Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗ್ರಾಮಗಳ ಅಭಿವೃದ್ಧಿಯಲ್ಲಿ ಅಧ್ಯಕ್ಷರು-ಉಪಾಧ್ಯಕ್ಷರ ಪಾತ್ರ ಮಹತ್ವದ್ದು : ಜಿ.ಪಂ ಸಿಇಒ ಡಾ.ಎಸ್.ಆಕಾಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗ್ರಾಮಗಳ ಅಭಿವೃದ್ಧಿಯಲ್ಲಿ ಅಧ್ಯಕ್ಷರು-ಉಪಾಧ್ಯಕ್ಷರ ಪಾತ್ರ ಮಹತ್ವದ್ದು : ಜಿ.ಪಂ ಸಿಇಒ ಡಾ.ಎಸ್.ಆಕಾಶ್

ಜುಲೈ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.5 : ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಜಿಲ್ಲಾ ಪಂಚಾಯತ್ ಹಂತದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ಸೋಮವಾರಪೇಟೆ ತಾ.ಪಂ ಸಭಾಂಗಣದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿ ಮತ್ತು ಆಡಳಿತದಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಮಟ್ಟದಲ್ಲಿನ ಸಮಸ್ಯೆಗಳ ಬಗ್ಗೆ ನಿಖರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮಮಟ್ಟದ ವಾಸ್ತವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮತ್ತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಈ ಸಭೆ ಮಹತ್ವದ್ದಾಗಿದೆ ಎಂದು ಜಿ.ಪಂ.ಸಿಇಒ ಅಭಿಪ್ರಾಯಪಟ್ಟರು.
ಸಭೆಯಲ್ಲಿ ಭಾಗವಹಿಸಿದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ವಿವಿಧ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.
ಮುಖ್ಯವಾಗಿ ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಜೊತೆಗೆ ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವಂತೆ ತಿಳಿಸಿದರು.
ಕೂಡುಮಂಗಳೂರು ಗ್ರಾ.ಪಂ. ಕಟ್ಟಡಕ್ಕೆ ನಿವೇಶನ, ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ನೆಲ್ಲಿಹುದಿಕೇರಿ ಗ್ರಾ.ಪಂ.ಅಧ್ಯಕ್ಷರು ಮನವಿ ಮಾಡಿದರು. ಗ್ರಾ.ಪಂ.ಗಳಲ್ಲಿ ಸಿಬ್ಬಂದಿ ಕೊರತೆ, ವಸತಿ ರಹಿತರು ಮತ್ತು ನಿವೇಶನ ರಹಿತರ ಸಮಸ್ಯೆಗಳು, ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ಮಹಿಳಾ ಸ್ವ-ಸಹಾಯ ಸಂಘಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಎನ್‍ಆರ್‍ಎಲ್‍ಎಂ ಶೆಡ್ ನಿರ್ಮಾಣ, ಮನರೇಗಾ ಯೋಜನೆಯ ಸಾಮಾಗ್ರಿ ಬಿಲ್ಲುಗಳನ್ನು ಪ್ರತಿ ಒಂದು ತಿಂಗಳಿಗೊಮ್ಮೆ ಬಿಡುಗಡೆಗೊಳಿಸುವಂತೆ ಮನವಿ ಮಾಡಲಾಯಿತು. ಇದರೊಂದಿಗೆ ಮನರೇಗಾ ಯೋಜನೆಯಡಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಹೆಚ್ಚು ತೆಗೆದುಕೊಳ್ಳುವುದು, ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಲಹೆ ನೀಡಲಾಯಿತು.
`ನಂಜರಾಯಪಟ್ಟಣ ಗ್ರಾ.ಪಂ.ಅಧ್ಯಕ್ಷರು ಮಾತನಾಡಿ ಜಿ.ಪಂ.ಸಿಇಒ ಅವರು ಖುದ್ದು ಅಧ್ಯಕ್ಷರು-ಉಪಾಧ್ಯಕ್ಷರಿಂದಲೇ ಅಭಿವೃದ್ಧಿ ಕುರಿತು ಸಭೆ ನಡೆಸಿರುವುದು ಇದೇ ಮೊದಲು. ಇಂತಹ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿಯೂ ತಾಲೂಕು ಮಟ್ಟದಲ್ಲಿ ಹೆಚ್ಚಿನ ಸಭೆಗಳು ನಡೆದಲ್ಲಿ ಗ್ರಾಮಗಳು ಮತ್ತಷ್ಟು ಪ್ರಗತಿ ಕಾಣಲಿದೆ ಎಂದು ಅಭಿಪ್ರಾಯಪಟ್ಟರು.’
ಸಭೆ ಬಳಿಕ ಮಾತನಾಡಿದ ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜುಲೈ ತಿಂಗಳ ಅಂತ್ಯಕ್ಕೆ ಈಗಿನ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರವಧಿ ಮುಕ್ತಾಯವಾಗಲಿದ್ದು, ನಿಸ್ವಾರ್ಥ ಮನೋಭಾವದಿಂದ ಜನಪರ ಕಾರ್ಯ ಕೈಗೊಂಡ ಸರ್ವರಿಗೂ ಶುಭಾಶಯಗಳನ್ನು ತಿಳಿಸಿದರು.
ಪಿಡಿಒಗಳಿಗೆ ಸೂಚನೆ: ಬಳಿಕ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಸಭೆಯಲ್ಲಿ ಚರ್ಚಿಸಲಾದ ವಿವಿಧ ಅಭಿವೃದ್ಧಿ ಯೋಜನೆಗಳು ಮತ್ತು ಮೂಲಭೂತ ಸೌಕರ್ಯಗಳ ಕುಂದುಕೊರತೆಗಳನ್ನು ನಿಗದಿತ ಕಾಲಮಿತಿಯೊಳಗೆ ಸರಿಪಡಿಸುವಂತೆ ಜಿ.ಪಂ.ಸಿಇಒ ಸೂಚಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತೆರಿಗೆ ವಸೂಲಾತಿ, 15 ನೇ ಹಣಕಾಸು ಯೋಜನೆ, ಮಹಾತ್ಮಗಾಂಧಿ ನರೇಗಾ, ವಸತಿ, ಜೆ.ಜೆ.ಎಂ, ಡಿಜಿಟಲ್ ಗ್ರಂಥಾಲಯ, ದೂರದೃಷ್ಟಿ ಯೋಜನೆ ಮತ್ತು ಅಮೃತ ಸರೋವರ ಕಾಮಗಾರಿಗಳನ್ನು ನಿಯಮಾನುಸಾರ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು. ಹೆಚ್ಚಿನ ಮುತುವರ್ಜಿ ವಹಿಸಿ ಗುರಿ ಸಾಧಿಸಲು ನಿರ್ದೇಶನ ನೀಡಿದರು.
ಪ್ರಶಸ್ತಿ ವಿತರಣೆ: ಇದೇ ವೇಳೆ 2021-22ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಡಾ.ಎಸ್.ಆಕಾಶ್ ಗೌರವಿಸಿದರು.
ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾ.ಪಂ.ನ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಯೋಜನಾ ನಿರ್ದೇಶಕರಾದ ಜಗದೀಶ್, ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.