Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಆಯೋಗ ರಚನೆ : ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣ್ಯನ್ ಸ್ವಾಮಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಆಯೋಗ ರಚನೆ : ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣ್ಯನ್ ಸ್ವಾಮಿ

ಜೂನ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.9 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಯಂತೆ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗವಾಗಿರುವ ಕೊಡಗು ಜಿಲ್ಲೆಯ ಬುಡಕಟ್ಟು ಜನಾಂಗ ಕೊಡವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಲು ಸರ್ಕಾರ ಆಯೋಗವೊಂದನ್ನು ರಚಿಸಬೇಕೆಂದು ಒತ್ತಾಯಿಸಿ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಈಗಾಗಲೇ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿರುವ ಅವರು ಇದೇ ಜೂ.14 ರಂದು ಅರ್ಜಿ ವಿಚಾರಣೆಯ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಪತ್ರದಲ್ಲಿ ಕೊಡವರ ಬೇಡಿಕೆಗಳ ಕುರಿತು ಉಲ್ಲೇಖಿಸಿರುವ ಡಾ.ಸುಬ್ರಮಣ್ಯನ್ ಸ್ವಾಮಿ ಕೊಡವರಿಗೆ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಆಯೋಗವೊಂದನ್ನು ರಚಿಸುವ ತುರ್ತು ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.
ಕೂರ್ಗ್ ಪ್ರದೇಶವು 1950 ಮತ್ತು 1956 ರ ನಡುವೆ ವಿಧಾನಸಭೆ, ಮುಖ್ಯಮಂತ್ರಿ, ಚುನಾಯಿತ ಲೋಕಸಭಾ ಸಂಸದ ಹಾಗೂ ರಾಜ್ಯಸಭಾ ಸಂಸದರನ್ನು ಹೊಂದಿರುವ ರಾಜ್ಯವಾಗಿತ್ತು. 1957 ರಲ್ಲಿ ರಾಜ್ಯಗಳನ್ನು ಮರುಸಂಘಟಿಸಿದ ನಂತರ ಈ ಪ್ರದೇಶವನ್ನು ಕರ್ನಾಟಕದೊಂದಿಗೆ ವಿಲೀನಗೊಳಿಸಲಾಯಿತು. ಇದಾದ ನಂತರ ಕರ್ನಾಟದಲ್ಲಿ ಕೊಡವರ ಸ್ಥಿತಿ ಹೀನಾಯವಾಗಿದೆ.
ಹೈದರಾಬಾದ್ ಕರ್ನಾಟಕ ಭಾಗದ ಕೆಲವು ಪ್ರದೇಶಗಳಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. ತಾರತಮ್ಯವನ್ನು ಅನುಭವಿಸಿದ ಕೊಡವರಿಗೆ ಅಂತಹ ಯಾವುದೇ ಸ್ಥಾನಮಾನ ನೀಡಿಲ್ಲ. ಪಿಐಎಲ್ ಸ್ವರೂಪದ ನನ್ನ ರಿಟ್ ಅರ್ಜಿಯ ವಿಚಾರಣೆ ಜೂ.14 ರಂದು ನಡೆಯಲಿದೆ. ಈ ಸಂದರ್ಭ ನಾನು ಬೆಂಗಳೂರಿಗೆ ಆಗಮಿಸುತ್ತಿದ್ದು, ತಮ್ಮನ್ನು ಭೇಟಿಯಾಗಿ ಚರ್ಚಿಸಲು ಅವಕಾಶ ನೀಡಬೇಕೆಂದು ಡಾ.ಸುಬ್ರಮಣ್ಯನ್ ಸ್ವಾಮಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
::: ಸ್ವಾಮಿ ಕ್ರಮ ಸ್ವಾಗತಾರ್ಹ :::
ಕೊಡವ ಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆ ಡಾ.ಸುಬ್ರಮಣಿಯನ್ ಸ್ವಾಮಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗೆ ಸಂಬಂಧಿಸಿದಂತೆ ಗಮನ ಸೆಳೆದಿರುವುದು ಸ್ವಾಗತಾರ್ಹವೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಕೊಡವ ಜನಾಂಗದ ಅಭ್ಯುದಯಕ್ಕಾಗಿ ಸಿಎನ್‍ಸಿ ಪ್ರಸ್ತಾಪಿಸಿರುವ ಬೇಡಿಕೆಗಳ ಪರವಾಗಿ ಸ್ವಾಮಿ ಅವರು ಹೆಚ್ಚು ಕಾಳಜಿ ತೋರಿ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ಇದೀಗ ಮುಖ್ಯಮಂತ್ರಿಗಳ ಮಟ್ಟದಲ್ಲಿ ವ್ಯವಹರಿಸಿ ಕೊಡವರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗಿರುವುದು ಶ್ಲಾಘನೀಯವೆಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.26 : 2026-27ನೇ ಸಾಲಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪಟ್ಟಿಯಲ್ಲಿ ತಿಯನ್…

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.