Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತೋಟದಲ್ಲಿ ಪಿಕ್ ಅಪ್ ವಾಹನ ಪಲ್ಟಿ : ಮರಗಳ್ಳರು ಪರಾರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ತೋಟದಲ್ಲಿ ಪಿಕ್ ಅಪ್ ವಾಹನ ಪಲ್ಟಿ : ಮರಗಳ್ಳರು ಪರಾರಿ

ಜೂನ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.10 : ಕಾಫಿ ತೋಟದಲ್ಲಿದ್ದ ಬೀಟೆ ಮರವನ್ನು ಅಕ್ರಮವಾಗಿ ಕಡಿದು ಅದರ ನಾಟಾಗಳನ್ನು ಕದ್ದೊಯ್ಯುತ್ತಿದ್ದ ಸಂದರ್ಭ ವಾಹನ ಪಲ್ಟಿಯಾದ ಹಿನ್ನೆಲೆ ಮರಗಳ್ಳರು ಸ್ಥಳದಿಂದ ಪರಾರಿಯಾಗಿರುವ ಪ್ರಕರಣ ಪೊನ್ನಂಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಈ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೀಟೆ ಮರದ 7 ನಾಟಾಗಳ ಸಹಿತ ಸಾಗಾಟಕ್ಕೆ ಬಳಸಿದ್ದ ಪಿಕ್ ಅಪ್ ವಾಹನವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದ ತೀತರಮಾಡ ಸುನೀಲ್ ಎಂಬುವವರ ಕಾಫಿ ತೋಟದಲ್ಲಿ ಬೀಟೆ ಮರಗಳಿದ್ದು, ಒಂದು ವಾರದ ಹಿಂದೆ ಮರಗಳ್ಳರು 1 ಮರವನ್ನು ಕಡಿದು ಹಾಕಿದ್ದರು. ಮಾತ್ರವಲ್ಲದೇ ಮರದ ಬುಡವನ್ನು 3 ನಾಟಾಗಳನ್ನಾಗಿ ಪರಿವರ್ತಿಸಿದ್ದರು. ಈ ಕುರಿತು ತೋಟದ ಮಾಲೀಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಮಹಜರು ನಡೆಸಿ ಸ್ಥಳದಿಂದ ತೆರಳಿದ್ದರು. ಬೀಟೆ ಮರದ ನಾಟಾಗಳನ್ನು ತೋಟದಲ್ಲೇ ಬಿಡಲಾಗಿತ್ತು.
ತೋಟದ ಮಾಲೀಕರು ಬೆಂಗಳೂರಿಗೆ ತೆರಳಿದ್ದ ಮಾಹಿತಿ ಅರಿತ ಚೋರರು ಶುಕ್ರವಾರ ರಾತ್ರಿ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಪಿಕ್ ಅಪ್ ವಾಹನದಲ್ಲಿ ಒಟ್ಟು 7 ನಾಟಾಗಳನ್ನು ತುಂಬಿಸಿ ಕದ್ದೊಯ್ಯುವ ಪ್ರಯತ್ನ ಮಾಡಿದ್ದರು. ಈ ಸಂದರ್ಭ ತೋಟದ ಒಳಗೆ ಬೀಟೆ ಮರ ತುಂಬಿದ್ದ ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ ಮರ ಕಳ್ಳರು ವಾಹನ ಸಹಿತ ಬೀಟೆ ಮರದ ನಾಟಾಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
1 ವಾರದ ಹಿಂದೆಯೇ ಬೀಟೆ ಮರ ಕಡಿದಿರುವ ಪ್ರಕರಣ ನಡೆದಿದೆ. ಪೊಲೀಸ್ ಇಲಾಖೆ ಮಹಜರು ನಡೆಸಿ ಬೀಟೆ ಮರದ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದರು. ಆದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿ ಸ್ಥಳದಲ್ಲಿದ್ದ ಬೀಟೆ ಮರಗಳನ್ನು ಡಿಪೋಗೆ ಸ್ಥಳಾಂತರಿಸಿಲ್ಲ ಎಂದು ರೈತ ಸಂಘದ ಪ್ರಮುಖರು ಆರೋಪಿಸಿದರು. ತಕ್ಷಣ ಆರೋಪಿಗಳ ಬಂಧಕ್ಕೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಟ್ರುಮಾಡ ಸುಜಯ್ ಬೋಪ್ಪಯ್ಯ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಅಲೇಮಾಡ ಮಂಜುನಾಥ್, ಪುಚ್ಚಿಮಾಡ ರಾಯ್ ಮಾದಪ್ಪ, ಗೋಣಿಕೊಪ್ಪ ಪೊಲೀಸ್ ವೃತ್ತ ನಿರೀಕ್ಷಕ ಎಂ.ಗೋವಿಂದ ರಾಜ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.11 NEWS DESK  : ಮಡಿಕೇರಿ ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ…

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.