Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದುಶ್ಚಟ ಮುಕ್ತರಾಗಿ ಉತ್ತಮ ನಾಗರೀಕರಾಗಿ : ವಿದ್ಯಾರ್ಥಿಗಳಿಗೆ ಎಸ್‍ಪಿ ಕೆ.ರಾಮರಾಜನ್ ಕಿವಿಮಾತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದುಶ್ಚಟ ಮುಕ್ತರಾಗಿ ಉತ್ತಮ ನಾಗರೀಕರಾಗಿ : ವಿದ್ಯಾರ್ಥಿಗಳಿಗೆ ಎಸ್‍ಪಿ ಕೆ.ರಾಮರಾಜನ್ ಕಿವಿಮಾತು*

ಜೂನ್ 26, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 : ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ `ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸ್ನೇಹಿತರ ಒತ್ತಾಯ, ಗೆಳೆಯರ ಗುಂಪಿನಲ್ಲಿ ಒಂದಾಗಬೇಕು ಎಂಬ ಭಾವನೆ, ಮನೆಯ ವಾತಾವರಣ, ಹೀಗೆ ಅನೇಕ ಕಾರಣಗಳಿಗಾಗಿ ಯುವ ಜನತೆ ಮಾದಕ ವಸ್ತುಗಳ ದಾಸರಾಗುತ್ತಾರೆ ಎಂದು ಹೇಳಿದರು.
ವಿದ್ಯಾರ್ಥಿಗಳ ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು. ಮಾನವನ ಜೀವನ ಅತ್ಯಂತ ಅಮೂಲ್ಯ, ಆದ್ದರಿಂದ, ಜೀವನದಲ್ಲಿ ಭವಿಷ್ಯದಲ್ಲಿ ಉತ್ತಮ ಗುರಿಯನ್ನು ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗಾಬಾರದು. ಮಾದಕ ವಸ್ತುಗಳಿಗೆ ಅವಲಂಬಿತರಾದರೆ ಅದರಿಂದ ಪುನಃ ಹೊರಬರುವುದು ತುಂಬ ಕಷ್ಟ. ಹಾಗೂ ಮಾದಕ ವಸ್ತುಗಳನ್ನು ಬಳಸುವುದರಿಂದ ಅಪರಾಧಗಳನ್ನು ಮಾಡುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತು ಯುವ ಜನತೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಯೋಚಿಸಬೇಕು ಮತ್ತು ತಮ್ಮ ಭಾವನೆಗಳನ್ನು ಹತೋಟಿಯಲ್ಲಿಟ್ಟುಕೊಂಡರೆ ಜೀವನದಲ್ಲಿ ಇಂತಹ ದುಶ್ಚಟಗಳಿಂದ ದೂರವಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ, ಯುವಕರಲ್ಲಿ, ಮಕ್ಕಳಲ್ಲಿ, ವಯಸ್ಕರಲ್ಲಿ ಮಾದಕ ವಸ್ತು ಮತ್ತು ಮಾನವ ಕಳ್ಳಸಾಗಣಿಕೆ ಹೆಚ್ಚುತ್ತಿದ್ದು, ದೇಶದ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೇಲೆ ತೀವ್ರ ದುಷ್ಪಾರಿಣಾಮ ಬೀರುತ್ತಿದೆ ಇವುಗಳನ್ನು ಹತ್ತಿಕ್ಕುವುದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು, ವಿದ್ಯಾರ್ಥಿಗಳಿಗೆ ಈ ಹಂತದಲ್ಲಿ ಶಿಕ್ಷಣ, ಸಮಾಲೋಚನೆ, ಮಾರ್ಗದರ್ಶನ ಅತಿ ಅವಶ್ಯಕವಾಗಿದೆ. ಆದ್ದರಿಂದ ಶಿಕ್ಷಕರೊಂದಿಗೆ ಹಾಗೂ ಪೋಷಕರೊಂದಿಗೆ ಸಮಾಲೋಚಿಸಿ ಇದರ ಬಗ್ಗೆ ಹೆಚ್ಚು ಒತ್ತು ನೀಡಬೇಕು. ತಮ್ಮ ಸಹಪಾಠಿಗಳು ಮಾದಕ ವಸ್ತುಗಳ ವ್ಯಸನಿಗಳಾಗಿದ್ದರೆ ಶಾಲಾ ಮುಖ್ಯಸ್ಥರು ಹಾಗೂ ಪೋಷಕರಿಗೆ ತಿಳಿಸಬೇಕು. ಇಂತಹ ಮಾದಕ ವಸ್ತುಗಳ ನಿರ್ಮೂಲನೆಗಾಗಿ ಕಾನೂನ ಸೇವಾ ಪ್ರಾಧಿಕಾರ ವಿವಿಧ ಇಲಾಖೆಗಳ ಸಹಯೋಗದಿಂದ ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಹೀಗೆ ನಾನಾ ಹಂತಗಳಲ್ಲಿ ಮಾದಕ ವಸ್ತುಗಳ ನಿರ್ಮೂಲನೆಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.
2015ರಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ `ಮಾದಕ ಔಷಧಿಗಳ ದುರ್ಬಳಕೆಗೆ ಬಲಿಯಾದವರಿಗೆ ಮತ್ತು ಮಾದಕ ವಸ್ತು ವಿಪತ್ತಿನ ನಿರ್ಮೂಲನೆಗೆ ಕಾನೂನು ಅರಿವು’ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಮಂಪರು ಔಷಧಿಗಳ ಮತ್ತು ಮಾದಕ ವಸ್ತುಗಳ ಕುರಿತು ಇರುವ ಕಾನೂನು ಉಪಬಂಧಗಳ, ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ, ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ 15 ಸದಸ್ಯರನ್ನು ಒಳಗೊಂಡ ವಿಶೇಷ ಕಾರ್ಯಪಡೆ (Special Task Force) ರಚನೆ ಮಾಡಲಾಗಿದ್ದು, ಈ ತಂಡವು ಜಿಲ್ಲೆಯ ಮಾದಕ ವಸ್ತುಗಳಿಗೆ ಬಲಿಯಾಗುವವರನ್ನು ರಕ್ಷಿಸಿ ಅವರ ಚಿಕಿತ್ಸೆ ಹಾಗೂ ನಂತರದ ಪುನರ್ವಸತಿಗಾಗಿ ಶ್ರಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್ ಮಾತನಾಡಿ, ದೇಶದಲ್ಲಿ ಯುವಕರ ಪ್ರಮಾಣ ಹೆಚ್ಚಿದೆ, ಇಂತಹ ಮಾದಕ ವಸ್ತುಗಳ ಸೇವನೆಗೆ ತುತ್ತಾದಲ್ಲಿ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ. ಜನರು ಮಾದಕ ವಸ್ತು ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಾರೆ. ಈ ಪದಾರ್ಥಗಳನ್ನು ಬಳಸುವುದರಿಂದ ಮಾನಸಿಕ ಖಿನ್ನತೆ, ನಿದ್ರಾಹೀನತೆ ಸೇರಿದಂತೆ ಗಂಭೀರವಾದ ಮಾನಸಿಕ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಯುವಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದುಶ್ಚಟಗಳಿಂದ ದೂರವಿರುವಂತೆ ಸಲಹೆ ನೀಡಿದರು.
ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ ಮಾದಕವಸ್ತುಗಳ ಚಟಕ್ಕೆ ದಾಸರಾಗಬೇಡಿ ಎಂದರು.
ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಕುಂಠಿತಗೊಳಿಸುತ್ತದೆ. ಮಾದಕ ವಸ್ತುಗಳ ಬಳಕೆಗೆ ಇಳಿದವರು ದೈನಂದಿನ ಚಟುವಟಿಕೆಗಳಲ್ಲಿ ನಿರಾಸಕ್ತಿ, ಅನವಶ್ಯಕ ವಿವಾದಗಳನ್ನು ಸೃಷ್ಠಿಸುವುದು ಮೊದಲಾದ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗುವುದು ಕಂಡು ಬರುತ್ತದೆ. ಆದ್ದರಿಂದ ಇದರಿಂದ ದೂರವಿರಬೇಕು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಟೆಲಿ-ಮನಸ್ : ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಟೆಲಿ-ಮನಸ್ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡದಲ್ಲಿರುವವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಹಾಯವಾಣಿ ಸಂಖ್ಯೆ 14416 ಗೆ ಕರೆ ಮಾಡಿ ಸಹಾಯವನ್ನು ಪಡೆಯಬಹುದಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕೆ.ಎಂ.ಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ ಹಾಗೂ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಇತರರು ಇದ್ದರು.
ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.