Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜಿಲ್ಲಾ ಕೌಶಲ್ಯ ಸಮಿತಿ ಸಭೆ : ಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*
ಇತ್ತೀಚಿನ ಸುದ್ದಿಗಳು

*ಜಿಲ್ಲಾ ಕೌಶಲ್ಯ ಸಮಿತಿ ಸಭೆ : ಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ರೂಪಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ*

July 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಂಪನ್ಮೂಲಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿ ಮಾಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ವೆಂಕಟ್ ರಾಜಾ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರವಾಸೋದ್ಯಮ ಕ್ಷೇತ್ರದ ಜೊತೆಗೆ, ಆಹಾರ ಉತ್ಪಾದನೆ, ಹಾಸ್ಪಿಟಾಲಿಟಿ, ಕೃಷಿ ಕೌಶಲ್ಯ, ವಾಣಿಜ್ಯ, ಹೀಗೆ ವಿವಿಧ ರೀತಿಯ ವೃತ್ತಿ ಕೌಶಲ್ಯ ತರಬೇತಿಯನ್ನು ಯುವಜನರಿಗೆ ನೀಡಿ, ಉದ್ಯೋಗ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಉದ್ಯೋಗಾಧಾರಿತ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು.
ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಮಾಜಿಕ ಅರಣ್ಯ, ಹಿಂದುಳಿದ ವರ್ಗ, ಹೀಗೆ ಹಲವು ಇಲಾಖೆಗಳ ವ್ಯಾಪ್ತಿಯಲ್ಲಿ ವೃತ್ತಿಪರ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವ್ಯಾಸಂಗ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳ ಸಂಖ್ಯೆ ಹಾಗೂ ಲಭ್ಯವಿರುವ ಕೋರ್ಸ್‍ಗಳ ಮಾಹಿತಿಯನ್ನು ಜಿಲ್ಲಾ ವೆಬ್‍ಸೈಟ್‍ನಲ್ಲಿ ಪ್ರಕಟಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಎಂ.ಧನಂಜಯ ಜಿಲ್ಲೆಯಲ್ಲಿ ಬಾಳೆ ಕೃಷಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಬಾಳೆ ದಿಂಡಿನಿಂದ ಬಟ್ಟೆ ತಯಾರು ಮಾಡಬಹುದಾಗಿದ್ದು, ಇದರಿಂದ ಉದ್ಯೋಗ ಕಲ್ಪಿಸುವತ್ತ ಚಿಂತಿಸಬೇಕಿದೆ ಎಂದು ಸಲಹೆ ಮಾಡಿದರು.
ಯುವಜನರಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ, ಕೌಶಲ್ಯ ಆಧಾರಿತ ವೃತ್ತಿ ತರಬೇತಿ ನೀಡುವಂತಾಗಬೇಕು. ಉದ್ಯೋಗ ಮೇಳದ ಸಂದರ್ಭದಲ್ಲಿ ಯುವಜನರಿಗೆ ಆಸಕ್ತಿ ಇರುವ ಕ್ಷೇತ್ರದ ಕಂಪನಿಗಳನ್ನು ಆಹ್ವಾನಿಸಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ನಗರ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಹೇಳಿದರು.
ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಮ್ಮ ಸಲಹೆಗಳನ್ನು ಕ್ರಿಯಾಯೋಜನೆಯಲ್ಲಿ ಸೇರ್ಪಡೆ ಮಾಡಿ, ಸ್ಥಳೀಯ ಬೇಡಿಕೆಗೆ ತಕ್ಕಂತೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಯುವ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹಲವು ವೃತ್ತಿಪರ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ವಿವಿಧ ಸಂಘ ಸಂಸ್ಥೆಗಳ ಹಮ್ಮಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ ಸಿ.ಎಂ.ಉಮಾ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೇಡಿಕೆಗೆ ತಕ್ಕಂತೆ ಜಾಬ್ ರೋಲ್‍ಗಳನ್ನು ಗುರುತಿಸಲಾಗಿದೆ. ಅದರಂತೆ ಪ್ರಸಕ್ತ ಸಾಲಿನಲ್ಲಿ ವೃತ್ತಿ ಕೌಶಲ್ಯ ತರಬೇತಿ ನೀಡಲಾಗುತ್ತದೆ ಎಂದರು.
ಈ ಹಿಂದೆ ಗೋಣಿಕೊಪ್ಪ, ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಸುಮಾರು 55 ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಚಿಕ್ಕಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ, ನಗರದ ಸದ್ಗುರು ತರಬೇತಿ ಸಂಸ್ಥೆ ನೋಂದಣಿ ಮಾಡಿಕೊಂಡಿವೆ ಎಂದು ಹೇಳಿದರು.
ಪ್ರಸಕ್ತ ಸಾಲಿಗೆ ಜಿಲ್ಲಾ ಕೌಶಲ್ಯಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಿದ್ದಪಡಿಸುವ ಬಗ್ಗೆ ಅನುಮೋದನೆ ಪಡೆಯಲಾಯಿತು.
ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಲಿಂಗರಾಜು, ಉಪ ನಿರ್ದೇಶಕರಾದ ರಘು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಡಿಡಿಪಿಐ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ವಿಜಯ, ತಹಶೀಲ್ದಾರರಾದ ಎಸ್.ಎನ್.ನರಗುಂದ, ಬಿಸಿಎಂ ಅಧಿಕಾರಿ ಮಂಜುನಾಥ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು : ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ : ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್*
Next Article *ಹೋಂ-ಸ್ಟೇಗಳ ನೋಂದಣಿ ಕಡ್ಡಾಯ : ಜು.30 ಕೊನೆ ದಿನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.