ಮಡಿಕೇರಿ ಜು.4 : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.
ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯ 4, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ 1, ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ 2, ಕಾಂತೂರು ಮೂರ್ನಾಡುವಿನ 1 ಹಾಗೂ ಕಡಗದಾಳುವಿನ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಜು.6 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಜು.13 ರಂದು ನಾಮಪತ್ರ ಪರಿಶೀಲನೆ, ಜು.15 ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಳ್ಳಲು ಕೊನೆಯ ದಿನ. ಜು.23 ರಂದು ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಮರು ಮತದಾನವು ಜು.25 ರಂದು ನಡೆಯಲಿದೆ. ಜು.26 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.







