Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*
  • *ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*
  • *ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*
  • *ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಣಿಪುರ ಘಟನೆ : ಕೊಡಗು ಜಿಲ್ಲಾ ಕ್ರೈಸ್ತ ಸಮುದಾಯದಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಣಿಪುರ ಘಟನೆ : ಕೊಡಗು ಜಿಲ್ಲಾ ಕ್ರೈಸ್ತ ಸಮುದಾಯದಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಜೂನ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.28 : ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಕ್ರೈಸ್ತ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಸಂತ ಮೈಕಲರ ದೇವಾಲಯದಲ್ಲಿ ಜಮಾಯಿಸಿದ ಕ್ರೈಸ್ತ ಬಾಂಧವರು, ಚರ್ಚ್‍ನಲ್ಲಿ ಹಿಂಸಾಚಾರ ಕೊನೆಯಾಗಲು ಕೈಗೆ ಕಪ್ಪು ಪಟ್ಟಿ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದಿಂದ ಇಂದಿರಾಗಾಂಧಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದರು. ಮೆರವಣಿಗೆಯುದ್ದಕ್ಕೂ ಮಣಿಪುರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಲ್ಲಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆಗೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಹಿಂಸಾಚಾರ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮೆರವಣಿಗೆಯಲ್ಲಿ ಶವಪೆಟ್ಟಿಗೆಯನ್ನು ಹೊತ್ತೊಯ್ಯುವ ಮೂಲಕ ದೌರ್ಜನ್ಯವನ್ನು ಖಂಡಿಸಲಾಯಿತು.
ಈ ಸಂದರ್ಭ ಮಾತನಾಡಿದ ಕ್ರೈಸ್ತ ಮುಖಂಡ ಸುನಿಲ್ ಪತ್ರಾವೊ, ಮಣಿಪುರದಲ್ಲಿ ನಿರಂತರವಾಗಿ ಕ್ರೈಸ್ತರು, ಅವರ ಪ್ರಾರ್ಥನಾ ಮಂದಿರ, ಆಸ್ತಿಪಾಸ್ತಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಅಲ್ಲಿನ ಚುನಾಯಿತ ಸರ್ಕಾರ ರಾಜ್ಯಧರ್ಮ ಪಾಲಿಸಲು ನಿಷ್ಕ್ರಿಯವಾಗಿದೆ. ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ಇಬ್ಬಾಗ ನೀತಿ ಅನುಸರಿಸಲಾಗುತ್ತಿದೆ. ಘಟನೆಯನ್ನು ಖಂಡಿಸಿ ಕೊಡಗು ಜಿಲ್ಲೆಯ ಕ್ರೈಸ್ತ ಸಮುದಾಯದಿಂದ ರಾಜಕೀಯರಹಿತ ಹೋರಾಟ ಮಾಡಲಾಗಿದೆ. ಮಾನವ ಹಕ್ಕುಗಳ ಆಯೋಗ ಮಧ್ಯೆ ಪ್ರವೇಶಿಸಿ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೊನೆಗಾಣಿಸಬೇಕೆಂದು ಆಗ್ರಹಿಸಿದರು.
ವಿರಾಜಪೇಟೆ ಧರ್ಮಕೇಂದ್ರದ ಗುರುಗಳಾದ ಫಾ.ಡಾ. ದಯಾನಂದ ಪ್ರಭು ಮಾತನಾಡಿ, ಒಂದು ಕಾಲದಲ್ಲಿ ಅಲ್ಲಿನ ಎಲ್ಲಾ ಜನಾಂಗಗಳು ಪ್ರೀತಿ ವಿಶ್ವಾಸದಿಂದ ಬಾಳುತ್ತಿದ್ದರು. ಆದರೆ, ಡಬಲ್ ಎಂಜಿನ್ ಸರ್ಕಾರ ಅಲ್ಲಿನ ಜನತೆಗೆ ಒಳ್ಳೆಯದರ ಬದಲು ಕೆಟ್ಟದನ್ನೇ ಮಾಡುತ್ತಿದೆ. ಅಭಿವೃದ್ಧಿ, ಶಾಂತಿ ಸಮಾಧಾನಕ್ಕೆ ಒತ್ತುಕೊಡಬೇಕಾದ ಸರ್ಕಾರ, ಅಸಂಖ್ಯಾತ ಕ್ರೈಸ್ತರ ಮೇಲೆ ದೌರ್ಜನ್ಯ ಮಾಡುತ್ತಿದೆ. ಈಗಾಗಲೇ 130ಕ್ಕಿಂತ ಅಧಿಕ ಮಂದಿ ಕ್ರೈಸ್ತರು ಪ್ರಾಣ ಕಳೆದುಕೊಂಡಿದ್ದಾರೆ. 250 ಚರ್ಚ್‍ಗಳನ್ನು ಕೆಡವಿ ಹಾಕಲಾಗಿದೆ. ಮನೆ ಕಟ್ಟಡಗಳಿಗೆ ನಿರಂತರವಾಗಿ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕ್ರೈಸ್ತರು ಶಾಂತಿಪ್ರಿಯರಾಗಿದ್ದು, ಯಾವುದೇ ಜನಾಂಗದ ಮೇಲೆ ದ್ವೇಷ ಸಾಧಿಸುವ ಕೆಲಸ ಮಾಡುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆ ಆಗಬೇಕು. ಎಲ್ಲಾ ಜನಾಂಗದವರ ನಡುವೆ ಮೊದಲಿದ್ದ ಶಾಂತಿ ಸಮಾಧಾನ ಮತ್ತೆ ಬರಬೇಕು. ಪ್ರಧಾನಮಂತ್ರಿ, ಕೇಂದ್ರ ಗೃಹ ಮಂತ್ರಿಗಳು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕೆಡವಿ ಹಾಕಿರುವ ದೇವಾಲಯವನ್ನು ಮರುನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಮಡಿಕೇರಿ ಸಮತ ಮೈಕಲರ ದೇವಾಲಯದ ಧರ್ಮಗುರು ಫಾ. ಜಾರ್ಜ್ ದೀಪಕ್ ಮಾತನಾಡಿ, ಭಾರತ ವೈವಿದ್ಯತೆಯಲ್ಲಿ ಏಕತೆ ಇರುವ ದೇಶ. ಇದುವೇ ನಮ್ಮ ಸಂವಿಧಾನದ ಸೌಂದರ್ಯ. ವಿವಿಧತೆಯಲ್ಲಿ ಏಕತೆ ಇರುವ ದೇಶ ಇದಾಗಿದೆ. ದೇಶದ ಪ್ರಗತಿಗೆ ಎಲ್ಲರ ತ್ಯಾಗ, ಶ್ರಮ, ಸಹಕಾರ ಅತ್ಯಗತ್ಯ. ಒಬ್ಬರು ಮತ್ತೊಬ್ಬರನ್ನು ಪ್ರೀತಿಸಬೇಕು, ಗೌರವದಿಂದ ಕಾಣಬೇಕು. ನೊಂದವರಿಗೆ ಸಹಾಯ ಮಾಡಬೇಕು. ಆದರೆ, ಅಲ್ಪಸಂಖ್ಯಾತರ ಮೇಲೆ ಹೆಚ್ಚಿನ ದೌರ್ಜನ್ಯಗಳು ನಮ್ಮ ದೇಶದಲ್ಲೇ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನಾಂಗಗಳ ನಡುವೆ ದ್ವೇಷ ಸಾಧಿಸಿ ದೇಶದ ಪ್ರಗತಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಇಂತಹ ಹಿಂಸಾಕೃತ್ಯಗಳನ್ನು ಕೊನೆಗಾಣಿಸಬೇಕು. ನಾವೆಲ್ಲರೂ ಭಾರತೀಯರು. ಪ್ರತಿಯೊಬ್ಬನಿಗೂ ಇಲ್ಲಿ ಬದುಕಲು ಹಕ್ಕಿದೆ. ಆ ಹಕ್ಕಿಗೆ ಗೌರವ ಕೊಡುವ ಕೆಲಸವನ್ನು ಸರ್ಕಾರಗಳು ಮಾಡಬೇಕು. ನಮ್ಮಂತೆಯೇ ಇತರರು ಬದುಕಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ರಾಷ್ಟ್ರಪತಿಗಳು, ಕೇಂದ್ರ ಮಾನವ ಹಕ್ಕು ಆಯೋಗ, ಮತ್ತಿತರರಿಗೆ ಜಿಲ್ಲಾಡಳಿತ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.
ವಿವಿಧ ಧರ್ಮಕೇಂದ್ರದ ಧರ್ಮಗುರುಗಳಾದ ಫಾ. ನವೀನ್ ಕುಮಾರ್, ಫಾ.ಐಸಾಕ್ ರತ್ನಾಕರ್, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಸ್ಥಾಪಕಾಧ್ಯಕ್ಷ ಲಾರೆನ್ಸ್, ಉಪಾಧ್ಯಕ್ಷ ಜಾನ್ಸನ್ ಪಿಂಟೋ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷರು ಕೆ.ಜಿ.ಪೀಟರ್ , ಕ್ರೈಸ್ತ ಮುಖಂಡರಾದ ಬೇಬಿ ಮ್ಯಾಥ್ಯೂ, ಜೋಕಿಂ ರಾಡ್ರಿಗಸ್, ತೆರೆಸಾ ವಿಕ್ಟರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಕೊಡಗು ಜಿಲ್ಲಾ ಕ್ರೈಸ್ತ ಸೇವಾ ಸಂಘ ಮನವಿ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಕೊಡಗು ಜಿಲ್ಲೆಯ ಜನಸ್ನೇಹಿ ಶಾಸಕದ್ವಯರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ…

*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*

ಜೂನ್ 2, 2026

*ಕೊಡಗಿನ ಶಾಸಕರಿಬ್ಬರಿಗೆ ಸಚಿವ ಸ್ಥಾನ ನೀಡಲು ಆರ್.ಪಿ.ಚಂದ್ರಶೇಖರ್ ಒತ್ತಾಯ*

ಜೂನ್ 2, 2026

*ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ : ಸಂಸದ ಯದುವೀರ್*

ಜೂನ್ 2, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.