Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಭಾಷೆಯ ಬದಲಾವಣೆಯು ಸಹಜ ಪ್ರಕ್ರಿಯೆ : ಪ್ರೊ.ಮುರಿಗೆಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ಭಾಷೆಯ ಬದಲಾವಣೆಯು ಸಹಜ ಪ್ರಕ್ರಿಯೆ : ಪ್ರೊ.ಮುರಿಗೆಪ್ಪ*

ಜೂನ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.9 : ಭಾಷೆಯ ಬದಲಾವಣೆಯು ಸಹಜ ಪ್ರಕ್ರಿಯೆ. ಕನ್ನಡ ಭಾಷೆಯ ಉಳಿವಿಗೆ ಪ್ರಾಚೀನತೆ ಹಾಗೂ ದಾಖಲೆಗಳು ಕಾರಣವಾಗಿದೆ ಎಂದು ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಮುರಿಗೆಪ್ಪ ತಿಳಿಸಿದರು.
ಕೊಡಗು ವಿಶ್ವ ವಿದ್ಯಾನಿಲಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಆದಿಪುರಾಣವು ಧರ್ಮಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ತಿಳಿಸುತ್ತದೆ. ಪಂಪ, ರನ್ನ, ಪೊನ್ನ ನಮ್ಮ ಪರಂಪರೆಯನ್ನು ಮುಂದುವರೆಸಿಕೊಂಡು ಬರುತ್ತಾರೆ. ಪಂಪನು ತನ್ನ ಕಾವ್ಯಗಳಲ್ಲಿ ಬರುವ ಪುರಾಣ ಇತಿಹಾಸವನ್ನು ತಿಳಿಸಿದ್ದಾರೆ. ರಾಜ್ಯ ಸತ್ಯ, ಧರ್ಮ ಸತ್ಯ, ಕಾಲ ಸತ್ಯ ಮೌಲ್ಯವನ್ನು ತಿಳಿಸುತ್ತದೆ. ದೀರ್ಘಕಾಲದ ಇತಿಹಾಸವಿರುವ ಹಳೆಗನ್ನಡದ ಸೊಬಗನ್ನು ಗದುಗಿನ ವೀರನಾರಾಯಣ ಕೃತಿಯನ್ನು ದೇವಸ್ಥಾನದಲ್ಲಿ ಕುಳಿತು ರಚಿಸಲಾಗಿದೆ. ಇದು ನಮ್ಮ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ವಚನ ಪರಂಪರೆಯು ಸೀಮಿತವಾದುದಲ್ಲ ಒಂದು ದೀರ್ಘತೆಯುಳ್ಳ ಕ್ರಿಯೆ ಈ ಕ್ರಿಯೆಗಳಿಂದಲೇ ಮಾನವನ ಏಳಿಗೆ ಸಾಧ್ಯವಾಗುತ್ತದೆ. ಸತ್ಯ, ಶುದ್ಧ ಕೆಲಸ ಕಾರ್ಯವೆನಿಸಿಕೊಳ್ಳುತ್ತದೆ. ಸಾಮಾನ್ಯ ಮಹಿಳೆಯು ಕೂಡ ಸಮಾಜವನ್ನು ನಿರ್ಮಾಣ ಮಾಡ ಬಲ್ಲಳು. ಮಹಿಳೆಯರಿಗೆ ಬರೆಯುವ ಸ್ವಾತಂತ್ರ್ಯವನ್ನು ಭಾಷೆ ನೀಡಿದೆ. ಕನ್ನಡ ಭಾಷೆಯು ಜೀವಂತಿಕೆಯಾಗಿ ಉಳಿಯಲು ಸಾಕಷ್ಟು ಪುರಾವೆ ದಾಖಲೆಗಳಿವೆ. ಸಮುದಾಯದಲ್ಲಿ ನಡೆಯುವ ಆಗು-ಹೋಗುಗಳು, ಒಳಿತು ಕೆಡುಕುಗಳನ್ನು ದಾಖಲೀಕರಣ ಮಾಡಬೇಕು. ದಾಖಲೆಗಳಿಂದಲೇ ಕನ್ನಡವು ಜೀವಂತಿಕೆಯನ್ನು ಪಡೆದುಕೊಂಡಿದೆ ಎಂದು ಪ್ರೊ. ಮುರಿಗೆಪ್ಪ ಹೇಳಿದರು.
ಮದ್ರಾಸ್ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ..ಚೆ.ರಾಮಸ್ವಾಮಿ ಮಾತನಾಡಿ, ಕನ್ನಡದ ಪದಗಳು ವಿಶಿಷ್ಟ ಅರ್ಥಗಳನ್ನು ನೀಡುತ್ತವೆ. ಇಲ್ಲಿ ಧ್ವನಿ ಬದಲಾವಣೆಯು ತುಂಬಾ ಮುಖ್ಯ. ಕೆಲವೊಂದು ಸಂದರ್ಭದಲ್ಲಿ ಅಲ್ಪಪ್ರಾಣ, ಮಹಾಪ್ರಾಣದ ಮೇಲೆ ಕನ್ನಡ ನಿಂತಿದೆ ಎನ್ನುವುದು ಸತ್ಯದ ಸಂಗತಿಯಾಗಿದೆ. ಕನ್ನಡ ಭಾಷೆಯಲ್ಲಿ ಉಚ್ಛಾರಣೆಯು ಮುಖ್ಯ ಸ್ವರೂಪವನ್ನು ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.
ಧ್ವನಿ ಬದಲಾವಣೆಯಲ್ಲಿ ಒಂದೊಂದು ಪದಗಳು ಒಂದೊಂದು ಅರ್ಥ ನೀಡುವುದರಿಂದ ಕನ್ನಡವನ್ನು ದ್ವನಿ ಉಚ್ಚಾರಣೆಯ ಮೂಲಕ ಗುರುತಿಸುವುದು ಎಂದರೂ ತಪ್ಪಾಗಲಾರದು. ಕನ್ನಡವನ್ನು ಬೆಳೆಸಿರುವುದು ಉಳಿಸಿರುವುದು ಅಭಿವೃದ್ಧಿಪಡಿಸಿರುವುದು ಬಸವಣ್ಣ ಹಾಗೂ ಅಲ್ಲಮ ಪ್ರಭು. ಇವರ ಭಾಷೆಯು ಸುಲಭವಾಗಿ ಸರಳವಾಗಿ ಸಾಮಾನ್ಯ ಜನರಿಗೆ ಅರ್ಥೈಸಿಕೊಳ್ಳಲು ಸಹಕಾರಿಯಾಗಿದೆ. ಭಾಷಾ ಸಾಮಥ್ರ್ಯ, ಭಾಷಾ ಅಭಿವ್ಯಕ್ತಿಯ ಕಡೆಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಮದ್ರಾಸ್ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಚೆ.ರಾಮಸ್ವಾಮಿ ತಿಳಿಸಿದರು.
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ ಮಾತನಾಡಿ, ಕನ್ನಡ ಪ್ರಾಚೀನತೆ ಹಿರಿಮೆ ಶಾಸನ ಸಾಹಿತ್ಯಗಳು ಕನ್ನಡಕ್ಕೆ ಅದರದೇ ಆದ ಕೊಡುಗೆಯನ್ನು ನೀಡಿದೆ. ಕವಿರಾಜಮಾರ್ಗ, ಹಲ್ಮಿಡಿ ಶಾಸನ, ವಡ್ಡಾರಾಧನೆ ಇಂತಹ ಕೃತಿಗಳು ಕನ್ನಡಕ್ಕೆ ಮೆರುಗು ತಂದಿದೆ. ಹಾಗೂ ಕನ್ನಡ ವಿಭಾಗ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಬಹಳ ದೊಡ್ಡ ಕೊಡುಗೆಯನ್ನು ನೀಡಿದೆ. ಇಂತಹ ವಿಚಾರ ಸಂಕಿರಣದಿಂದ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕನ್ನಡ ವಿಭಾಗದ ಅಧ್ಯಾಪಕರು ಹಾಗೂ ಸಂಚಾಲಕ ಡಾ.ಕರುಣಾಕರ ಎನ್.ವಿ, ಸಂಯೋಜಕ ಪ್ರೊ.ತಿಪ್ಪೇಸ್ವಾಮಿ, ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.