ಕುಶಾಲನಗರ, ಜೂ.21 : ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಮಕ್ಕಳು ಯೋಗಾಭ್ಯಾಸ ಪ್ರದರ್ಶಿಸಿದರು.
ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್.ಸುಕುಮಾರಿ, ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು.
ವಿದ್ಯಾರ್ಥಿಗಳು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ ಇತರರು ಇದ್ದರು.
ಪ್ರಾಥಮಿಕ ಶಾಲೆಯಲ್ಲಿ ಯೋಗಾಭ್ಯಾಸ : ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತುದಾರ ಡಿ.ವಿ.ಗಣೇಶ್, ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಹಾಗೂ ಶಿಕ್ಷಕರು ಇದ್ದರು.








