Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ : ಸಚಿವ ಭೋಸರಾಜು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ : ಸಚಿವ ಭೋಸರಾಜು

ಜೂನ್ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.27 : ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರನ್ನು ಇಡೀ ವಿಶ್ವದಲ್ಲೇ ಮಾದರಿ ನಗರವಾಗಿ ನಿರ್ಮಿಸಿದರು ಎಂದು ನುಡಿದರು.
ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನೀಡಿದ್ದಾರೆ. ಕೆಂಪೇಗೌಡರ ಆಡಳಿತ ಮತ್ತು ದೂರದೃಷ್ಟಿಯ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ನುಡಿದರು.
`ಬಜೆಟ್ ಅಧಿವೇಶನ ನಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಲಾಗುವುದು ಎಂದು ಸಚಿವರಾದ ಎನ್.ಎಸ್.ಭೋಸರಾಜು ಇದೇ ಸಂದರ್ಭದಲ್ಲಿ ತಿಳಿಸಿದರು.’
ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ಕನ್ನಡ ನಾಡಿಗೆ ಅದರಲ್ಲೂ ಬೆಂಗಳೂರಿಗೆ ಕೆಂಪೇಗೌಡ ಅವರು ಮಾದರಿ ಆಡಳಿತ ನೀಡಿದ್ದಾರೆ. ಕುಶಾಲನಗರದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಜಾಗ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಮಾತನಾಡಿ, ಆದರ್ಶ ಆಡಳಿತಗಾರ ಕೆಂಪೇಗೌಡರ ಮಾದರಿ ಆಡಳಿತ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಇಡೀ ಭಾರತ ದೇಶದಲ್ಲಿಯೇ ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡಲು ಶ್ರಮಿಸಿದ್ದಾರೆ ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೆಂಪೇಗೌಡರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಅವರ ಅಧಿಕಾರ ಅವಧಿಯಲ್ಲಿನ ಕೆಲಸಗಳನ್ನು ಸದಾ ಸ್ಮರಿಸಬೇಕು. ಕೆಂಪೇಗೌಡರ ಕನಸು ನನಸು ಇಂದಿಗೂ ಪ್ರಸ್ತುತವಾಗಿದೆ ಎಂದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎನ್.ಚಂಗಪ್ಪ ಅವರು ಮಾತನಾಡಿ ಬೆಂಗಳೂರಿನ ಒಂದೊಂದು ಬಡಾವಣೆಗೂ ಒಂದೊಂದು ಹೆಸರು ಇಟ್ಟು ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರು ಶ್ರಮಿಸಿದ್ದಾರೆ. ಆದರ್ಶ ಆಡಳಿತಗಾರ ಕೆಂಪೇಗೌಡರನ್ನು ಸದಾ ಸ್ಮರಿಸಬೇಕು ಎಂದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಆರ್.ಸೋಮಣ್ಣ ಮಾತನಾಡಿ, ಒತ್ತುವರಿಯಾಗಿರುವ ಕೆರೆ ಕಟ್ಟೆಗಳು, ರಾಜ ಕಾಲುವೆಗಳನ್ನು ತೆರವುಗೊಳಿಸಬೇಕು. ಇದರಿಂದ ಸುಗಮ ಸಂಚಾರ ಹಾಗೂ ಕೆರೆ ಕಟ್ಟೆಗಳ ಉಳಿವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ವಕೀಲರಾದ ಕೆ.ಆರ್.ವಿದ್ಯಾಧರ ಮಾತನಾಡಿ, ಕೆಂಪೇಗೌಡರು ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನವರಾಗಿದ್ದರು. ಹಂಪಿಯ ವೈಭವವನ್ನು ಕಂಡು ದೂರದೃಷ್ಟಿಯಿಂದ ಬೆಂಗಳೂರನ್ನು ನಿರ್ಮಾಣ ಮಾಡಿದರು ಎಂದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಗೌಡ ಸಮಾಜದ ಮಡಿಕೇರಿ ಅಧ್ಯಕ್ಷರಾದ ಪೇರಿಯನ ಜಯಾನಂದ, ಜಿ.ಪಂ.ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಹೈಕೋರ್ಟ್ ವಕೀಲರಾದ ಎಚ್.ಎಸ್.ಚಂದ್ರಮೌಳಿ, ಒಕ್ಕಲಿಗ ಸಮಾಜದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಎ.ಆರ್.ಮುತ್ತಣ್ಣ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರು ಇದ್ದರು.
ಕೊಡಗು ಗೌಡ ಮಹಿಳಾ ಒಕ್ಕೂಟದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಶಿಕ್ಷಕರಾದ ಕುಮಾರ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 27: ಪವಿತ್ರ ತಲಕಾವೇರಿ ತೀರ್ಥೋದ್ಭವದ ಹತ್ತನೇ ದಿನವಾದ ಪತ್ತಲೋಧಿ ಪುಣ್ಯ ದಿನದ ಅಂಗವಾಗಿ ಕೊಡವ…

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.