Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ವಿದ್ಯಾರ್ಥಿಗಳಿಗೆ ಭಾರತೀಯ ವಾಯು ಸೇನೆ ಬಗ್ಗೆ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ವಿದ್ಯಾರ್ಥಿಗಳಿಗೆ ಭಾರತೀಯ ವಾಯು ಸೇನೆ ಬಗ್ಗೆ ಮಾಹಿತಿ*

ಜುಲೈ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.3 : ಭಾರತೀಯ ಸೇನೆಯ ಅವಿಭಾಜ್ಯ ಭಾಗವಾಗಿರುವ ಭಾರತೀಯ ವಾಯು ಸೇನೆಯು (ಐಎಎಫ್) ಪ್ರಪಂಚದ ಅತಿ ದೊಡ್ಡ ವಾಯು ಸೇನೆಗಳಲ್ಲಿ ಒಂದು. ವಾಯು ಸೇನೆಯ ಪ್ರಥಮ ಕರ್ತವ್ಯ ದೇಶದ ಮೈಮಾನಿಕ ವಲಯದ ರಕ್ಷಣೆಯಾಗಿದ್ದು, ಯುದ್ಧದಂತಹ ತುರ್ತು ಕಾಲಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸಲಿದೆ. ಇನ್ನು ನೈಸರ್ಗಿಕ ವಿಕೋಪವುಂಟಾದಲೂ ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಲಿದೆ ಎಂದು ಭಾರತೀಯ ವಾಯುಸೇನೆಯ ಫ್ಲೈಟ್ ಲೆಫ್ಟಿನೆಂಟ್ ಗೌರವ ಶರ್ಮ ತಿಳಿಸಿದರು.
ಭಾರತೀಯ ವಾಯುಸೇನೆಯ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೊಡಗು ಜಿಲ್ಲೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ( ಎನ್.ಎಸ್.ಎಸ್.) ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲೆಯ ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಭಾರತೀಯ ವಾಯು ಸೇನೆಯ ವತಿಯಿಂದ ವಾಯುಸೇನೆಯ ಬಸ್‍ನಲ್ಲಿ ಅಳವಡಿಸಿರುವ ಸೇನೆಯ ಕುರಿತು ಏರ್ಪಡಿಸಿದ್ದ ವಿಡಿಯೋ- ಚಿತ್ರಗಳೊಂದಿಗೆ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳು ಭಾರತೀಯ ಸೇನೆ ಬಗ್ಗೆ ಹೆಚ್ಚಿನ ಜ್ಞಾನ ಗಳಿಸಿಕೊಂಡು ಭವಿಷ್ಯದಲ್ಲಿ ಭಾರತೀಯ ಸೇನೆಗೆ ಸೇರ್ಪಡೆಗೊಳ್ಳಲು ಸಂಕಲ್ಪ ತೊಡಬೇಕು ಎಂದರು.
ದೇಶದ ಯುವ ಶಕ್ತಿಯೇ ಸೇನೆಯ ಬಲ. ಹಾಗಾಗಿ, ಯುವಕರಿಗೆ ಭಾರತೀಯ ವಾಯು ಸೇನೆಯ ಬಗ್ಗೆ ಹೆಚ್ಚಿನ ತಿಳಿವಳಿಕೆ ನೀಡುವ ಸಲುವಾಗಿ ವಾಯು ಸೇನೆಯ ಬಸ್ ಮೂಲಕ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ತೆರಳಿ ಭಾರತೀಯ ವಾಯುಸೇನೆಯ ಬಗ್ಗೆ ಜಾಗೃತಿ ಹಾಗೂ ಮಾಹಿತಿ ನೀಡಲಾಗುತ್ತಿದೆ ಎಂದು ಗೌರವ್ ಶರ್ಮ ತಿಳಿಸಿದರು.
ಭಾರತೀಯ ವಾಯು ಪಡೆಯು ಆಧುನಿಕತೆಯೊಂದಿಗೆ ತನ್ನ ತಂತ್ರಜ್ಞಾನಗಳಲ್ಲೂ ಅಭಿವೃದ್ಧಿ ತಂದಿರುವ ಭಾರತೀಯ ವಾಯು ಪಡೆ ಈಗ ವಿಶ್ವದ ಮುಂಚೂಣಿಯ ಯುದ್ಧ ವಿಮಾನಗಳ ಒಡೆಯನಾಗಿದೆ ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಎಸ್.ಸದಾಶಿವಯ್ಯ ಪಲ್ಲೇದ್ ಮಾತನಾಡಿ, ಯುವ ಜನಾಂಗದಲ್ಲಿ ವಾಯುಸೇನೆಯ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಮುಂದಿನ ದಿನಗಳಲ್ಲಿ ಸೇನೆಗೆ ಸೇರಲು ಇಂತಹ ಪ್ರದರ್ಶನ ಸಹಕಾರಿಯಾಗಲಿದೆ ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಭಾರತೀಯ ವಾಯು ಸೇನೆ ಹಾಗೂ ರಾಷ್ಟ್ರದ ಸಾರ್ವಭೌಮತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಹೆಮ್ಮೆ ಮೂಡಿಸುವ ಉದ್ದೇಶದಿಂದ ಇಂತಹ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

ಭಾರತೀಯ ವಾಯುಪಡೆಯು ವಿಶ್ವದಲ್ಲೇ ಏಳನೇ ಶಕ್ತಿಶಾಲಿ ವಾಯುಸೇನೆಯಾಗಿದೆ.
ಭಾರತೀಯ ವಾಯು ಸೇನೆಯಲ್ಲಿರುವ ವಿವಿಧ ಘಟಕಗಳು, ಸೇನೆಗೆ ಸೇರಲು ಬೇಕಾದ ಅರ್ಹತೆ ಮತ್ತು ಪರೀಕ್ಷಾ ಕ್ರಮಗಳು, ಸೇನೆಯ ತರಬೇತಿ ಮತ್ತು ಸೇವೆ , ಸೇನೆಯಿಂದ ದೇಶದ ರಕ್ಷಣೆಗೆ ಆಗುವ ಉಪಯೋಗಗಳು ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಗೌರವ್ ಶರ್ಮ ವಿವರ ಮಾಹಿತಿ ನೀಡಿದರು.
ಶಿಕ್ಷಕಿ ಬಿ.ಎಸ್.ಅನ್ಸಿಲಾ ರೇಖಾ, ವಿದ್ಯಾರ್ಥಿಗಳಿಗೆ ಸೇನೆಯ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ನಾಗೇಶ್, ಉಪ ಪ್ರಾಂಶುಪಾಲ ಪರಮೇಶ್ವರಪ್ಪ , ವಾಯುಸೇನೆಯ ವಿವಿಧ ಹಂತದ ಅಧಿಕಾರಿಗಳು, ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಪ್ರದರ್ಶನದಲ್ಲಿ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಸೇರಿದಂತೆ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಎನ್.ಎಸ್.ಎಸ್.ಘಟಕದ ವತಿಯಿಂದ ವಿದ್ಯಾರ್ಥಿಗಳು ಈ ಪ್ರದರ್ಶನದಲ್ಲಿ ಭಾಗವಹಿಸಿ ವಾಯುಸೇನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಪ್ರದರ್ಶನ : ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ವಾಯು ಸೇನಾ ಪಡೆಗಳು ಬಳಸುವ ಯುದ್ಧ ವಿಮಾನಗಳು ಹಾಗೂ ಅತ್ಯಾಧುನಿಕ ಅತ್ಯುನ್ನತ ಶಸ್ತ್ರಾಸ್ತ್ರಗಳನ್ನು ಒಳಗೊಂಡ ವಿಡಿಯೋ ಚಿತ್ರಗಳನ್ನು ಈ ಸಂದರ್ಭ ಪ್ರದರ್ಶಿಸಲಾಯಿತು.
ಭಾರತೀಯ ವಾಯುಸೇನೆಯ ಮಾಹಿತಿಯನ್ನೊಳಗೊಂಡ ಅತ್ಯಾಧುನಿಕ ಬಸ್ ವಿಶೇಷ ಪ್ರದರ್ಶನಗೊಳ್ಳುತ್ತಿರುವ ವೈವಿದ್ಯಮಯ ಸಲಕರಣೆಗಳು ನೋಡುಗರ ಗಮನ ಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.