Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಗತಿ ಪರಿಶೀಲನಾ ಸಭೆ : ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಮುಂದಾಗಿ : ಸಚಿವ ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಗತಿ ಪರಿಶೀಲನಾ ಸಭೆ : ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಮುಂದಾಗಿ : ಸಚಿವ ಭೋಸರಾಜು ಸೂಚನೆ*

ಜೂನ್ 27, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.27 : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹಾಗೂ ಹುಲಿ ದಾಳಿಯಿಂದ ಜಿಲ್ಲೆಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ವನ್ಯ ಪ್ರಾಣಿಗಳ ಹಾವಳಿ ತಡೆಯುವಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಸಂಬಂಧ ವಿಷಯ ಪ್ರಸ್ತಾಪಿಸಿದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಇರುವ ಕಡೆಗಳಲ್ಲಿ ಬ್ಯಾರಿಕೇಡ್, ತಂತಿಬೇಲಿ, ಟ್ರಂಚ್ ನಿರ್ಮಾಣ ಮಾಡಬೇಕು. ದಕ್ಷಿಣ ಕೊಡಗಿನ ಭಾಗದಲ್ಲಿ ಆಗಾಗ ಹುಲಿ ದಾಳಿ ನಡೆಯುತ್ತಿದ್ದು, ಇದರಿಂದ ಜನ ಜಾನುವಾರುಗಳಿಗೆ ತುಂಬಾ ತೊಂದರೆಯಾಗಿದೆ ಎಂದು ಹೇಳಿದರು.
ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಪರಿಸ್ಥಿತಿ ಸುಧಾರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ಕೊಡಗು ಜಿಲ್ಲೆಯ ತೋಟಗಳಲ್ಲಿ 200 ರಿಂದ 250 ಕಾಡಾನೆಗಳು ವಾಸಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಕಾಡಾನೆ ಹಾವಳಿಯಿಂದ ಬೆಳೆ ಹಾನಿಯಾದಲ್ಲಿ ಬೆಳೆ ಹಾನಿ ಪರಿಹಾರ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಮಾತನಾಡಿ, ಶೇ.80 ರಷ್ಟು ಕಾಡಾನೆಗಳು ಕಾಫಿ ತೋಟಗಳಲ್ಲಿ ಸುತ್ತಾಡಿಕೊಂಡಿವೆ. ಕಳೆದ 15 ವರ್ಷಗಳಿಂದ ಕಾಡಾನೆಗಳು ಸಹ ಹೆಚ್ಚಾಗಿದ್ದು, ಇದನ್ನು ನಿಯಂತ್ರಣ ಮಾಡಬೇಕು. ಜೊತೆಗೆ ಕಾಡಾನೆಗಳಿಗೆ ಆಹಾರ, ನೀರು ಸಿಗುತ್ತಿಲ್ಲ. ಆದ್ದರಿಂದ ಬಿದಿರು ಗಿಡವನ್ನು ಹೆಚ್ಚು ನೆಡಬೇಕು ಎಂದು ಸಲಹೆ ಮಾಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕವನ್ನು 2024 ರೊಳಗೆ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನಾ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ತಪ್ಪು ಮಾಹಿತಿ ನೀಡಿದ್ದಲ್ಲಿ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.
ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೆ ಮುಂದಾಗುವಂತೆ ಸಚಿವರು ನಿರ್ದೇಶನ ನೀಡಿದರು.
ಈ ಕುರಿತು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮಾತನಾಡಿ 2024 ರ ಡಿಸೆಂಬರ್ ಒಳಗೆ ಪ್ರತೀ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕಿದೆ. ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ತಾ.ಪಂ.ಇಒಗಳೇ ಹೆಚ್ಚಿನ ಹೊಣೆಗಾರಿಕೆ ವಹಿಸಬೇಕು ಎಂದು ಸೂಚಿಸಿದರು.
ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು. ಗುಣಮಟ್ಟದ ಬಿತ್ತನೆ ಬೀಜ ಪೂರೈಸಬೇಕು. ದೂರು ಬರದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಉಂಟಾಗದಂತೆ ಕೂಡಲೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ಕಳ್ಳಿಚಂಡ ಕಾರ್ಯಪ್ಪ ಅವರು 35 ತಜ್ಞ ವೈದ್ಯರು ಬೇಕಿದೆ. ಹಾಗೆಯೇ ಅರವಳಿಕೆ ತಜ್ಞ ವೈದ್ಯರು ಬೇಕಿದೆ ಎಂದು ಅವರು ಮಾಹಿತಿ ನೀಡಿದರು.
ತಜ್ಞ ವೈದ್ಯರ ಭರ್ತಿಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಗಮನಹರಿಸಬೇಕು. ಆ ನಿಟ್ಟಿನಲ್ಲಿ ವಿಶೇಷ ಗಮನಹರಿಸುವಂತೆ ಸಚಿವರು ಸೂಚಿಸಿದರು.
ಶಾಸಕ ಮಂತರ್ ಗೌಡ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವಲ್ಲಿ ಮುಂದಾಗಬೇಕು. ಶಾಲಾ ದಾಖಲಾತಿ ಆಂದೋಲನ, ಸೇತುಬಂಧ ಕಾರ್ಯಕ್ರಮ, ನಲಿಕಲಿ, ಬಿಸಿಯೂಟ, ಸಮವಸ್ತ್ರ ಹೀಗೆ ಹಲವು ಯೋಜನೆಗಳನ್ನು ಸರ್ಕಾರ ನೀಡುತ್ತಿದ್ದು, ಯೋಜನೆಗಳನ್ನು ಸದ್ಭಳಕೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಗಳಾಗಿ ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಕಳೆದ ಮಾರ್ಚ್‍ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆ ಶೇ.93.17 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 9 ನೇ ಸ್ಥಾನ ಗಳಿಸಿದೆ ಎಂದು ತಿಳಿಸಿದರು.
ಕುಶಾಲನಗರ ನ್ಯಾಯಾಲಯ ಕಟ್ಟಡ, ಬಾಣಾವಾರ-ಸೋಮವಾರಪೇಟೆ ರಸ್ತೆ ಕಾಮಗಾರಿ ಬಗ್ಗೆ ಶಾಸಕರಾದ ಮಂತರ್‍ಗೌಡ ಅವರು ಮಾಹಿತಿ ಪಡೆದರು.
ಭಾಗಮಂಡಲ-ಕರಿಕೆ ರಸ್ತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಭಾಗಮಂಡಲ-ಕರಿಕೆ ರಸ್ತೆ ಸುಧಾರಿಸಬೇಕಿದೆ ಎಂದು ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದೇಗೌಡ ಅವರು ಭಾಗಮಂಡಲ-ಕರಿಕೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಭಾಗಮಂಡಲ ಮೇಲುಸೇತುವೆ ಬಗ್ಗೆ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಭಾಗಮಂಡಲ ಮೇಲು ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸೇತುವೆ ಸಾರ್ವಜನಿಕರ ಉಪಯೋಗಕ್ಕೆ ಬರಬೇಕು. ಮೀನ ಮೇಷ ಎನಿಸಬಾರದು ಎಂದು ಎಂಜಿನಿಯರ್‍ಗೆ ಸೂಚಿಸಿದರು.
ಜಿಲ್ಲೆಯಲ್ಲಿನ ಬಾಕಿ ಇರುವ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಚಿವರು ಸೂಚಿಸಿದರು. ಜಿಲ್ಲೆಯ 250 ಹಾಡಿಗಳಿದ್ದು, ಇದರಲ್ಲಿ ಶೇ.75 ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ 161 ಹಾಡಿಗಳಿದ್ದು, ನಿಯಮಾನುಸಾರ ಅರಣ್ಯ ಹಕ್ಕುಪತ್ರ ನಿಡಲಾಗಿದೆ ಎಂದು ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಅವರು ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಮಾತನಾಡಿ, ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಲಾಗಿದೆ. ಆ ನಿಟ್ಟಿನಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆಗೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಾಗರಹೊಳೆ ಹುಲಿ ಯೋಜನೆ ನಿರ್ದೇಶಕರಾದ ಹರ್ಷಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ತಾ.ಪಂ.ಇಒಗಳಾದ ಶೇಖರ್, ಜಯಣ್ಣ, ಅಪ್ಪಣ್ಣ ಅವರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ…

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.