ಮಡಿಕೇರಿ ಜು.5 : ಪಾನಮತ್ತ ಕಾರ್ಮಿಕನೊಬ್ಬ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೋಕೇರಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಭರತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಪ್ರೇಮ ಹಾಗೂ ಮಗುವನ್ನು ನಾಪೋಕ್ಲು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ಸಮೀಪದ ಕೋಕೇರಿ ಗ್ರಾಮದ ತೋಟದ ಲೈನ್ ಮನೆಯಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಪಾನಮತ್ತನಾಗಿ ಬಂದು ಊಟದ ವಿಚಾರಕ್ಕೆ ಕಲಹ ನಡೆಸಿ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.








