Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*
  • *ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*
  • *ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*
  • *ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*
  • *ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*
  • *ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*
  • *ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*
  • *ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*
  • *ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ*

ಜೂನ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 : ಮಡಿಕೇರಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಅವರು ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನಗರದಲ್ಲಿ ಶಾಸಕರನ್ನು ಭೇಟಿಯಾದ ಅವರು ಮಡಿಕೇರಿ ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.
ಶಾಶ್ವತ ಕುಡಿಯುವ ನೀರಿನ ಯೋಜನೆ ಎಂದು ಪ್ರತಿಬಿಂಬಿಸಿ ರೂಪಿಸಲಾದ ಕುಂಡಾಮೇಸ್ತ್ರಿ ಯೋಜನೆಯಿಂದ ಕೋಟ್ಯಾಂತರ ರೂ. ನಷ್ಟವಾಗಿದೆ, ಬೇಸಿಗೆ ಕಾಲದಲ್ಲಿ ನೀರಿನ ಕೊರತೆ ಎದುರಾಗಿದೆ. ಆದ್ದರಿಂದ ಈ ಯೋಜನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು.
ನಗರದಲ್ಲಿ ನಿರ್ಮಿಸಲಾಗಿರುವ ಹೈ-ಟೆಕ್ ಖಾಸಗಿ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅಭಿವೃದ್ಧಿ ಪಡಿಸಬೇಕು.
ನಗರದಲ್ಲಿರುವ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಮಾಂಸ ಮತ್ತು ಮೀನು ಮಾರುಕಟ್ಟೆಯಲ್ಲಿ ನೀರು ಸೇರಿದಂತೆ ಮೂಲಭೂತ ಸೌಲಭ್ಯವಿಲ್ಲದೆ ವ್ಯಾಪಾರಿಗಳು ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ. ಅಶುಚಿತ್ವದ ವಾತಾವರಣವಿದ್ದು, ಇದೇ ಪ್ರದೇಶದಲ್ಲಿ ಮೀನು, ಮಾಂಸ, ತರಕಾರಿ ವ್ಯಾಪಾರ ಮಾಡಿದರೆ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡಿದಂತ್ತಾಗುತ್ತದೆ. ಆದ್ದರಿಂದ ಮಾರುಕಟ್ಟೆಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ವೈಜ್ಞಾನಿಕ ರೂಪದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ದಿನದಿಂದ ದಿನಕ್ಕೆ ವಾಹನದಟ್ಟಣೆ ಹೆಚ್ಚಾಗುತ್ತಿದ್ದು, ಸ್ಥಳೀಯರು ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಈ ಭಾಗದಲ್ಲಿ ಮೇಲು ಸೇತುವೆ ನಿರ್ಮಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.
ಕಲಾ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಮಡಿಕೇರಿ ನಗರದಲ್ಲಿ ಸುಸಜ್ಜಿತ ಕಲಾಮಂದಿರವನ್ನು ನಿರ್ಮಿಸಬೇಕು. ನಗರಸಭಾ ಕಚೇರಿಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ ವೈಜ್ಞಾನಿಕ ರೂಪದಲ್ಲಿ ಕಸ ವಿಲೇವಾರಿಗೆ ಯೋಜನೆ ರೂಪಿಸಬೇಕು.
ನಗರದಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ನಿವೇಶನ ಮಂಜೂರು ಮಾಡಿಸಿ ಸ್ವಂತ ಕಟ್ಟಡ ನಿರ್ಮಿಸಿ ಕೊಡಬೇಕು ಎಂದು ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಮನವಿ ಮಾಡಿದರು.
ಅಲ್ಲದೆ 10 ಹೆಚ್.ಪಿ ಸಾಮಥ್ರ್ಯದ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಬೇಕೆನ್ನುವ ಸರ್ಕಾರದ ಆದೇಶವಿದ್ದರೂ ಕೊಡಗು ಜಿಲ್ಲೆಯ ಯಾವುದೇ ಭಾಗದಲ್ಲಿ ಉಚಿತ ವಿದ್ಯುತ್ ನೀಡುತ್ತಿಲ್ಲ. ಆದ್ದರಿಂದ ರೈತರು ಹಾಗೂ ಬೆಳೆಗಾರರ ಹಿತದೃಷ್ಟಿಯಿದ ಕೃಷಿ ಕಾರ್ಯಕ್ಕೆ ಉಚಿತ ವಿದ್ಯುತ್ ನೀಡಲು ಮತ್ತೊಮ್ಮೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಶಾಸಕರ ಬಳಿ ಒತ್ತಾಯಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೋಳೂರುಶೆಟ್ಟಳ್ಳಿ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಶೇ.100 ಫಲಿತಾಂಶ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*

ಏಪ್ರಿಲ್ 25, 2026

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ಗೌರವ ಕಾರ್ಯದರ್ಶಿಯಾಗಿ ರಂಜಿತ್ ಕವಲಪಾರ ಆಯ್ಕೆ*

ಏಪ್ರಿಲ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.25 NEWS DESK : ಕರ್ನಾಟಕ ಸರಕಾರದ ಪುಸ್ತಕ ಅಭಿವೃದ್ಧಿ ಪ್ರಾಧಿಕಾರದಿಂದ ರಚಿಸಲ್ಪಟ್ಟಿರುವ ಕೊಡಗು ಜಿಲ್ಲಾ ಜಾಗೃತಿ ಸಮಿತಿಯ…

*ಎಸ್‍ಎಸ್‍ಎಲ್‍ಸಿಯಲ್ಲಿ ವಿ.ಯು.ಮಿಸ್ಬಾಹ್ ಸಾಧನೆ*

ಏಪ್ರಿಲ್ 25, 2026

*ತರ್ಮೆಮೊಟ್ಟೆ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ನೇಮೋತ್ಸವ*

ಏಪ್ರಿಲ್ 25, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ : ಕಾನೂನು ಸಲಹೆಗಾರರಾಗಿ ರೋಷನ್ ಹೆಚ್.ಸಿ ಆಯ್ಕೆ*

ಏಪ್ರಿಲ್ 25, 2026

*ವಿಮಾನ ನಿಲ್ದಾಣ ಅಭಿವೃದ್ಧಿ ಪರಿಶೀಲನಾ ಸಭೆ : ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕಾರ್ಯ ತ್ವರಿತಗೊಳಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ*

ಏಪ್ರಿಲ್ 25, 2026

*ಚೀಯಕಪೂವಂಡ ಕಪ್ ಗೆ 24 ತಂಡಗಳ ಸೆಣಸಾಟ : ಏ.26 ರಂದು ಸಮಾರೋಪ*

ಏಪ್ರಿಲ್ 25, 2026

*ಕಾಡುಪ್ರಾಣಿಗಳ ಹಾವಳಿ ಶಾಶ್ವತ ನಿಯಂತ್ರಣಕ್ಕೆ ಕಾವೇರಿ ಸೇವಾ ಸಂಘ ಆಗ್ರಹ*

ಏಪ್ರಿಲ್ 25, 2026

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.