ಮಡಿಕೇರಿ ಜೂ.30 : ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜು.1 ರಂದು ಬೆಳಿಗ್ಗೆ 10:30 ಗಂಟೆಗೆ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷರಾದ ಟಿ ಕೆ ಸಾಯಿ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರರಾದ ಟಿ.ಪಿ ರಮೇಶ್ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿಘ್ನೇಶ್ ಎಂ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರುಳಿಧರ್, ಮುಖ್ಯ ಭಾಷಣಕಾರರಾಗಿ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ, ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೇಣುಗೋಪಾಲ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಜಾನ್ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತರಿಂದ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರಾದ ಜಿ.ಕೆ ಬಾಲಕೃಷ್ಣ, ಕೆ ಹೆಚ್.ಶಿವಣ್ಣ, ಕೆ. ತಿಮ್ಮಪ್ಪ, ಬಿ.ಸಿ ದಿನೇಶ್ ಸನ್ಮಾನಿಸಲಾಗುವುದು ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಬಿ ವಿನ್ಸೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







