Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮ*

ಜೂನ್ 26, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 : ಸತ್ಯ ನಿಷ್ಟೂರ ವರದಿಗಾರಿಕೆಯ ಮೂಲಕ, ಸಮಾಜದ ಯಾವುದೇ ವಿಷಯಗಳನ್ನು ತಮ್ಮದೇ ಆದ ಹೊಸ ಆಯಾಮದಿಂದ ನೋಡುವ ಪರಿಕಲ್ಪನೆಯನ್ನು ಮೂಡಿಸಿದ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕರಾಗಿದ್ದ ದಿವಂಗತ ಮನು ಶೆಣೈರವರ ನೆನಪುಗಳನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ನಡೆಯಬೇಕೆನ್ನುವ ಆಶಯವನ್ನು ಗಣ್ಯರು ವ್ಯಕ್ತಪಡಿಸಿದರು.
ಕೊಡಗು ಪತ್ರಿಕಾ ಭವನ ಟ್ರಸ್ಟ್, ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಸಮಾಚಾರ ಅಭಿಮಾನಿ ಬಳಗ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ‘ದಿ.ಬಿ.ಎನ್.ಮನು ಶೆಣೈ ನೆನಪು’ ಕಾರ್ಯಕ್ರಮವನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಉದ್ಘಾಟಿಸಿದರು.
ಈ ಸಂದರ್ಭ ಮೌನಾಚರಣೆ ಮತ್ತು ಮನು ಶೆಣೈ ಅವರ ಭಾವ ಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.
ನಂತರ ಮಾತನಾಡಿದ ಟಿ.ಪಿ.ರಮೇಶ್, ವರ್ಷದ ಹಿಂದೆಯಷ್ಟೆ ನಮ್ಮನ್ನು ಅಗಲಿದ ಮನು ಶೆಣೈ ಅವರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ಕಾರ್ಯ ಅಗತ್ಯವಾಗಿ ನಡೆಯಬೇಕಾಗಿದೆ. ಸುದೀರ್ಘ ಇಪ್ಪತ್ತಾರು ವರ್ಷ ಕೊಡಗು ಸಮಾಚಾರ ವಾರ ಪತ್ರಿಕೆಯನ್ನು ಅತ್ಯಂತ ಶ್ರದ್ಧೆಯಿಂದ ಮನು ಶೆಣೈ ಅವರು ಹೊರ ತಂದಿದ್ದಾರೆ. ಅವರು ತಮ್ಮ ಪತ್ರಿಕಾ ವೃತ್ತಿ ಧರ್ಮವನ್ನು ಅತ್ಯಂತ ಗಟ್ಟಿಯಾಗಿ ಪ್ರತಿಪಾದಿಸಿಕೊಂಡು ಬಂದವರಾಗಿದ್ದು, ಭ್ರಷ್ಟ ಅಧಿಕಾರಿಗಳು, ಕೆಟ್ಟ ಆಡಳಿತಗಾರರಿಗೆ ಅವರ ಬರಹ ದುಸ್ವಪ್ನವಾಗಿತ್ತು. ಅವರ ಲೇಖನಿಯಿಂದ ಮೂಡಿದ ಕಸ್ತೂರಿ ರಂಗನ್ ವರದಿಯ ಸಾಧ್ಯಾಸಾಧ್ಯತೆಗಳು, ಕಾಡಾನೆ-ಮಾನವ ಸಂಘರ್ಷ ಸೇರಿದಂತೆ ಹಲ ವರದಿಗಳು ನಿರ್ಭೀತಿಯಿಂದ ಕೂಡಿತ್ತೆಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ತಾವು ನಂಬಿದ ಸಿದ್ಧಾಂತಕ್ಕೆ ಬದ್ಧವಾಗಿ ಮನು ಶೆಣೈ ಅವರು ಯಾವುದೇ ಟೀಕೆಗಳಿಗೆ ಜಗ್ಗದೆ ನಿಷ್ಟೂರವಾಗಿ, ನಿರ್ಭೀತಿಯಿಂದ ಪತ್ರಿಕೆಯನ್ನು ನಡೆಸಿದ ಚೇತನ. ಅವರ ಚಿಂತನೆಗಳು, ಆದರ್ಶಗಳು ಯುವ ಪೀಳಿಗೆಗೆ ಅತ್ಯವಶ್ಯಕ. ಈ ಹಿನ್ನೆಲೆ ಕೊಡಗು ಪತ್ರಕರ್ತರ ಸಂಘದಿಂದ ಬಿ.ಎನ್.ಮನುಶೆಣೈ ಅವರ ಹೆಸರಿನ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದರು.
ಕೊಡಗು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅವರ ಒಡನಾಟವನ್ನು ಮೆಲುಕು ಹಾಕಿ, ಅವರ ನೆನಪು ನಮ್ಮೆಲ್ಲರ ಮನಸಿನಲ್ಲಿ ಸದಾಹಸಿರಾಗಿದೆಯೆಂದು ತಿಳಿಸಿದರು.
ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಟ್ರಸ್ಟಿ ಅನಿಲ್ ಎಚ್.ಟಿ. ಮಾತನಾಡಿ, ಅಲೆಯ ವಿರುದ್ಧವಾಗಿ ಈಜು ಸುಲಭ ಸಾಧ್ಯವಲ್ಲ. ಹಲ ವಿಚಾರಗಳಲ್ಲಿ ತಮ್ಮ ಪತ್ರಿಕಾ ಕ್ಷೇತ್ರದ ನಿಲುವಿಗೆ ಅನುಗುಣವಾಗಿ ಮನು ಶೆಣೈ ಅವರು ಅಲೆಯ ವಿರುದ್ಧವಾಗಿ ಪತ್ರಿಕೆಯನ್ನು ಹೊರ ತರುವ ಮೂಲಕ ರಾಜಿ ಇಲ್ಲದೆ ಪತ್ರಿಕೋದ್ಯಮ ಮಾಡಿದವರು. ಅವರು ಪ್ರತಿಯೊಂದು ವಿಚಾರವನ್ನು ದಾಖಲೆಗಳ ಸಹಿತ ಮುಂದಿಡುತ್ತಿದ್ದ ಪತ್ರಕರ್ತ. ಇಂತಹ ಮನು ಶೆಣೈ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ಯೋಜನೆ ರೂಪಿಸಬೇಕಾಗಿದೆ ಎಂದರು.
ಹಿರಿಯ ಪತ್ರಕರ್ತ ಶ್ರೀಧರ ನೆಲ್ಲಿತ್ತಾಯ ಅವರು, ಮನು ಶೆಣೈ ಅವರು ಸಮಾಜದ ಅಂಕು ಡೊಂಕುಗಳನ್ನು ನಿಷ್ಟೂರವಾಗಿ ತಮ್ಮ ಪತ್ರಕೆಯ ಮೂಲಕ ತೆರೆದಿಟ್ಟ ಧೀಮಂತ ಪತ್ರಕರ್ತರೆಂದು ಅಭಿಪ್ರಾಯಿಸಿದರು.
ಸಮಾಜ ಸೇವಕ ವಿ.ಪಿ.ಶಶಿಧರ್ ಮಾತನಾಡಿ, ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಎಗ್ಗಿಲ್ಲದೆ, ಅಂಜಿಕೆ ಇಲ್ಲದೆ ಬರೆದ ಪತ್ರಕರ್ತ ಮನು ಶೆಣೈ ಅವರಾಗಿದ್ದಾರೆ. ಅವರ ಹೆಸರನ್ನು ಶಾಶ್ವತವಾಗಿಸುವ ಕಾರ್ಯವಾಗಬೇಕೆಂದು ತಿಳಿಸಿದರು. ವಕೀಲ ಕೆ.ಆರ್. ವಿದ್ಯಾಧರ್, ಮನು ಶೆಣೈ ಅವರು ನಡೆಸಿಕೊಂಡು ಬಂದ ‘ಕೊಡಗು ಸಮಾಚಾರ’ ಪತ್ರಿಕೆಯನ್ನು ಅವರ ವೈಚಾರಿಕ ನಿಲುವು ಚಿಂತನೆಗಳಂತೆ ಹೊರತರಲು ಆಸಕ್ತಿ ಇರುವವರು ಮುಂದೆ ಬರಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ನಿವೃತ್ತ ಶಿಕ್ಷಕ ಅಬ್ದುಲ್ ಲತೀಫ್ ಅವರು ಮನು ಶೆಣೈ ಅವರ ಒಡನಾಟವನ್ನು ಸ್ಮರಿಸಿಕೊಂಡರಲ್ಲದೆ, ವಿರಾಜಪೇಟೆಯಲ್ಲಿ ಅವರ ನೆನಪಿನ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್, ತಮ್ಮ ವೃತ್ತಿ ಜೀವನದ ಉದ್ದಕ್ಕೂ ಯಾವುದೇ ಆಮಿಷಗಳಿಗೆ ಒಳಗಾಗದೆ ಮನು ಶೆಣೈ ಅವರು ಪತ್ರಿಕೆಯನ್ನು ಹೊರ ತಂದಿದ್ದಾರೆ. ಅವರ ಹೆಸರಿನಲ್ಲಿ ಜಿಲ್ಲಾ ಕಸಾಪದಲ್ಲಿ ದತ್ತಿಯೊಂದನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ದಿ.ಮನುಶೈಣ್ಯ ಅವರ ಪುತ್ರ ಕಾರ್ತಿಕ್ ಶೆಣೈ ಮತ್ತು ಮಗಳು ನಮಿತಾ ಶೆಣೈ ಅವರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.
ಡಿ.ಹೆಚ್. ರಜತ್ ರಾಜ್ ಪ್ರಾರ್ಥಿಸಿ, ಕೊಡಗು ಪತ್ರಿಕಾ ಭವನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಸ್ವಾಗತಿಸಿದರು. ಟ್ರಸ್ಟ್‍ನ ಖಜಾಂಚಿ ಕೆ.ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿ, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.