Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಉತ್ತಮ ಮಳೆ : ಆರೆಂಜ್ ಅಲರ್ಟ್ ಘೋಷಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ಉತ್ತಮ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಜುಲೈ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 393 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 956 ಮಿ.ಮೀ ಮಳೆಯಾಗಿತ್ತು.
ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಜು ಮುಸುಕಿದ ವಾತಾವರಣದೊಂದಿಗೆ ಶೀತ ಗಾಳಿ ಬೀಸುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಭಾಗಮಂಡಲದ ಮೇಲುಸೇತುವೆ ಕಾಮಗಾರಿ ಅಪೂರ್ಣಗೊಂಡ ಕಾರಣ ರಸ್ತೆ ಕೆಸರುಮಯವಾಗಿದ್ದು, ವಾಹನಗಳ ಚಾಲನೆ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆ ಉಂಟಾಗಿದೆ.
ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲೂ ಮಳೆಯಾಗುತ್ತಿದೆ. ಗಾಳಿ ಬೀಸದೆ ಇರುವ ಕಾರಣ ದೊಡ್ಡಮಟ್ಟದ ಅನಾಹುತ ಎಲ್ಲೂ ಸಂಭವಿಸಿಲ್ಲ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಇದರಿಂದ ಕುಗ್ರಾಮಗಳ ಮನೆಗಳ ವಿದ್ಯುತ್ ಕಡಿತಗೊಂಡು ನಿವಾಸಿಗಳು ಕಾರ್ಗತ್ತಲಲ್ಲಿ ದಿನ ದೂಡುವಂತ್ತಾಗಿದೆ.
ಮಡಿಕೇರಿ ನಗರದಲ್ಲಿ ಮಂಜು ಮುಸುಕಿದ ವಾತಾವರಣ ಮತ್ತು ಮೈಕೊರೆಯುವ ಚಳಿ ಇದ್ದು, ನಿರಂತರವಾಗಿ ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಬೃಹತ್ ತಡೆಗೋಡೆ ಕಳೆದ ವರ್ಷದಂತೆ ಈ ಬಾರಿಯೂ ಆತಂಕವನ್ನು ಸೃಷ್ಟಿಸಿದೆ. ಸಂಬಂಧಿಸಿದ ಎಂಜಿನಿಯರ್ ಗಳು ತಡೆಗೋಡೆಗೆ ಹಾನಿಯಾಗದಂತೆ ಟಾರ್ಪ್‍ಗಳ ರಕ್ಷಣೆಯನ್ನು ನೀಡಿದ್ದಾರೆ.

ಸತತ ಮಳೆಯಾಗುತ್ತಿರುವುದರಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯಲ್ಲಿ ರಸ್ತೆಯ ಕೆಲವು ಭಾಗಗಳಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಂಡಿದ್ದು, ಮುಂಜಾಗೃತಾ ಕ್ರಮವಾಗಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾಮಳೆಯಿಂದ ಎದುರಾಗುವ ಅನಾಹುತಗಳನ್ನು ಎದುರಿಸಲು ಎನ್‍ಡಿಆರ್‍ಎಫ್, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಚೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ. ಬೆಟ್ಟಗುಡ್ಡ ಮತ್ತು ನದಿತೀರದ ನಿವಾಸಿಗಳ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಗ್ರಾ.ಪಂ ಗಳು ಕೂಡ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿವೆ.
ಮಳೆ ತಡವಾಗಿ ಆರಂಭಗೊಂಡಿರುವುದರಿಂದ ಜಿಲ್ಲೆಯಲ್ಲಿ ಸುಮಾರು 500 ಮಿ.ಮೀ ನಷ್ಟು ಮಳೆಯ ಕೊರತೆ ಉಂಟಾಗಿದೆ. ಕೊಡಗಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದರೂ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿಲ್ಲ. ಮಾನ್ಸೂನ್ ಪ್ರವಾಸೋದ್ಯಮದ ಹೆಸರಿನಲ್ಲಿ ಮತ್ತು ಚಳಿ, ಮಳೆಯ ಅನುಭವಕ್ಕಾಗಿ ರಾಜ್ಯ ಹಾಗೂ ಹೊರ ರಾಜ್ಯದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2823.99 ಅಡಿಗಳು. ಕಳೆದ ವರ್ಷ ಇದೇ ದಿನ 2854.37 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 10.20 ಮಿ.ಮೀ., ಕಳೆದ ವರ್ಷ ಇದೇ ದಿನ 8.20 ಮಿ.ಮೀ. ಇಂದಿನ ನೀರಿನ ಒಳಹರಿವು 1518 ಕ್ಯುಸೆಕ್, ಕಳೆದ ವರ್ಷ ಇದೇ ದಿನ 9497 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12866 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Follow us Follow us
Share. WhatsApp Facebook Twitter Email Telegram Copy Link

Related Posts

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.28 NEWS DESK : ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನವೆಂಬರ್, 01…

ಬಿ.ಎಸ್ಸಿ ನರ್ಸಿಂಗ್ ಕೋರ್ಸ್‌ನ ಖಾಲಿ ಸೀಟುಗಳ ಭರ್ತಿಗೆ ವಾಕ್‌-ಇನ್ ಪ್ರವೇಶಾತಿ

ಅಕ್ಟೋಬರ್ 28, 2026

ವಿರಾಜಪೇಟೆಯಲ್ಲಿ ಅ.31 ರಂದು ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 28, 2026

ಪೌರಕಾರ್ಮಿಕರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 28, 2026

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.