Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ*

ಜೂನ್ 18, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.18 : ಕೊಡಗಿನಲ್ಲಿ ವೈದ್ಯಕೀಯ ಕ್ಷೇತ್ರ ತೀರಾ ಹಿಂದುಳಿದಿದ್ದು, ಇದು ಆದಷ್ಟು ಶೀಘ್ರವಾಗಿ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಅನುಭವಿ ತಜ್ಞ ವೈದ್ಯರು ಒಟ್ಟಾಗಿ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದಕ್ಕೆ ಪೂರಕವಾಗಿ ತಾನು ಯಾವುದೇ ಸಹಾಯ ಬೇಕಾದರೂ ಮಾಡಲು ಸಿದ್ಧ ಎಂದು ನಿವೃತ್ತ ಲೆ.ಜ. ಡಾ. ಬಿ.ಎನ್.ಬಿ.ಎಂ. ಪ್ರಸಾದ್ ಅವರು ಭರವಸೆ ನೀಡಿದರು.
ಮಡಿಕೇರಿಯ ಪತ್ರಿಕಾಭವನದ ಸಭಾಂಗಣದಲ್ಲಿ ಭಾನುವಾರ ನಡೆದ ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನ ಜನ ಇಲ್ಲಿನ ಪರಿಸರ, ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶ ಸೇವೆಗಾಗಿ ಅಪಾರ ಸಂಖ್ಯೆಯಲ್ಲಿ ಸೈನಿಕರನ್ನು ನೀಡಿದ ಕೀರ್ತಿ ಕೊಡಗು ಜಿಲ್ಲೆಯದ್ದಾಗಿದೆ. ಕೊಡಗಿನ ಹಿರಿಮೆ ಇಲ್ಲಿಯವರಿಗೆ ತಿಳಿದಿಲ್ಲ.ಆದರೆ ಉತ್ತರ ಭಾರತದ ಜನತೆಗೆ ಕೊಡಗಿನ ಬಗ್ಗೆ ಅಪಾರವಾದ ಗೌರವವಿದೆ ಎಂದು ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರು ಕೊಡಗನ್ನು ದಕ್ಷಿಣದ ಕಾಶ್ಮೀರ ಎಂದು ಬಣ್ಣಿಸಿದ್ದರು. ಇದಕ್ಕೆ ಇಲ್ಲಿನ ಪರಿಸರ ಮುಖ್ಯ ಕಾರಣ. ಅದನ್ನು ಸಂರಕ್ಷಿಸುವ ಕಾರ್ಯವಾಗಬೇಕು ಎಂದು ಬಿ.ಎನ್.ಬಿ.ಎಂ. ಪ್ರಸಾದ್ ಕಿವಿಮಾತು ಹೇಳಿದರು.
ತಾನು ಕೊಡಗಿನ ಪತ್ರಕರ್ತರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದೇನೆ. ಕೊಡಗು ಪತ್ರಕರ್ತರ ಸಂಘ ಮತ್ತಷ್ಟು ಹಲವು ಕಾರ್ಯಕ್ರಮ ಮಾಡಬೇಕೆಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಹಿರಿಯರ ಮಾರ್ಗದರ್ಶನ ಹಾಗೂ ಪತ್ರಕರ್ತರ ಸಹಕಾರದಿಂದ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಲು ಸಾಧ್ಯವಾಗಲಿದೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ಒಂದೇ. ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ನುಡಿದರು.
ವಿದ್ಯಾವಂತರ ಅಗತ್ಯವಿದೆ: ದೇಶಕ್ಕೆ ಇಂದು ವಿದ್ಯಾವಂತ ರಾಜಕಾರಣಿಗಳ ಅವಶ್ಯಕತೆಯಿದೆ. ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವವರು ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿ ಬಂದರೆ ಉತ್ತಮ. ದೇಶಕಟ್ಟುವ ಕೆಲಸ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ. ಪತ್ರಕರ್ತರೂ ಕೂಡಾ ಮುಖ್ಯ. ನಾವೆಲ್ಲರೂ ತಂಡವಾಗಿ ಕೆಲಸ ಮಾಡಿಕೊಂಡು ಹೋಗಬೇಕು ಎಂದರು. ಈಗಾಗಲೇ ತನಗೆ ಹಲವು ಸಂಘ ಸಂಸ್ಥೆಗಳಿಂದ ಸನ್ಮಾನ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಸನ್ಮಾನ ಮಾಡುವುದು ಸರಿಯಲ್ಲ. ಐದು ವರ್ಷಗಳ ಬಳಿಕ ತಾನು ಮಾಡಿದ ಅಭಿವೃದ್ಧಿ ಕೆಲಸದ ಆಧಾರದಲ್ಲಿ ಸನ್ಮಾನ ಮಾಡಿದರೆ ಅದನ್ನು ಪ್ರೀತಿಯಿಂದ ಸ್ವೀಕರಿಸುತ್ತೇನೆ ಎಂದು ಮಂತರ್ ಗೌಡ ಇದೇ ಸಂದರ್ಭ ತಿಳಿಸಿದರು.
ರಾಜ್ಯ ಸರ್ಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ತೀತಿರ ರೋಶನ್ ಅಪ್ಪಚ್ಚು ಮಾತನಾಡಿ, ಪತ್ರಕರ್ತರು ಸಮಾಜದಲ್ಲಿ ಉತ್ತಮ ಪ್ರಭಾವ ಬೀರಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಬೇಕು. ಇಂದು ಸಮೂಹ ಮಾಧ್ಯಮ ಶಕ್ತಿಶಾಲಿಯಾಗಿದೆ. ಸಮಾಜದಲ್ಲಿನ ಒಳಿತು ಕೆಡುಕುಗಳನ್ನು ತಿಳಿಸಿಕೊಡುವ ಕರ್ತವ್ಯ ಪತ್ರಕರ್ತರದ್ದು ಎಂದು ಹೇಳಿದರು
ರೆಡ್ ಕ್ರಾಸ್‌ನ ಕೊಡಗು ಜಿಲ್ಲಾ ಸಭಾಪತಿ ಬಿ.ಕೆ. ರವೀಂದ್ರ ರೈ ಮಾತನಾಡಿ, ಪುಟ್ಟ ಜಿಲ್ಲೆಯಾದರೂ ಕೊಡಗಿನಲ್ಲಿ ಸಾಕಷ್ಟು ಸಮಸ್ಯೆಗಳಿದೆ. ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪತ್ರಕರ್ತರ ಕೊಡುಗೆ ಅಪಾರವಾಗಿದೆ. ಜಿಲ್ಲೆಯಲ್ಲಿ ಹಲವು ಸಂಘ ಸಂಸ್ಥೆಗಳಿವೆ. ಎಲ್ಲಾ ಸಮಸ್ಯೆಗಳನ್ನು ಸರ್ಕಾರದಿಂದ ಮಾತ್ರ ನಿವಾರಣೆ ಮಾಡಲು ಸಾಧ್ಯವಿಲ್ಲ. ಎಲ್ಲರೂ ಸಮಸ್ಯೆ ಪರಿಹಾರಕ್ಕೆ ಕೈಜೋಡಿಸಬೇಕಿದೆ ಎಂದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಸಂಘವೆಂದರೆ ಅದು ಕೊಡಗು ಪತ್ರಕರ್ತರ ಸಂಘ ಮಾತ್ರ. ಕಳೆದೊಂದು ವರ್ಷದಿಂದ ಸಂಘದಿಂದ ಹಲವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪತ್ರಕರ್ತರಿಗೆ ಸರ್ಕಾರದಿಂದ ಆದ್ಯತೆ ಮೇರೆ ನಿವೇಶನ ನೀಡಬೇಕಿದೆ. ಜೊತೆಗೆ ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಒದಗಿಸಬೇಕಿದೆ ಎಂದು ಹೇಳಿದರು.
ಪ್ರಶಸ್ತಿ ವಿತರಣೆ : ಕಾರ್ಯಕ್ರಮದಲ್ಲಿ ವಾರ್ಷಿಕ ಕ್ರೀಡಾ ವರದಿಗೆ ಪ್ರಶಸ್ತಿ ಭಾಜನರಾಗಿದ್ದ ಕನ್ನಡಪ್ರಭ ವರದಿಗಾರ ವಿಘ್ನೇಶ್ ಭೂತನಕಾಡು, ಗ್ರಾಮೀಣ ವರದಿ ಪ್ರಶಸ್ತಿ ಪಡೆದ ಪ್ರತಿನಿಧಿ ವರದಿಗಾರ ಸುರೇಶ್ ಬಿಳಿಗೇರಿ, ಕೃಷಿ ವರದಿಗೆ ವಿಜಯ ಕರ್ನಾಟಕ ವರದಿಗಾರ ಕವನ್ ಕಾರ್ಯಪ್ಪ, ಮಾನವೀಯ ವರದಿಗೆ ಶಕ್ತಿ ಪತ್ರಿಕೆಯ ಕೆ.ಎಸ್. ಮೂರ್ತಿ, ಟಿ.ವಿ. ವಾಹಿನಿ ವಿಭಾಗದಲ್ಲಿ ಪ್ರಶಸ್ತಿ ಪಡೆದ ಟಿವಿ ಒನ್ ಸುದ್ದಿ ವಾಹಿನಿಯ ಪ್ರಸಾದ್ ಅವರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು. ಅಲ್ಲದೆ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ಕೊಡಗು ಪತ್ರಕರ್ತರ ಸಂಘದ ಅಧಿಕೃತ ವೆಬ್‌ಸೈಟ್ ಅನ್ನು ಗಣ್ಯರು ಲೋಕಾರ್ಪಣೆ ಮಾಡಿದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಸ್ವಾಗತಿಸಿದರೆ, ಪತ್ರಕರ್ತರಾದ ಕೆ. ತಿಮ್ಮಪ್ಪ, ರಂಜಿತ್ ಕವಲಪಾರ ನಿರೂಪಿಸಿದರು. ಸಂಘದ ಸಲಹೆಗಾರರಾದ ಅನಿಲ್ ಎಚ್.ಟಿ. ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.