Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದನೆ : ತಿರಸ್ಕೃತಗೊಂಡ 320 ಅರ್ಜಿ ಮರು ಪರಿಶೀಲನೆಗೆ ಜಿಲ್ಲಾಧಿಕಾರಿ  ಡಾ.ಬಿ.ಸಿ.ಸತೀಶ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದನೆ : ತಿರಸ್ಕೃತಗೊಂಡ 320 ಅರ್ಜಿ ಮರು ಪರಿಶೀಲನೆಗೆ ಜಿಲ್ಲಾಧಿಕಾರಿ  ಡಾ.ಬಿ.ಸಿ.ಸತೀಶ ಸೂಚನೆ*

ಜೂನ್ 15, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.15 : ನಾಗರಹೊಳೆಯ ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಗಳ ಆದಿವಾಸಿ ಜನರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಯ ಜನರು ವಾಸಕ್ಕಾಗಿ ಮಾತ್ರ ಅರಣ್ಯ ಹಕ್ಕು ಪತ್ರ ನೀಡಿದ್ದು, ವ್ಯವಸಾಯಕ್ಕೆ ಭೂಮಿ ನೀಡಿಲ್ಲ. ಆದ್ದರಿಂದ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಹಕ್ಕು ಕಾಯ್ದೆಯಡಿ ಉಳುಮೆ ಮಾಡುತ್ತಿರುವ ಕೃಷಿ ಭೂಮಿಯನ್ನು ಆದಿವಾಸಿಗಳಿಗೆ ನೀಡಬೇಕು ಎಂಬುದು ಆಗ್ರಹವಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಎರಡು ಬಾರಿ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ತಿರಸ್ಕೃತವಾಗಿರುವ ವೈಯಕ್ತಿಕ 320 ಅರ್ಜಿಗಳನ್ನು ಪುನರ್ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದರು.
ನಾಗರಹೊಳೆ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 1567 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ 1247 ಅರ್ಜಿಗಳಿಗೆ ವೈಯಕ್ತಿಕ ಅರಣ್ಯ ಹಕ್ಕು ಪತ್ರ ನೀಡಲಾಗಿದೆ. ಉಳಿದಂತೆ 320 ಅರ್ಜಿಗಳು ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಎರಡು ಬಾರಿ ತಿರಸ್ಕೃತಗೊಂಡಿದೆ. ಜೊತೆಗೆ 19 ಸಮುದಾಯ ಹಕ್ಕುಗಳ ಅರ್ಜಿಯನ್ನು ಪುನರ್ ಪರಿಶೀಲಿಸಬೇಕಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಹೊನ್ನೇಗೌಡ ಸಭೆಯ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಗರಹೊಳೆ ವ್ಯಾಪ್ತಿಯ ಆದಿವಾಸಿ ಪ್ರಮುಖರಾದ ತಿಮ್ಮ, ಅನುಸೂಚಿತ ಬುಡಕಟ್ಟು ಕಾಯ್ದೆಯಡಿ ಅರಣ್ಯ ಹಕ್ಕುಗಾಗಿ 2009 ರಿಂದ ಮನವಿ ಸಲ್ಲಿಸುತ್ತಾ ಬರಲಾಗಿದೆ. ಆದರೆ ಇದುವರೆಗೆ ಯಾವುದೇ ಸೌಲಭ್ಯಗಳು ತಲುಪಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾಗರಹೊಳೆ ವ್ಯಾಪ್ತಿಯಲ್ಲಿ ಹಲವು ದೇವಸ್ಥಾನಗಳಿವೆ. ಅಲ್ಲಿನ ಆದಿವಾಸಿಗಳು ಕಿರು ಉತ್ಪನ್ನಗಳನ್ನು ಸಂಗ್ರಹಿಸಿ ಜೀವನ ಕಟ್ಟಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ಇದಕ್ಕೂ ಅವಕಾಶ ನೀಡುತ್ತಿಲ್ಲ. ಆದ್ದರಿಂದ ನಾಗರಹೊಳೆ ವ್ಯಾಪ್ತಿಯ ಆದಿವಾಸಿಗಳ ಕೃಷಿ ಮಾಡಿಕೊಂಡಿರುವ ಭೂಮಿ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸೋಮಯ್ಯ ಮಾತನಾಡಿ, ನಾಗರಹೊಳೆ ವ್ಯಾಪ್ತಿಯಲ್ಲಿನ ಆದಿವಾಸಿಗಳ ಅನುಭವದಲ್ಲಿರುವ ಕೃಷಿ ಭೂಮಿಯನ್ನು ಅರಣ್ಯ ಇಲಾಖೆಯವರು ಕಸಿದುಕೊಂಡಿದ್ದಾರೆ. ಇದರಿಂದಾಗಿ ಉದ್ಯೋಗವಿಲ್ಲದೆ ಬದುಕುವುದು ಕಷ್ಟವಾಗಿದೆ ಎಂದರು.
ಆದಿವಾಸಿ ಮುಖಂಡರಾದ ಶಿವು ಅವರು ಆದಿವಾಸಿಗಳು ವಾಸ ಮಾಡುತ್ತಿರುವ ಬಗ್ಗೆ ಎರಡು ಸಾಕ್ಷ್ಯಾಧಾರ ಒದಗಿಸಿದರೆ ಸಾಕಾಗುತ್ತದೆ. ಆ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿದಾರರಿಗೆ ಭೂಮಿ ಒದಗಿಸಬೇಕು ಎಂದು ಮನವಿ ಮಾಡಿದರು.
`ನಾಗರಹೊಳೆ ಹುಲಿ ಯೋಜನೆಯ ನಿರ್ದೇಶಕ ಹರ್ಷಕುಮಾರ್ ಮಾತನಾಡಿ, ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಗೆ ಅಗತ್ಯ ಸಾಕ್ಷ್ಯ ಆಧಾರಗಳನ್ನು ಒದಗಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.’
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ಗ್ರಾಮ ಅರಣ್ಯ ಹಕ್ಕು ಸಮಿತಿ ಸಭೆಗೆ ಅರಣ್ಯಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿರುವವರನ್ನು ಆಹ್ವಾನಿಸಬೇಕು ಎಂದು ಸಲಹೆ ಮಾಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಮಾತನಾಡಿ, ಗ್ರಾಮ ಅರಣ್ಯ ಸಮಿತಿಯ ಸದಸ್ಯರು ಹಾಗೂ ಅರ್ಜಿದಾರರನ್ನು ಪತ್ರದ ಮೂಲಕ ಸಭಾ ಆಹ್ವಾನ ನೀಡಬೇಕು. ಈ ಸಂಬಂಧ 15 ದಿನ ಕಾಲಾವಕಾಶ ನೀಡಬೇಕು ಎಂದು ಸೂಚಿಸಿದರು.
ಈ ಸಂಬಂಧ ಒಂದು ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡು ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಅಗತ್ಯ ಸೌಲಭ್ಯ ನೀಡಬೇಕು ಎಂದು ಡಾ.ಎಸ್.ಆಕಾಶ್ ತಾಕೀತು ಮಾಡಿದರು.
ಐಟಿಡಿಪಿ ಇಲಾಖೆಯ ತಾಲ್ಲೂಕು ಅಧಿಕಾರಿ ಗುರುಶಾಂತಪ್ಪ, ಹತ್ತೂರುಕೊಲ್ಲಿ ಹಾಡಿ ವ್ಯಾಪ್ತಿಯಲ್ಲಿನ ಆದಿವಾಸಿ 44 ಕುಟುಂಬದವರ ಅರ್ಜಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಕೃಷಿ ಭೂಮಿಗಾಗಿ ಮನವಿ ಸಲ್ಲಿಸಿದ್ದಾರೆ ಎಂದರು.
`ಈ ಸಂದರ್ಭದಲ್ಲಿ ಮಾತನಾಡಿದ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡ, ಹಾಡಿ ಜನರಿಗೆ ಅರಣ್ಯ ಹಕ್ಕು ಕಾಯ್ದೆ ಬಗ್ಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಿ ಮಾಹಿತಿ ನೀಡಲಾಗುವುದು ಎಂದರು.’
ಆದಿವಾಸಿ ಜನರ ಬೇಡಿಕೆಗಳನ್ನು ಅರಣ್ಯ ಹಕ್ಕು ಕಾಯ್ದೆಯಡಿ ಈಡೇರಿಸಲು ಜಿಲ್ಲಾಡಳಿತ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಐಟಿಡಿಪಿ ಇಲಾಖೆ ಅಧಿಕಾರಿ ತಿಳಿಸಿದರು.
`ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಟ್ಟು 18 ಹಾಡಿಗಳಲ್ಲಿ 870 ಕುಟುಂಬಗಳು ವಾಸವಿದೆ. ಜೊತೆಗೆ ಇತ್ತೀಚೆಗೆ ಆನೆ ಚೌಕೂರು ವನ್ಯಜೀವಿ ವಲಯದ ಬಫರ್ ವ್ಯಾಪ್ತಿಗೆ 12 ಹಾಡಿಗಳು ಸೇರ್ಪಡೆಯಾಗಿದ್ದು, 528 ಕುಟುಂಬಗಳು ವಾಸಿಸುತ್ತಿದ್ದಾರೆ ಎಂದು ಹೊನ್ನೆಗೌಡ ಮಾಹಿತಿ ನೀಡಿದರು.’
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪಾಲ್, ಧನಂಜಯ, ಅರಣ್ಯ ಅಧಿಕಾರಿಗಳು, ಆದಿವಾಸಿ ಪ್ರಮುಖರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.