Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಶಾಸಕ ಮಂಥರ್ ಗೌಡ ಭೇಟಿ : ಪರಿಶೀಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ಶಾಸಕ ಮಂಥರ್ ಗೌಡ ಭೇಟಿ : ಪರಿಶೀಲನೆ*

ಜೂನ್ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ,ಜೂ.30 : ಏಳು ಗ್ರಾ.ಪಂ ಗಳನ್ನು ಒಳಗೊಂಡು ಸುಮಾರು 25 ಸಾವಿರ ಜನ ಸಂಖ್ಯೆಗೆ ಆಧಾರವಾಗಿರುವ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ್‍ಗೌಡ ಭರವಸೆ ನೀಡಿದರು.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕರು ಆಸ್ಪತ್ರೆಯ ಆವರಣ ಸುತ್ತು ಪರಿಶೀಲಿಸಿ, ವೈದ್ಯಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭ ಆಸ್ಪತ್ರೆಯ ಹಿಂಭಾಗದಲ್ಲಿ ಬೆಳೆದು ನಿಂತಿರುವ ಕಾಡುಗಿಡ ಗಂಟಿಗಳನ್ನು ತೆಗೆಯುವಂತೆ ಸೂಚಿಸಿದರಲ್ಲದೆ 3 ದಿನಗಳ ಗಡವು ನೀಡಿ, ಜನರ ಆರೋಗ್ಯ ಕಾಪಾಡಬೇಕಿರುವ ಆರೋಗ್ಯ ಕೇಂದ್ರ ಹೀಗಿರುವುದು ಎಷ್ಟು ಸರಿಯೆಂದು ಅಸಾಮಾಧಾನ ವ್ಯಕ್ತಪಡಿಸಿದರು.
ಸ್ವತಃ ವೈದ್ಯರಾಗಿರುವ ಶಾಸಕ ಡಾ.ಮಂಥರ್ ಗೌಡ ಆಸ್ಪತ್ರೆಯಲ್ಲಿನ ಹೊರರೋಗಿಗಳು ಮತ್ತು ಒಳ ರೋಗಿಗಳನ್ನು ಮಾತನಾಡಿಸಿ, ಅವರಲ್ಲಿ ಜ್ವರದಿಂದ ಬಳಲುತ್ತಿರುವವರ ಸ್ಥಿತಿ ಗತಿ ಏನೆಂಬುದನ್ನು ತಿಳಿದರು.
ಇದೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳಲ್ಲಿ ಅನಾರೋಗ್ಯ ಇರುವುದರ ಕುರಿತು ಮಾಹಿತಿ ಪಡೆದು, ಆರೋಗ್ಯ ಕೇಂದ್ರ ಅಶುಚಿತ್ವ ಕುರಿತು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಯನ್ನು ದೂರವಾಣಿ ಮೂಲಕ ಕಟುವಾಗಿ ಪ್ರಶ್ನಿಸಿದರು.
ಈ ಪ್ರಾಥಮಿಕ ಆರೋಗ್ಯ ಕೇಂದವು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದು ನಿತ್ಯ ಅಪಘಾತಗಳು ಇನ್ನಿತರ ತುರ್ತು ಸಂದರ್ಭದಲ್ಲಿ ಅಂಬ್ಯುಲೆನ್ಸ್ ಸೇರಿದಂತೆ ಯಾವುದೆ ತುರ್ತು ಸೇವೆಗಳು ಲಭ್ಯವಾಗುವುದಿಲ್ಲ ಇದರಿಂದ ಈ ಭಾಗದಲ್ಲಿ ತೋಟದ ಕೂಲಿ ಕಾರ್ಮಿಕರು ಕೆಲವು ಮಧ್ಯಮ ವರ್ಗದ ಜನತೆ ತುಂಬಾ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಜಿ.ಪಂ. ಮಾಜಿಸದಸ್ಯ ಪಿ.ಎಂ.ಲತೀಫ್ ಗ್ರಾ.ಪಂ ಸದಸ್ಯರಾದ ಪಿ.ಎಫ್.ಸಬಾಸ್ಟೀನ್ ರಫೀಕ್‍ಖಾನ್ ಶಾಸಕರ ಗಮನ ಸಳೆದರು.
ಇದೇ ಸಂದರ್ಭ ಆಸ್ಪತ್ರೆಯ ಒಳಗೂ ಕೂಡ ಸೊಳ್ಳೆಗಳು ಕಂಡು ಬಂದ ಹಿನ್ನಲೆಯಲ್ಲಿ ಸೊಳ್ಳೆ ನಿರೋಧಕ ಬತ್ತಿಗಳನ್ನು ತಂದು ಉರಿಸುವಂತೆ ಶಾಸಕರು ಸೂಚಿಸಿದರು.
ಆರೋಗ್ಯ ಕೇಂದ್ರದ ಆವರಣದಲ್ಲಿ ಹಳೆಯ ಮತ್ತು ಶೀಥಿಲಾವಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರದ ಗಮನ ಸಳೆದು ಕ್ರಮಕೈಗೊಳ್ಳುವುದಾಗಿ ಡಾ. ಮಂಥರ್‍ಗೌಡ ಭರವಸೆ ನೀಡಿದರು.
ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಧೈರ್ಯ ತುಂಬಿ ಮಾತನಾಡಿದ ಶಾಸಕರು ಎಚ್ಚರಿಕೆ ಹಾಗೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಜನಮಾನಸದಲ್ಲಿ ಉಳಿಯುವಂತೆ ಕಿವಿಮಾತು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವೀಂದ್ರ, ದಾದಿ ಹಾಗೂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.
ಇದೇ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಪಿ.ಎಫ್.ಸಬಾಸ್ಟೀನ್ ಹಾಗೂ ರಫೀಕ್‍ಖಾನ್ ಅವರು ಸುಂಟಿಕೊಪ್ಪ ಪಟ್ಟಣ ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಓಣ ಮಮತ್ತು ಹಸಿಕಸ ಸೇರಿದಂತೆ ಒಟ್ಟು ಕಸವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ ಕಸ ಸಂಗ್ರಹ ವಾಹನಗಳು ಕೆಟ್ಟು ನಿಂತಿರುವುದು ಇದಕ್ಕೆ ಕಾರಣವಾಗಿದ್ದು, ಪಟ್ಟಣದ ಕೆಲವು ವಾರ್ಡ್‍ಗಳಲ್ಲಿ ಕಸವಿಲೇವಾರಿಯಾಗುತ್ತಿಲ್ಲ ಎಂಬ ಅಂಶವನ್ನು ಶಾಸಕರ ಗಮನಕ್ಕೆ ತಂದರು. ಇದಕ್ಕೆ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾದಿಕಾರಿಗಳು ಭೇಟಿಯ ಸಂದರ್ಭ ವಾಹನವನ್ನು ಸದುಪಯೋಗಕ್ಕೆ ಯೋಗ್ಯ ಇಲ್ಲವೆಂದು ದೃಢೀಕರಣ ಪತ್ರ ಒದಗಿಸಿದ್ದಲ್ಲಿ ನೂತನ ವಾಹನ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಶೀಘ್ರವಾಗಿ ಸಮಸ್ಯೆ ಬಗೆಹರಿಸಲು ಶಾಸಕರ ಗಮನಕ್ಕೆ ತಂದರು. ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.