Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ : ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ : ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್*

ಜುಲೈ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 : ಇತ್ತೀಚಿನ ವರ್ಷಗಳಲ್ಲಿ ಕೆಲವು ಯುವಜನರು ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ನಿಯಂತ್ರಣ ಮಾಡಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಬಳಿ ಇರುವ ಸಭಾಂಗಣದಲ್ಲಿ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮಾದಕ ವಸ್ತು ಬಳಕೆ ನಿಯಂತ್ರಣ ಕುರಿತು ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
`ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 35 ರಿಂದ 40 ಪ್ರಕರಣಗಳನ್ನು ಪತ್ತೆ ಹಚ್ಚಿ, 67 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.’
ಯುವ ಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಲಹೆ ಮಾಡಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಎಲ್ಲರ ಆರೋಗ್ಯ ಚೆನ್ನಾಗಿದ್ದಲ್ಲಿ ಕುಟುಂಬದ ನಿರ್ವಹಣೆ ಉತ್ತಮವಾಗಿರುತ್ತದೆ. ಇದರಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಯಾರೂ ಸಹ ಮರೆಯುವಂತಿಲ್ಲ ಎಂದು ಹೇಳಿದರು.
ಗಾಂಜಾ, ಹೆರಾಯಿನ್, ಬ್ರೌನ್ ಸುಗರ್, ಚರಾಸ್, ಎಲ್‍ಎಸ್‍ಡಿ ಮತ್ತಿತರ ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳ ಸಂಬಂಧ ಸರಿಯಾದ ತನಿಖೆ ಮಾಡಿ, ವರದಿ ಸಲ್ಲಿಸುವಂತಾಗಬೇಕು ಎಂದು ಸುಂದರರಾಜ್ ಹೇಳಿದರು.

ತಮ್ಮ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಜಾಗೃತಿ ಮೂಡಿಸಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ದುಶ್ಚಟದಿಂದ ದೂರವಿರುವಂತೆ ನೋಡಿಕೊಳ್ಳಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಆಧುನಿಕತೆಗೆ ತಕ್ಕಂತೆ ದುಷ್ಪರಿಣಾಮಕ್ಕೆ ತುತ್ತಾಗುವುದು ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣ ಮಾಡಬೇಕು ಎಂದರು.
ರಾಜ್ಯ ಮಟ್ಟದ ಸಮನ್ವಯ ಸಂಸ್ಥೆಯ ಯೋಜನೆಯ ಸಂಯೋಜಕರಾದ ಶೈಲಶ್ರೀ ಮಾತನಾಡಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಸಮಾಜವನ್ನು ನಶ ಮುಕ್ತ ಮಾಡಲು ಶ್ರಮಿಸಬೇಕು. ಯೋಗ, ಧ್ಯಾನ, ವ್ಯಾಯಾಮ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ದೈಹಿಕ ಮತ್ತು ಮಾನಸಿಕವಾಗಿ ಪ್ರತಿಯೊಬ್ಬರೂ ಸದೃಢರಾಗಿರಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಹೇಳಿದರು.
ಮನೋ ವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ ಅವರು ಮಾತನಾಡಿ ದುಶ್ಚಟಕ್ಕೆ ತುತ್ತಾದಲ್ಲಿ ಆರೋಗ್ಯವನ್ನು ಕೆಡಿಸಿಕೊಳ್ಳಬೇಕಾಗುತ್ತದೆ. ಇದರಿಂದ ಮಾನಸಿಕ ಅಸ್ವಸ್ಥತೆಯಿಂದ ಜೀವನ ಪೂರ್ತಿ ನರಳಬೇಕಾಗುತ್ತದೆ ಎಂದು ಹೇಳಿದರು.
ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ತಿಳಿದು ಇತರರಿಗೂ ಮಾಹಿತಿ ನೀಡುವಂತಾಗಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು. ಹಿರಿಯ ನಾಗರಿಕರ ಮತ್ತು ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲ ಮಾತನಾಡಿದರು.
ಮಡಿಕೇರಿ ಗ್ರಾಮಾಂತರ ವೃತ್ತದ ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ ಅವರು ಪ್ರತಿಜ್ಞಾ ವಿದಿ ಬೋಧಿಸಿದರು. ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಹಾಗೂ ದುಶ್ಚಟಗಳನ್ನು ತಡೆಯುವ ಜಾಗೃತಿ ಹಾಗೂ ಸದಾಚಾರಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿಯನ್ನು ತಿಳಿದುಕೊಂಡಿದ್ದೇನೆ.
ಆದರ್ಶ ವ್ಯಕ್ತಿಯ ಗುಣನಡತೆಗಳು, ಮಾನವೀಯ ಮೌಲ್ಯ ಮತ್ತು ಭಾರತೀಯ ಪರಂಪರೆ, ಶಿಷ್ಟಾಚಾರಗಳ ಬಗ್ಗೆ ಈ ದಿನ ನಾನು ತಿಳಿದುಕೊಂಡಿದ್ದೇನೆ. ಇವುಗಳನ್ನು ನನ್ನ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಳ್ಳುತ್ತೇನೆ. ನಾನು ಮಾದಕ ವಸ್ತುಗಳ ಸೇವನೆ ಮಾಡುವುದಿಲ್ಲ. ಜೊತೆಗೆ ನಾನಿರುವ ಸುತ್ತ ಮುತ್ತಲಿನ ಪರಿಸರದಲ್ಲಿ ಈ ಕುರಿತು ಅರಿವು ಮೂಡಿಸುತ್ತೇನೆ. ಹಾಗೂ ಈ ದೇಶದ ಸತ್ಪ್ರಜೆಯಾಗಿ ಬಾಳುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ. ಪೊಲೀಸ್ ಇನ್ಸ್‍ಪೆಕ್ಟರ್ ಉಮೇಶ್, ಪೊಲೀಸ್ ಠಾಣಾ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.