Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ : ಜು.8 ರಂದು ಲೋಕ್ ಅದಾಲತ್*
ಇತ್ತೀಚಿನ ಸುದ್ದಿಗಳು

*ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ : ಜು.8 ರಂದು ಲೋಕ್ ಅದಾಲತ್*

July 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.6 : ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಜು.8 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ಅವರು ಕೋರಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾಯಾಧೀಶರು ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದು ತಿಳಿಸಿದರು.
ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನೆ ಪ್ರಕರಣ ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಜೂನ್, 01 ಕ್ಕೆ ಕೊನೆಗೊಂಡಂತೆ 18,175 ವಿವಿಧ ಪ್ರಕರಣಗಳು ದಾಖಲಾಗಿದ್ದು, 3,031 ರಾಜೀಯಾಗಬಲ್ಲ ಪ್ರಕರಣಗಳು ಇವೆ. ಜೊತೆಗೆ ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಧಾನದ ಮೂಲಕ 2,635 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಸಾದ್ ಅವರು ಹೇಳಿದರು.
ಸಮಯ, ವೆಚ್ಚ ಮತ್ತು ನ್ಯಾಯದಾನಕ್ಕಾಗಿ ರಾಷ್ಟ್ರೀಯ ಲೋಕ ಅದಾಲತ್ ಅವಕಾಶವನ್ನು ಅರ್ಹರು ಪಡೆದುಕೊಳ್ಳುವಂತೆ ಪ್ರಸಾದ್ ಅವರು ಮನವಿ ಮಾಡಿದರು.
ಈ ಹಿಂದೆ ಫೆಬ್ರವರಿ, 11 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಸಂದರ್ಭದಲ್ಲಿ 1,295 ಪ್ರಕರಣಗಳು ಬಾಕಿ ಇದ್ದವು, ಜೊತೆಗೆ 4,902 ವ್ಯಾಜ್ಯ ಪೂರ್ವ ಪ್ರಕರಣಗಳು ಒಟ್ಟು 6,197 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಹೇಳಿದರು.
ಸರ್ಕಾರ ಸಂಚಾರಿ ನಿಯಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇ.50 ರಷ್ಟು ದಂಡವನ್ನು ಕಡಿಮೆ ಮಾಡಿದ್ದು, ಈ ಪ್ರಯೋಜನವನ್ನು ಸಂಬಂಧಪಟ್ಟವರು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.
ಮತ್ತಷ್ಟು ಮಾಹಿತಿ: ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ.50 ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಸಾದ್ ಅವರು ಮಾಹಿತಿ ನೀಡಿದರು.
2023 ರ ಫೆಬ್ರವರಿ, 11 ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ 2023 ರ ಫೆಬ್ರವರಿ 11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಮತ್ತೊಮ್ಮೆ ಶೇ.50 ರಿಯಾಯಿತಿ ನೀಡಲಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಜಯಲಕ್ಷ್ಮಿ, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಎನ್.ಎ.ನಾಗೇಶ್ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಜವಾಹರ ನವೋದಯ ವಿದ್ಯಾಲಯಕ್ಕೆ ಶೇ.100 ಫಲಿತಾಂಶ*
Next Article *ಸಂಚಾರ ನಿಯಮ ಉಲ್ಲಂಘನೆ : ರಿಯಾಯಿತಿಯಲ್ಲಿ ದಂಡ ಪಾವತಿಸಲು ಅವಕಾಶ*

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.