ಮಡಿಕೇರಿ ಜೂ.8 : ಜಿಲ್ಲೆಯ ರೈತರು ಮುಂಗಾರು ಹಂಗಾಮಿನ ಸಿದ್ದತೆ ಮತ್ತು ವಿವಿಧ ಬೆಳೆಗಳಿಗೆ ರಸಗೊಬ್ಬರಗಳ ಬಳಕೆ/ ಪೂರೈಕೆ ಕುರಿತು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಾಫಿ ಮಂಡಳಿಯ ಅಧಿಕಾರಿಗಳೊಂದಿಗೆ ಜೂ.16 ರಂದು ಬೆಳಗ್ಗೆ 10.30 ಗಂಟೆಗೆ ರೇಡಿಯೋ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.







