Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಜೂನ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.21 : ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ 2023-24ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ 3 ವರ್ಷಗಳ ಅಥವಾ ಪಿಯುಸಿ ನಂತರ 5 ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 15 ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ಮಧ್ಯದಲ್ಲಿ ತರಬೇತಿ ಬಿಟ್ಟು ಹೋದಲ್ಲಿ ಅಂತವರಿಗೆ ಪಾವತಿಸಲಾದ ಶಿಷ್ಯವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು. ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10 ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 2 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು. ಸದಸ್ಯ ಕಾರ್ಯದರ್ಶಿಯು ಅಧ್ಯಕ್ಷರ ಪೂರ್ವಾನುಮತಿ ಪಡೆದು ಅಭ್ಯರ್ಥಿಯ ಶಿಷ್ಯವೇತನವನ್ನು ದೂರು ಬಂದಲ್ಲಿ ಅಥವಾ ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ತಡೆಹಿಡಿಯಬಹುದು. ಅಧ್ಯಕ್ಷರು ಈ ಬಗ್ಗೆ ಪರಿಶೀಲಿಸಿ ಅಭ್ಯರ್ಥಿಯ ಕಡೆಯಿಂದ ಯಾವುದೇ ಲೋಪವಿಲ್ಲವೆಂದು ಕಂಡುಬಂದಲ್ಲಿ ತಡೆಹಿಡಿದಿರುವ ಶಿಷ್ಯವೇತನವನ್ನು ಮರುಪಾವತಿಸಲು ಆದೇಶಿಸಬಹುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ ಮೂಲಕ www.tw.kar.nic.in ನಲ್ಲಿ ಜುಲೈ, 24 ರವರೆಗೆ ವರೆಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ 08272-200500. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115. ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವಿರಾಜಪೇಟೆ 08274-261261 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಅ.24 NEWS DESK : ಮಳೆಯಿಂದಾಗಿ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ತಾಲೂಕಿನ ಚಿಕ್ಕ ಅಳುವಾರ ಗ್ರಾಮದ…

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಬಂಧ ಸ್ಪರ್ಧೆ: ಜಗದೀಶ್ ಟಿ.ಎ., ಜೆಸಿಂತಾ ಪಿ.ಜೆ. ಪ್ರಥಮ

ಅಕ್ಟೋಬರ್ 24, 2026

ಬೆಳಕುಮಾನಿ ಶಾಲೆಯಲ್ಲಿ ‘ಯೋಗಸಿಂಚನಾ’ ಯೋಜನೆಗೆ ಚಾಲನೆ

ಅಕ್ಟೋಬರ್ 24, 2026

ಬಾಳೆಯಡ ಕಿಶನ್ ಪೂವಯ್ಯ ಅವರಿಗೆ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ

ಅಕ್ಟೋಬರ್ 24, 2026

ಎಸ್‍ಜಿಎಫ್‍ಐ ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್‍ಶಿಪ್‍ಗೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿರು ಆಯ್ಕೆ

ಅಕ್ಟೋಬರ್ 24, 2026

ನವೆಂಬರ್‌ನಲ್ಲಿ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿಗಳ ಮಹಾಸಭೆ, ಸಂತೋಷ ಕೂಟ

ಅಕ್ಟೋಬರ್ 24, 2026

ಮಡಿಕೇರಿ ದಸರಾ ವೇದಿಕೆಯಲ್ಲಿ ಗಮನ ಸೆಳೆದ ಸಂಸ್ಕೃತಿ ಸಿರಿ ಟ್ರಸ್ಟ್‌ನ ‘ಮಣಿಕಂಠೋದಯ’ ನೃತ್ಯರೂಪಕ

ಅಕ್ಟೋಬರ್ 24, 2026

ಮಾದಾಪುರದಲ್ಲಿ ಅದ್ದೂರಿಯಾಗಿ 6ನೇ ವರ್ಷದ ಸಾರ್ವಜನಿಕ ಆಯುಧ ಪೂಜೆ ಆಚರಣೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.