Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಸಿನ್ ಗೌಡ ರಚಿತ “ಮನ ಮಾತಾದಾಗ” ಬಿಡುಗಡೆ : ಪುಸ್ತಕಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಿ : ಡಾ.ಬಿ.ಸಿ.ನವೀನ್ ಕುಮಾರ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಸಿನ್ ಗೌಡ ರಚಿತ “ಮನ ಮಾತಾದಾಗ” ಬಿಡುಗಡೆ : ಪುಸ್ತಕಗಳ ಮಹತ್ವವನ್ನು ಮಕ್ಕಳಿಗೆ ತಿಳಿಸಿ : ಡಾ.ಬಿ.ಸಿ.ನವೀನ್ ಕುಮಾರ್ ಕರೆ*

ಜೂನ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 : ಪುಸ್ತಕಗಳು ಸಂವಹನ ಶೀಲತೆ, ಸಾಮಾಜಿಕ ಕಳಕಳಿ, ಕ್ರಿಯಾಶೀಲತೆ, ಸೃಜನಶೀಲತೆ ಮತ್ತು ಬುದ್ದಿಯ ಮಟ್ಟವನ್ನು ಹೆಚ್ಚಿಸುವ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪುಸ್ತಕಗಳ ಮಹತ್ವದ ಕುರಿತು ಬಾಲ್ಯದಿಂದಲೇ ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ಇದು ಮಕ್ಕಳಿಗೆ ಮಾತ್ರವಲ್ಲ ಸಮಾಜಕ್ಕೂ ಸಹಕಾರಿಯಾಗಲಿದೆ ಎಂದು ಮಕ್ಕಳ ತಜ್ಞ ವೈದ್ಯ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್.ಪ್ರಸಿನ್ ಗೌಡ ರಚಿತ ಚೊಚ್ಚಲ ಕೃತಿ “ಮನ ಮಾತಾದಾಗ” ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡರೂ ಅಲ್ಲಿ ನಮ್ಮದೇ ಆದ ಹೆಜ್ಜೆಯನ್ನು ಮೂಡಿಸುವಂತಾಗಬೇಕು. ಇದಕ್ಕೆ ಪುಸ್ತಕಗಳು ಹೆಚ್ಚು ಸಹಕಾರಿಯಾಗಲಿದೆ. ಸಮಾಜಕ್ಕಾಗಿ ತ್ಯಾಗ ಮಾಡಿದವರನ್ನು ಸದಾ ನೆನಪಿಸುವುದು ಪುಸ್ತಕಗಳು. ಹೊರ ಜಗತ್ತಿಗೆ ಪುಸ್ತಕಗಳೇ ಕಿಟಕಿಗಳು, ಆದ್ದರಿಂದ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬೇಕು, ಉಳಿಸಬೇಕು ಎಂದರು.
ಪ್ರತಿ ವ್ಯಕ್ತಿಗೆ ಪುಸ್ತಕವೇ ಜೀವನದ ಅಂಗ, ಪುಸ್ತಕವೇ ಸ್ನೇಹಿತನಿದ್ದಂತೆ, ಪ್ರತಿ ಮನೆಯಲ್ಲಿ ಗ್ರಂಥಾಲಯ ಮೂಡಿಸುವುದು ನಾಗರೀಕ ಸಮಾಜದ ಜವಾಬ್ದಾರಿಯಾಗಬೇಕು. ಪ್ರತಿಯೊಬ್ಬರು ಜೀವನದಲ್ಲಿ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇಂದಿನ ಆಧುನಿಕತೆಯಲ್ಲಿ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ, ಕಾರ್ಯಕ್ರಮಗಳಲ್ಲಿ ಪುಸ್ತಕಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಓದುವವರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದು ನವೀನ್ ಕುಮಾರ್ ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಜಯಂತಿಗಳನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಹೊರತು ಮಹನೀಯರು ಮಾಡಿದ ಸಾಧನೆಯನ್ನು ಸ್ಫೂರ್ತಿಯಾಗಿಸುವ ಕೆಲಸ ನಡೆಯುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಪುಸ್ತಕ ಅನಾವರಣಗೊಳಿಸಿ ಮಾತನಾಡಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ಪ್ರಾಚೀನ ಶಿಕ್ಷಣದಲ್ಲಿ ಮಗುವಿಗೆ ಭಾವಕೋಶ ಹಾಗೂ ಬುದ್ದಿ ಕೋಶವನ್ನು ಬೆಳೆಸುವಂತಹ ಶಿಕ್ಷಣವಿತ್ತು. ಆದರೆ ಇಂದು ಬುದ್ದಿ ಕೋಶವನ್ನು ಮಾತ್ರ ವಿಕಸನಗೊಳಿಸಿ ಭಾವಕೋಶವನ್ನು ಮರೆಯಲಾಗುತ್ತಿದೆ ಎಂದರು.
ಪುಸ್ತಕಗಳು ಬರಹಗಾರರಿಗೆ ಬದ್ಧತೆಯನ್ನು ತಂದುಕೊಡುತ್ತವೆ. ಮೊದಲ ಹಾಗೂ ಕೊನೆಯ ಪುಸ್ತಕಕ್ಕೆ ಅಂತರ ಇರಬೇಕು. ಬರವಣಿಗೆಯ ದೃಷ್ಟಿಕೋನ ಸ್ಪಷ್ಟವಾಗಿರಬೇಕು, ಪುಸ್ತಕ ಭರವಸೆ ಮೂಡಿಸುವಂತಿರಬೇಕು, ಒಳ್ಳೆಯ ದೃಷ್ಟಿಕೋನವನ್ನು ಓದುಗರಲ್ಲಿ ಮೂಡಿಸುವಂತಿರಬೇಕು, ಬರಹಗಾರ ಬರೆಯುತ್ತ ತಾನು ದೊಡ್ಡವನಾಗಬೇಕು, ಓದುಗರನ್ನು ದೊಡ್ಡವರಾಗಿಸಬೇಕು, ತಾನು ಸ್ಪಷ್ಟವಾಗಬೇಕು, ಓದುಗರನ್ನು ಸ್ಪಷ್ಟಗೊಳಿಸಬೇಕು ಎಂದು ಹೇಳಿದರು.
ಸುದೀರ್ಘ ಬದುಕಿನಲ್ಲಿ ಯಾವುದೂ ಶಾಶ್ವತವಲ್ಲ, ಈ ರೀತಿಯ ಬರವಣಿಗೆಗಳು ಪುಸ್ತಕದಲ್ಲಿ ಮೂಡಿಬಂದಿದ್ದು, ಮತ್ತಷ್ಟು ಪುಸ್ತಕಗಳು ಹೊರತರುವಂತಾಗಲಿ ಎಂದು ನಾರಾಯಣ ಶೇವಿರೆ ಆಶಿಸಿದರು.
ವಿಕ್ರಮ ಸಂಪಾದಕ ವೃಶಾಂಕ್ ಭಟ್ ಮಾತನಾಡಿ, ಇಂದಿನ ಶಿಕ್ಷಣದಿಂದ ಸ್ಪರ್ಧಾತ್ಮಕ ಭಾವನೆ ಬೆಳೆಯುತ್ತಿದೆ, ಮತ್ತೊಬ್ಬರಿಗೋಸ್ಕರ ಮತ್ತು ದೇಶಕ್ಕಾಗಿ ಬದುಕುವ ಮನೋಭಾವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದರು.
ಸಮಾಜದಲ್ಲಿ ನಡೆಯುವ ಆಗುಹೋಗುಗಳನ್ನು, ಪತ್ರಕರ್ತರು ಎದುರಿಸುವ ಸವಾಲು ಹಾಗೂ ಸದಾ ಚಟುವಟಿಕೆಯಲ್ಲಿರುವ ವ್ಯಕ್ತಿ ಏನೇನು ಆಲೋಚನೆ ಮಾಡಬಲ್ಲ ಎಂಬುವುದನ್ನು ಪುಸ್ತಕದಲ್ಲಿ ವಿವರಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿ, ಪತ್ರಕರ್ತರು ಕಾರ್ಯದ ಒತ್ತಡದ ನಡುವೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.
ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಒಂದೇ ವಿಚಾರಕ್ಕೆ ಹಲವಾರು ಆಯಾಮಗಳಿರುತ್ತವೆ. ಸಮಾಜಮುಖಿಯಾಗಿ ಯೋಚಿಸುವವರ ಸಂಖ್ಯೆ ಹೆಚ್ಚಾಗಬೇಕು. ದೇಶ, ರಾಷ್ಟ್ರೀಯತೆಯೊಂದಿಗೆ ಮನುಷ್ಯತ್ವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ, ಕೊಡಗಿನ ಪತ್ರಕರ್ತಕರ್ತರು ಪ್ರತಿಕಾಲಘಟ್ಟದಲ್ಲೂ ಸಾಹಿತ್ಯ ರಚಿಸಿಕೊಂಡು ಬಂದಿದ್ದು, ಮುಂದೆಯೂ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದರು.
ಪುಸ್ತಕ 23 ಅಧ್ಯಾಯವನ್ನು ಹೊಂದಿದ್ದು, ಪ್ರತಿ ಅಧ್ಯಾಯ ವಾಸ್ತವತೆಯಿಂದ ಕೂಡಿದೆ ಎಂದು ಹೇಳಿದರು.
“ಮನ ಮಾತದಾಗ” ಕೃತಿ ರಚನೆಕಾರ, ಕೊಡಗು ಪ್ರೆಸ್ ಕ್ಲಬ್ ನಿರ್ದೇಶಕ ಕೆ.ಆರ್.ಪ್ರಸಿನ್ ಗೌಡ ಮಾತನಾಡಿ, ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇರುವುದೋ ಅದೇ ಕ್ಷೇತ್ರದಲ್ಲಿ ಸಾಗಿದರೆ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಬಹುದು ಎಂದು ಅಭಿಪ್ರಾಯಪಟ್ಟರು.
ಪುಸ್ತಕ ಬಿಡುಗಡೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೆ.ಆರ್.ಪ್ರಸಿನ್ ಗೌಡ ರಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಪತ್ರಕರ್ತ ವಿನುಕುಶಾಲಪ್ಪ ಪ್ರಾರ್ಥಿಸಿ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು, ಪ್ರೆಸ್ ಕ್ಲಬ್ ನಿರ್ದೇಶಕ ಸುನಿಲ್ ಪೊನ್ನೆಟ್ಟಿ ಸ್ವಾಗತಿಸಿ, ಖಜಾಂಚಿ ಬೊಳ್ಳಜಿರ ಬಿ.ಅಯ್ಯಪ್ಪ ವಂದಿಸಿದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ…

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.