದಾಗ ಅದಕ್ಕೆ ಮಾರುಕಟ್ಟೆ ವ್ಯವಸ್ಥೆಯನ್ನು ಕಂಡುಕೊಂಡಾಗ ಭತ್ತದ ಕೃಷಿ ಸೇರಿದಂತೆ ಯಾವುದೇ ಕೃಷಿ ಲಾಭದಾಯಕವಾಗುತ್ತದೆ ಎಂದು ತಿಳಿಸಿದರು.
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಮಾತನಾಡಿ ಪತ್ರಕರ್ತರ ಸಂಘ, ಅಭಿವೃದ್ಧಿ ದೃಷ್ಠಿಕೋನವನ್ನು ಇಟ್ಟುಕೊಂಡು ಕೃಷಿ ಪ್ರಧಾನ ಜಿಲ್ಲೆಯಾಗಿರುವ ಕೊಡಗಿನಲ್ಲಿ ಪತ್ರಕರ್ತರು ವಿವಿಧ ಇಲಾಖೆಗಳು ಮತ್ತು ಕೃಷಿಕರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ಸರಣಿ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ತಾಲೂಕು ಸಂಘದ ಕಾರ್ಯಕ್ರಮಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ತಾಲೂಕು ಸಂಘದ ಖಜಾಂಚಿ ಎಂ.ಎಂ. ಅಶ್ವತ್ಥ್ ಸ್ವಾಗತಿಸಿ ಸದಸ್ಯರಾದ ನವೀನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

:: ಭತ್ತ ಬಿತ್ತನೆ ಬೀಜ ದಾಸ್ತಾನು :: ಈಗಾಗಲೇ ಭತ್ತ ಹಾಗೂ ಮುಸುಕಿನ ಜೋಳ ಬಿತ್ತನೆ ಬೀಜ ಜಿಲ್ಲೆಯಲ್ಲಿ ದಾಸ್ತಾನು ಮಾಡಲಾಗುತ್ತಿದ್ದು, ರಾಜ್ಯ ಭತ್ತದ ಬೀಜ ನಿಗಮದಿಂದ ತನು, ಬಿಆರ್ 2655, ಐಆರ್64, ಇಂಟಾನ್, ತುಂಗಾ ಮತ್ತು ಆರ್ ಎನ್ ಆರ್ 15048 ಮತ್ತು ಅತೀರಾ ಸೇರಿ ಮಡಿಕೇರಿ ತಾಲೂಕಿಗೆ 100 ಕ್ವಿಂಟಾಲ್, ಸೋಮವಾರಪೇಟೆ ತಾಲೂಕಿನ 814 ಕ್ವಿಂಟಾಲ್ ಹಾಗೂ ವಿರಾಜಪೇಟೆ ತಾಲೂಕಿಗೆ 804 ಕ್ವಿಂಟಾಲ್ ದಾಸ್ತಾನು ಮಾಡಲಾಗಿದ್ದು, ಆಗಸ್ಟ್ ವರೆಗೂ ಬಿತ್ತನೆ ಬೀಜ ನೀಡಲಾಗುವುದು. ಮುಸುಕಿನ ಜೋಳ ಸೋಮವಾರಪೇಟೆ ತಾಲೂಕಿಗೆ 44.40 ಕ್ವಿಂಟಾಲ್ ದಾಸ್ತಾನಿದೆ ಎಂದು ಶಬಾನ ತಿಳಿಸಿದರು.

ಕೃಷಿ ಇಲಾಖೆಯಲ್ಲಿ ಶೇ.80 ರಷ್ಟು ಹುದ್ದೆ ಖಾಲಿ :: ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಶೇ.80ರಷ್ಟು ಹುದ್ದೆಗಳು ಖಾಲಿ ಇದ್ದು, 20ರಷ್ಟು ಸಿಬ್ಬಂದಿ ವರ್ಗದಿಂದ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ 16 ರೈತ ಸಂಪರ್ಕ ಕೇಂದ್ರವಿದೆ. ಇಲ್ಲಿ ಪೂರ್ಣ ಪ್ರಮಾಣದ ಅಧಿಕಾರಿ, ಸಿಬ್ಬಂದಿ ವರ್ಗದ ಕೊರತೆ ಇದ್ದು, ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಶಬಾನ ಉತ್ತರಿಸಿದರು.

ಯುವಕರು ಕೃಷಿಯತ್ತ ಒಲವು ತೋರಬೇಕು :: ಆಧುನಿಕ ಬೇಸಾಯ ಪದ್ಧತಿ ಮಿಶ್ರಬೆಳೆ ಮತ್ತು ಸಮಗ್ರ ಕೃಷಿ ಪದ್ಧತಿಯಿಂದ ಯುವಕರು ಕೃಷಿ ಕ್ಷೇತ್ರವನ್ನು ತಮ್ಮ ಕ್ಷೇತ್ರವನ್ನಾಗಿ ಆಯ್ದಕೊಂಡಲ್ಲಿ ಸಾಧನೆ ಮಾಡಲು ಸಾಧ್ಯವಿದೆ ಎಂದು ಶಬಾನ ತಿಳಿಸಿದರು. ಉದಾಹರಣೆಗೆ ರಾಜಮುಡಿ ಭತ್ತದ ತಳಿಗೆ ಅಪಾರ ಬೇಡಿಕೆ ಇದ್ದು, ಆಧುನಿಕ ಬೇಸಾಯ ಪದ್ಧತಿಯ ಹಿನ್ನೆಲೆಯಲ್ಲಿ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಂಡಲ್ಲಿ ಅಪಾರ ಲಾಭ ಗಳಿಸುವ ಸಾಧ್ಯತೆಯಿದೆ ಎಂದು ಯಾದವ್ ಬಾಬು ಹೇಳಿದರಲ್ಲದೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಅನೇಕ ಪ್ರಗತಿಪರ ಭತ್ತದ ಕೃಷಿಕರು ಆಧುನಿಕ ಬೇಸಾಯ ಪದ್ಧತಿ ಮತ್ತು ಯಾಂತ್ರೀಕರಣ ಪದ್ಧತಿಯಿಂದ ಲಾಭದಾಯಕ ಉದ್ಯಮವನ್ನಾಗಿ ಕೃಷಿಯನ್ನು ಪರಿಗಣಿಸಿದ್ದಾರೆಂದು ಉಲ್ಲೇಖಿಸಿದರು.
ಕೃಷಿ ಸಂಬಂಧಿತ ಪರಿಹಾರ ವಿವರ :: ಕೃಷಿ ಇಲಾಖೆಯು ಸಾಲಬಾಧೆ ಅಥವಾ ಕೃಷಿ ಹಿನ್ನೆಲೆಯಲ್ಲಿ ಯಾವುದೇ ಋಣಭಾರದಿಂದ ಕೃಷಿಕರು ಆತ್ಮಹತ್ಯೆ ಮಾಡಿಕೊಂಡಲ್ಲಿ ರು.5 ಲಕ್ಷ ಪರಿಹಾರ ನೀಡಲಾಗುವುದು. ಅದೃಷ್ಟವಶಾತ್ ಕೊಡಗಿನಲ್ಲಿ ಆತ್ಮಹತ್ಯೆ ಪ್ರಕರಣಗಳು ಬೆರಳೆಣಿಕೆಯಷ್ಟು ಎಂದ ಅವರು, ಕೃಷಿ ಕಾರ್ಮಿಕರು ಅಥವಾ ಮಾಲೀಕರು ಕೃಷಿ ಸಂಬಂಧಿಸಿದ ಕೆಲಸಗಳಲ್ಲಿ ಆಕಸ್ಮಿಕವಾಗಿ ಮರಣಹೊಂದಿದರೆ ರು.2 ಲಕ್ಷ ಪರಿಹಾರ ದೊರಕಲಿದ್ದು, ಆಯಾ ತಾಲೂಕಿನ ಕೃಷಿ ಸಹಾಯಕ ನಿರ್ದೇಶಕರು ಎಸಿ ಅಧ್ಯಕ್ಷತೆಯಲ್ಲಿ ಇರುವ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಸಮಿತಿಗೆ ಮನವಿ ನೀಡಿದಲ್ಲಿ ಶೀಘ್ರ ಪ್ರಕರಣ ಇತ್ಯರ್ಥ ಪಡಿಸಲಾಗುವುದು ಎಂದು ಸಹಾಯಕ ನಿರ್ದೇಶಕ ಯಾದವ್ ಬಾಬು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.