Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚಿಕ್ಕ ಅಳುವಾರದಲ್ಲಿ ರಕ್ತದಾನಿಗಳ ದಿನಾಚರಣೆ : ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ : ಡಾ.ಸೀನಪ್ಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚಿಕ್ಕ ಅಳುವಾರದಲ್ಲಿ ರಕ್ತದಾನಿಗಳ ದಿನಾಚರಣೆ : ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ : ಡಾ.ಸೀನಪ್ಪ

ಜೂನ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.14 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನಾತಕೋತ್ತರ ಕೇಂದ್ರ, ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಶಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ, ಕುಶಾಲನಗರ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ವಾಣಿಜ್ಯೋದ್ಯಮಿಗಳ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು.
ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದ್ದು, ಯುವಜನತೆ ಮುಂದೆ ಬಂದು ರಕ್ತದಾನ ಮಾಡುವ ಮೂಲಕ ಮಾದರಿಯಾಗುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಕಾರ್ಲ್ ಲ್ಯಾಂಡ್‍ಸ್ಟೀನರ್ ರಕ್ತದ ಗುಂಪನ್ನು ಕಂಡುಹಿಡಿದ ವಿಜ್ಞಾನಿ. ಇವರ ಹುಟ್ಟುಹಬ್ಬದ ದಿನವನ್ನು ವಿಶ್ವ ರಕ್ತದಾನಿಗಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದರು.
ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ರಕ್ತ ವಿಧಳನಾ ಘಟಕ, ರಕ್ತನಿಧಿ ಕೇಂದ್ರದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ಎಲ್ಲರೂ ಮುಂದಾಗಿ ರಕ್ತದಾನ ಮಾಡಿ. ರಕ್ತ ಅಗತ್ಯವಿರುವವರ ಜೀವ ಉಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ರಕ್ತದ ವೆಬೆಸೈಟ್ e-raktkosh ದಲ್ಲಿ ದಾನಿಗಳು ಹಾಗೂ ರಕ್ತದಾನ ಶಿಬಿರಗಳನ್ನು ನೋಂದಣಿ ಮಾಡಬಹುದು ಎಂದು ತಿಳಿಸಿದರು.
ತೊರೆನೂರು ಗ್ರಾ.ಪಂ.ಅಧ್ಯಕ್ಷ ರೂಪ ಮಹೇಶ್ ಮಾತನಾಡಿ, ರಕ್ತದಾನ ದಿನಾಚರಣೆ ಒಂದು ಉತ್ತಮ ಕಾರ್ಯಕ್ರಮವಾಗಿದೆ. ಮುಂದಿನ ಹಂತದಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಬಗ್ಗೆ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳಾದ ಶರತ್ ಕಾಂತೆ(61 ಬಾರಿ), ಮಾರುತಿ ಪ್ರಸಾದ್(21 ಬಾರಿ), ಮಣಿಕಂಠ(13 ಬಾರಿ) ಮತ್ತು ಪ್ರತಿಷ್ಠಾ(5 ಬಾರಿ) ಇವರನ್ನು ಸನ್ಮಾನಿಸಲಾಯಿತು.
ರಕ್ತದಾನಿಗಳಾದ ಶರತ್‍ಕಾಂತ್, ಮಾರುತಿ ಪ್ರಸಾದ್, ಮಣಿಕಂಠ ಹಾಗೂ ಪ್ರತಿಷ್ಠ ಅವರು ರಕ್ತದಾನ ಮಾನವೀಯ ಸೇವೆ, ಸಮಾಜಸೇವೆ ಎಂದು ಅನುಭವ ಹಂಚಿಕೊಂಡರು. ಪ್ರಥಮ ಬಾರಿ ರಕ್ತದಾನ ಮಾಡಿದ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡರು.
ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು. ಕುಶಾಲನಗರ ರೋಟರಿ ಸಂಸ್ಥೆಯ ಉಲ್ಲಾಸ್ ಕೃಷ್ಣ, ಸ್ವಾಮಿ ವಿವೇಕಾನಂದ ಮೂವ್ ಮೆಂಟ್‍ನ ವ್ಯವಸ್ಥಾಪನ ಸಮಿತಿ ಸದಸ್ಯರಾದ ಎಂ.ಡಿ.ರಂಗಸ್ವಾಮಿ, ಕುಶಾಲನಗರ ವಾಣಿಜ್ಯೋಧ್ಯಮಿಗಳ ನಿಗಮದ ಅಧ್ಯಕ್ಷರಾದ ಅಮೃತ ರಾಜ್, ಸೋಮವಾಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ವೈದ್ಯಾಧಿಕಾರಿ ಡಾ.ಅಶೋಕ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಿಬ್ಬಂದಿಗಳು, ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎನ್.ಆನಂದ್ ಅವರು ಸ್ವಾಗತಿಸಿದರು. ಕೊಡಗು ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ನಿರೂಪಿಸಿದರು. ಸಹಾಯಕ ಗ್ರಂಥಪಾಲಕ ಕೆ.ಜೆ.ಹರೀಶ್ ವಂದಿಸಿದರು. ರಕ್ತದಾನ ಶಿಬಿರದಲ್ಲಿ 54 ಮಂದಿ ರಕ್ತದಾನ ಮಾಡಿದರು. 

Follow us Follow us
Share. WhatsApp Facebook Twitter Email Telegram Copy Link

Related Posts

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಂದೆಯ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ…

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.